NEWSನಮ್ಮಜಿಲ್ಲೆನಮ್ಮರಾಜ್ಯ

ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ

ವಿಜಯಪಥ ಸಮಗ್ರ ಸುದ್ದಿ

ದಾವಣಗೆರೆ: ಒಮ್ಮೆಗೆ ಬಂದ ಗುಡುಗು ಸಿಡಿಲಿನ ಆರ್ಭಟಕ್ಕೆ ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿರುವ ಘಟನೆ ಹೊನ್ನಾಳಿ ತಾಲೂಕಿನ ಮಲೆಕುಂಬಳೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ನಾಗರಾಜಪ್ಪ (56) ಮೃತರು. ರಾತ್ರಿ ನಾಗರಾಜಪ್ಪ ಮನೆಯ ಮುಂದೆ ನಿಂತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಸಿಡಿಲು ಬಡಿದಿದೆ.

ಆ ಶಬ್ದಕ್ಕೆ ಬೆಚ್ಚಿ, ಹೃದಯಾಘಾತವಾಗಿದ್ದು, ಆ ಸ್ಥಳದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಈ ಘಟನೆ ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಸಂಬಂಧ ಮುಂದಿನ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವಿ.ಡಿ.ಸತೀಶನ್ ಇಂದು ಕೇರಳದ ನೂತನ ಸಿಎಂಆಗಿ ವಿ.ಡಿ. ಸತೀಶನ್‌ ಪ್ರಮಾಣ ವಚನ ಸ್ವೀಕಾರ KSRTC ಜಂಟಿ ಸಮಿತಿ ಒಳೊಪ್ಪಂದ ಬಯಲು; 2.5 ಕೋಟಿ ರೂ.ಗೆ ಸೇಲಾದರ ನೀಚರು, ನೌಕರರ ದಾರಿತಪ್ಪಿಸುತ್ತಿರುವುದರ ಹಿಂದಿನ ಮರ್ಮ... ವಿಜಯಪಥ ವರದಿ ಪರಿಣಾಮ: ಎಚ್ಚೆತ್ತ BMTC ಅಧಿಕಾರಿಗಳು- ಆದೇಶದ ದಿನಾಂಕಕ್ಕಿಂತ ಮೂರು ದಿನ ಮುಂಚಿತವಾಗಿಯೇ ನೌಕರರಿಗೆ 11 ತ... ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರ ತಂತ್ರ: ಬಸ್ ಸಂಚಾರ ನಿಲ್ಲಿಸಿ ಮುಷ್ಕರಕ್ಕೆ ಮುಂದಾಗಿರುವ ನೌಕರರಿಗೆ ಶಾಕ್ ... KSRTC: ಸರ್ಕಾರದ ಸಾಧನ ಸಮಾವೇಶದಲ್ಲಿ ಕಪ್ಪು ಬಾವುಟ, ಕಪ್ಪು ಪಟ್ಟಿ ಧರಿಸಿ ಸಾರಿಗೆ ನೌಕರರ ಪ್ರತಿಭಟನೆ !? BMTC ನೌಕರರಿಗೆ ಮೇ 19ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ್ರಮ- ಎಂಡಿ ಆದೇಶಕ್ಕೂ ಕಿಮ್ಮತ್ತಿಲ್ಲದರ ಪರಿಣಾಮ ಈ ವಿಳಂಬ! ಮೇ 20ರಿಂದ ಸಾರಿಗೆ ನೌಕರರ ಮುಷ್ಕರ ಮಾಡೇ ತೀರುತ್ತೇವೆ: ವಿಜಯಭಾಸ್ಕರ್ KSRTC: ಮೇ 20 ರಿಂದ ಹಮ್ಮಿಕೊಂಡಿರುವ ಮುಷ್ಕರಕ್ಕೆ ಬಿಎಂಟಿಸಿ-ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘ ಬೆಂಬಲ