NEWSನಮ್ಮರಾಜ್ಯರಾಜಕೀಯ

ಸಂಪುಟ ವಿಸ್ತರಣೆಗೆ ಇನ್ನೂ ಸಿಕ್ಕಿಲ್ಲ ಸಿಎಂ ಬಿಎಸ್‌ವೈಗೆ ಗ್ರೀನ್‌ ಸಿಗ್ನಲ್‌

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡಿ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ವಿವರಿಸಿರುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಇಂದು ನ್ಯೂಡೆಲ್ಲಿಗೆ ಸಚಿವ ಸಂಪುಟ ವಿಸ್ತರಣೆ ಸಂಬಂಧ ಮಾತನಾಡಲು ಆಗಮಿಸಿದ್ದ ಯಡಿಯೂರಪ್ಪ ಅವರು ಜೆ.ಪಿ.ನಡ್ಡಾ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ, 20 ನಿಮಿಷಗಳ ಕಾಲ ಚರ್ಚೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಎಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ. ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ನನ್ನ ಅಭಿಪ್ರಾಯವನ್ನು ತಿಳಿಸಿದ್ದೇನೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿದ್ದೇನೆ. ಅಮಿತ್ ಶಾ ಅವರನ್ನು ಭೇಟಿ ಮಾಡುತ್ತಿಲ್ಲ. ಈಗ ನೇರವಾಗಿ ಬೆಂಗಳೂರಿಗೆ ತೆರಳುತ್ತಿದ್ದೇನೆ ಎಂದು ಹೇಳಿದರು.

ಎರಡು ಕ್ಷೇತ್ರಗಳ ಉಪಚುನಾವಣೆ ಮುಗಿದ ಬಳಿಕ ಸಿಎಂ ಬಿಎಸ್​ವೈ ಅವರು ಸಂಪುಟ ವಿಸ್ತರಣೆ ಅಥವಾ ಪುನಾರಚನೆಗಾಗಿ ಅನುಮತಿ ಪಡೆಯಲು ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದಾರೆ. ಆದರೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಬಿಎಸ್​ವೈ ಅವರ ಅಭಿಪ್ರಾಯ ಹಾಗೂ ಪಟ್ಟಿಯನ್ನು ಪಡೆದು, ಇನ್ನೆರಡು ದಿನಗಳಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ನಾಳೆ ಅಥವಾ ನಾಳಿದ್ದು, ಹೈಕಮಾಂಡ್​ನಿಂದ ನಿರ್ದೇಶನ ಬಂದ ಬಳಿಕ ಸಿಎಂ ಮುಂದಿನ ಕ್ರಮ ತೆಗೆದುಕೊಳ್ಳಲಿದ್ದಾರೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?