NEWSನಮ್ಮರಾಜ್ಯ

ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಲು ಒತ್ತಾಯಿಸಿ ಪ್ರಧಾನಮಂತ್ರಿಗಳಿಗೆ ಪತ್ರ ಚಳವಳಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮಗಳ ನೌಕರರನ್ನು ಸರ್ಕಾರಿ ನೌಕರರು ಎಂದು ಘೋಷಿಸಿ ಸರ್ಕಾರಿ ಸೌಲಭ್ಯಗಳನ್ನು ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಗುರುವಾರ (ನ.19) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರಧಾನಮಂತ್ರಿಗಳಿಗೆ ಪತ್ರ ಚಳವಳಿ ಹಮ್ಮಿಕೊಂಡಿತು.

ಪತ್ರ ಚಳವಳಿಯಲ್ಲಿ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಈಶಾನ್ಯ, ವಾಯುವ್ಯ ಸಾರಿಗೆ ನಿಗಮಗಳ ನೌಕರರು ಭಾಗವಹಿಸಿ ನಮ್ಮನ್ನು ಸರ್ಕಾರಿ ನೌಕರರು ಎಂದು ಘೋಷಿಸುವಂತೆ ಆಗ್ರಹಿಸಿದರು.

ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳ ಮತ್ತು ನಿಗಮ-ಮಂಡಳಿಗಳ ನೌಕರರು ಕೊರೊನಾದ ತುರ್ತುಪರಿಸ್ಥಿತಿ ಸಮಯದಲ್ಲಿ ಸಕಾಲದಲ್ಲಿ ಸರ್ಕಾರಿ ವೇತನದ ಜತೆಗೆ ಸರ್ಕಾರದ ಹಲವು ಸವಲತ್ತುಗಳನ್ನು ಪಡೆಯುತ್ತಿದ್ದಾರೆ. ಆದರೆ ನಮಗೆ ಮಾತ್ರ ಸೌಲಭ್ಯ ನೀಡುವಲ್ಲಿ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಹೀಗಾಗಿ ನಾವು ಬೇರೆ ದಾರಿ ಕಾಣದೆ ಪ್ರತಿಭಟನೆಯ ಹಾದಿ ತುಳಿಯಬೇಕಿದೆ ಎಂದು ಹೇಳಿದರು.

ಬೆಳಗ್ಗೆ 6 ಗಂಟೆಗೆ ಡಿಪೋಗಳಿಗೆ ಹೋಗಬೇಕು. ರಾತ್ರಿ 8-9ಗಂಟೆಗೆ ಮನೆ ಸೇರಬೇಕು. ಇಂಥ ಪರಿಸ್ಥಿತಿ ನಿರ್ಮಾಣವಾಗಿದ್ದು, ನಾವು ಯಾರಿಗೂ ಹೇಳಿಕೊಳ್ಳಲಾದ ಯಾತನೆಯನ್ನು ಅನುಭವಿಸುತ್ತಿದ್ದೇವೆ. ಹಾಗಾಗಿ ಎಲ್ಲಾ ನೌಕರರು ಒಗ್ಗಟ್ಟಾಗಿ ಹೋರಾಟಕ್ಕೆ ಕೈ ಜೋಡಿಸಿ ನಮ್ಮ ನಮ್ಮ ಹಕ್ಕುಗಳನ್ನು ಪಡೆಯೋಣ ಎಂದು ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ್‌ ಕರೆ ನೀಡಿದರು.

ನಾವು ಇಂದು ಪತ್ರ ಚಳವಳಿಯನ್ನಷ್ಟೇ ಮಾಡುತ್ತಿದ್ದೇವೆ ನಮ್ಮ ಬೇಟಿಕಗಳನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಈಡೇರಿಸದಿದ್ದರೆ ಡಿಸೆಂಬರ್‌ ಮೊದಲ ವಾರದಿಂದ ನಾಲ್ಕು ನಿಗಮಗಳ ಬಸ್‌ ಸಂಚಾರವನ್ನು ಸ್ಥಗಿತಗೊಳಿಸಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಅಕ್ಟೋಬರ್‌ ತಿಂಗಳ ವೇತನ ಇನ್ನೂ ನಮ್ಮ ಖಾತೆಗಳಿಗೆ ಬಂದಿಲ್ಲ. ಈ ನವೆಂಬರ್‌ನಲ್ಲಿ ದೀಪಾಳಿ ಹಬ್ಬ ಬಂದು ಹೋಗಿದೆ ಆದರೆ ನಮ್ಮ ಮನೆಗಳಲ್ಲಿ ಹೋಳಿಗೆಯ ಸಂಭ್ರಮವಿಲ್ಲ. ನಮ್ಮ ಮಕ್ಕಳು ತಂದೆ ತಾಯಿಯಂದಿರು ಈ ಬಾರಿ ಹಬ್ಬ ಆಚರಣೆ ಮಾಡಲಾಗಲಿಲ್ಲವಲ್ಲ ಎಂದು ಕಣ್ಣೀರಾಗಿದ್ದಾರೆ. ಇಂಥ ಪರಿಸ್ಥಿತಿಯಲ್ಲೂ ನಾವು ಸೇವೆಯನ್ನು ನಿಲ್ಲಿಸಿಲ್ಲ ಪ್ರತಿಯೊಬ್ಬ ನೌಕರರೂ ಕರ್ತವ್ಯಕ್ಕೆ ಹಾಜರಾಗುತ್ತಿದ್ದೇವೆ ಎಂದು ತಮ್ಮ ದುಃಖವನ್ನು ತೋಡಿಕೊಂಡರು.

ಇನ್ನು ನಾವು ಸರ್ಕಾರಕ್ಕೆ ಮನವಿ ಸಲ್ಲಿಸಿದರೆ ಅದಕ್ಕೆ ಕಿವಿಯೂ ಇಲ್ಲ ಕಣ್ಣು ಕಾಣುವುದಿಲ್ಲ ಹೀಗಾಗಿ ನಾವು ಉಗ್ರಹೋರಾಟಕ್ಕೆ ದುಮುಕುವುದು ಅನಿವಾರ್ಯವಾಗಿದೆ ಎಂದು ದುಃಖದಿಲ್ಲೇ ಹೇಳಿ, ಮುಂದಿನದಿಗಳಲ್ಲಿ ಸಂಚಾರ ವ್ಯತ್ಯಯವಾಗಿ ನಿಮಗೆ ತೊಂದರೆ ಆದರೆ ನಾವು ಈಗಲೇ ಕ್ಷೇಮೆ ಕೇಳುತ್ತೇವೆ. ನಮ್ಮ ನ್ಯಾಯ ಸಮ್ಮತ ಬೇಡಿಕೆ ಈಡೇರಿಕೆಗೆ ನೀವು ಸಹಕರಿಸಬೇಕು ಎಂದು ನಾಗರಿಕರಲ್ಲಿ ಮನವಿ ಮಾಡಿದರು.

ಚಳವಳಿಯಲ್ಲಿ ಹಸಿರು ಸೇವೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌, ಹಿಂದೂ ಜಾಗ್ರತಿ ಸೇನೆಯ ಡಾ.ವಿನಯ್‌ ಗೌಡ, ಕರಾನೌಸಂ ಪ್ರಧಾನ ಕಾರ್ಯದರ್ಶಿ ನಾಗಣ್ಣಗೌಡ, ಬೆಂಗಳೂರು ನಗರ ಕಸಾಪ ಅಧ್ಯಕ್ಷ ಮಾಯಣ್ಣ ಭಾಹವಹಿಸಿ ಬೆಂಬಲ ಸೂಚಿಸಿದರು.   ನೌಕರರ ಕೂಟದ ಪದಾಧಿಕಾರಿ ಸುಧಾಕರ್‌ ರೆಡ್ಡಿ ಸೇರಿ ಸಾವಿರಾರು ನೌಕರರು ಭಾಗವಹಿಸಿದ್ದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?