NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ ಮತ್ತೊಂದು KSRTC ನೌಕರರ ಸಂಘ

20.05.2026 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ ನಂತರ ಜಂಟಿ ಕ್ರಿಯಾ ಸಮಿತಿಯ ಒಳಗೆ ಭಿನ್ನಾಭಿಪ್ರಾಯಗಳು, ಅಸಮಾಧಾನಗಳು ಭುಗಿಲೆದ್ದಿರುವುದು ಎಲ್ಲರಿಗೂ ತಿಳಿದ ವಿಷಯವಾಗಿದೆ. ಅದರಿಂದ ಯಾವ ಉದ್ದೇಶಕ್ಕಾಗಿ ಜಂಟಿ ಕ್ರಿಯಾ ಸಮಿತಿಗೆ ನಾವು ಬೆಂಬಲ ನೀಡಿದ್ದೇವೋ ಅದೇ ಉದ್ದೇಶಗಳು ಈಡೇರುತ್ತಿಲ್ಲ ಮತ್ತು ನೌಕರರಿಗೆ ನ್ಯಾಯ ಒದಗಿಸಲು ಸಾಧ್ಯವಿಲ್ಲ...

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಮ್ಮ ಸಂಘವು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯಿಂದ ಈ ತಕ್ಷಣದಿಂದ ಹೊರಬಂದಿದೆ. ಹೀಗಾಗಿ ಮೇ 20ರ ಮುಷ್ಕರದಲ್ಲಿ ನಾವು ಭಾಗವಹಿಸುತ್ತಿಲ್ಲ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘ ತಿಳಿಸಿದೆ.

ಈ ಸಂಬಂಧ ಇಂದು ಮೇ 19ರಂದು ಕೆಎಸ್‌ಆರ್‌ಟಿಸಿ ಎಂಡಿ ಅವರಿಗೆ ಸಂಘದ ಅಧ್ಯಕ್ಷ ಎಚ್‌.ಆರ್‌.ಜಗದೀಶ್‌ ಪತ್ರ ಬರೆದಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘವು ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯಿಂದ ಹೊರಬರುತ್ತಿರುವ ಬಗ್ಗೆ ಖಚಿತಪಡಿಸಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ನಮ್ಮ ಸಂಘವು ಸುಮಾರು ನಾಲ್ಕು ವರ್ಷಗಳಿಂದ ಸಾರಿಗೆ ನೌಕರರ ಹಿತಾಸಕ್ತಿಗಾಗಿ ಹಲವು ಹೋರಾಟವನ್ನು ಮಾಡಿಕೊಂಡು ಬಂದಿದ್ದು, 2020 ಮತ್ತು 2024ರ ವೇತನ ಒಪ್ಪಂದದ ಸಂಬಂಧ ಈ ಜಂಟಿ ಕ್ರಿಯಾ ಸಮಿತಿಗೆ ಸಂಪೂರ್ಣ ಬೆಂಬಲವನ್ನು ನೀಡಿ, ಜಂಟಿ ಸಮಿತಿಯ ಒಂದು ಕ್ರಿಯಾಶೀಲ ಭಾಗವಾಗಿ ಕಾರ್ಮಿಕರ ಹಿತಕ್ಕಾಗಿ ಕೆಲಸ ಮಾಡಿರುವುದು ಸರಿಯಷ್ಟೇ.

20.05.2026 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ ನಂತರ ಜಂಟಿ ಕ್ರಿಯಾ ಸಮಿತಿಯ ಒಳಗೆ ಭಿನ್ನಾಭಿಪ್ರಾಯಗಳು, ಅಸಮಾಧಾನಗಳು ಭುಗಿಲೆದ್ದಿರುವುದು ಎಲ್ಲರಿಗೂ ತಿಳಿದ ವಿಷಯವಾಗಿದೆ. ಅದರಿಂದ ಯಾವ ಉದ್ದೇಶಕ್ಕಾಗಿ ಜಂಟಿ ಕ್ರಿಯಾ ಸಮಿತಿಗೆ ನಾವು ಬೆಂಬಲ ನೀಡಿದ್ದೇವೋ ಅದೇ ಉದ್ದೇಶಗಳು ಈಡೇರುತ್ತಿಲ್ಲ ಮತ್ತು ನೌಕರರಿಗೆ ನ್ಯಾಯ ಒದಗಿಸಲು ಸಾಧ್ಯವಿಲ್ಲವೆನ್ನುವುದು ನಮಗೆ ತಿಳಿದಿದೆ.

ಮುಂದುವರೆದು, ಈಗಾಗಲೇ ಜಂಟಿ ಕ್ರಿಯಾ ಸಮಿತಿಯು ಕರೆ ನೀಡಿರುವ ಮುಷ್ಕರದ ಸಂಬಂಧ 18.05.2026 ರಂದು ಕಾರ್ಮಿಕ ಆಯುಕ್ತರು ಸಂಧಾನ ಸಭೆಯ ನಡೆಸಿ, ಜಂಟಿ ಕ್ರಿಯಾ ಸಮಿತಿಯ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದು, ಆದಷ್ಟು ಬೇಗ ಬಗೆಹರಿಸುವುದಾಗಿ ಕಾಲಾವಕಾಶ ಕೋರಿ ಮುಂದಿನ ಸಭೆಯನ್ನು ಮೇ 25ಕ್ಕೆ ನಿಗದಿಪಡಿಸಿದ್ದಾರೆ.

ನಂತರ, ವ್ಯವಸ್ಥಾಪಕ ನಿರ್ದೇಶಕರು, ಮೇ 18ರಂದು ಅಂದರೆ ನಿನ್ನೆ ರಾತ್ರಿ 7.50 ರಂದು ನಮ್ಮ ಜತೆ ಸಭೆ ನಡೆಸಿ, ಸರ್ಕಾರದ ಕಾರ್ಯ ಕ್ರಮಗಳು ಮುಗಿದ ನಂತರ ಮುಖ್ಯಮಂತ್ರಿಗಳ ಮತ್ತು ಸಾರಿಗೆ ಸಚಿವರನ್ನು ನಾನೇ ಅವರ ಮನವೊಲಿಸಿ ಆದಷ್ಟು ಬೇಗ ತಮ್ಮ ಬೇಡಿಕೆಗಳ ಬಗ್ಗೆ ಮಾತುಕತೆ ನಡೆಸಲು ಅವಕಾಶ ಕಲ್ಪಿಸುವುದಾಗಿ ಗಟ್ಟಿ ಭರವಸೆಯನ್ನು ನೀಡಿದ್ದಾರೆ. .

ಆದ್ದರಿಂದ, ವ್ಯವಸ್ಥಾಪಕ ನಿರ್ದೇಶಕರ ಮಾತಿಗೆ ಗೌರವ ನೀಡುವ ಸಲುವಾಗಿ ಮತ್ತು ಅವರ ಮೇಲೆ ನಂಬಿಕೆ ಮತ್ತು ಭರವಸೆಯನ್ನು ಇಟ್ಟು ನಮ್ಮ ಸಂಘದ ಪದಾಧಿಕಾರಿಗಳೆಲ್ಲರೂ ಮೇ 18ರಂದು ರಾತ್ರಿ 11 ಗಂಟೆಗೆಯಲ್ಲಿ ಸಭೆ ಸೇರಿ ಚರ್ಚಿಸಿದ ಬಳಿಕ ನಾವೆಲ್ಲರೂ ನೀಡಿರುವ ಸರ್ವಾನುಮತದ ಅಭಿಪ್ರಾಯದಂತೆ, ಜಂಟಿ ಕ್ರಿಯಾ ಸಮಿತಿಗೆ ನೀಡಿರುವ ಮುಷ್ಕರದ ಬೆಂಬಲವನ್ನು ಈ ತಕ್ಷಣದಿಂದಲೇ ಹಿಂಪಡೆಯುವುದರ ಜತೆಗೆ, ಜಂಟಿ ಕ್ರಿಯಾ ಸಮಿತಿಯಿಂದ ಹೊರಬರಲು ನೌಕರರ ಸಂಘವು ತೀರ್ಮಾನಿಸಿರುವ ವಿಷಯವನ್ನು ತಮ್ಮ ಗಮನಕ್ಕೆ ತರಲು ಬಯಸುತ್ತೇವೆ ಎಂದು ಜಗದೀಶ್‌ ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಜಂಟಿ ಕ್ರಿಯಾ ಸಮಿತಿಗೆ ಶಾಕ್‌: KSRTC ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈ ಕೋರ್ಟ್‌ ತಡೆ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ ಮತ್ತೊಂದು KSRTC ನೌಕರರ ಸಂಘ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಸಾವು ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವಿ.ಡಿ.ಸತೀಶನ್ ಇಂದು ಕೇರಳದ ನೂತನ ಸಿಎಂಆಗಿ ವಿ.ಡಿ. ಸತೀಶನ್‌ ಪ್ರಮಾಣ ವಚನ ಸ್ವೀಕಾರ KSRTC ಜಂಟಿ ಸಮಿತಿ ಒಳೊಪ್ಪಂದ ಬಯಲು; 2.5 ಕೋಟಿ ರೂ.ಗೆ ಸೇಲಾದರ ನೀಚರು, ನೌಕರರ ದಾರಿತಪ್ಪಿಸುತ್ತಿರುವುದರ ಹಿಂದಿನ ಮರ್ಮ... ವಿಜಯಪಥ ವರದಿ ಪರಿಣಾಮ: ಎಚ್ಚೆತ್ತ BMTC ಅಧಿಕಾರಿಗಳು- ಆದೇಶದ ದಿನಾಂಕಕ್ಕಿಂತ ಮೂರು ದಿನ ಮುಂಚಿತವಾಗಿಯೇ ನೌಕರರಿಗೆ 11 ತ...