NEWSನಮ್ಮಜಿಲ್ಲೆನಮ್ಮರಾಜ್ಯ

ನಾಳೆಯಿಂದ ಹಮ್ಮಿಕೊಂಡಿದ್ದ ಅರ್ನಿದಿಷ್ಟವಾಧಿ ಸಾರಿಗೆ ನೌಕರರ ಮುಷ್ಕರ ವಾಪಸ್‌: ಜಂಟಿ ಕ್ರಿಯಾ ಸಮಿತಿ

ಸಮಸ್ತ ಸಾರಿಗೆ ನೌಕರರು ಸಹಕರಿಸಿ ಈ ಹೋರಾಟದ ಯಶಸ್ವಿಗೆ ಕಾರಣರಾದ ಪ್ರತಿಯೊಬ್ಬ ಸಂಗಾತಿಗಳಿಗೆ ಅನಂತ ಅನಂತ ಧನ್ಯವಾದಗಳು ಜಂಟಿ ಕ್ರಿಯಾ ಸಮಿತಿ ಪರವಾಗಿ ಎಂದು ತಿಳಿಸಿದ್ದಾರೆ.

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಂಟಿ ಕ್ರಿಯಾ ಸಮಿತಿ ಮೇ 20ರಿಂದ ಹಮ್ಮಿಕೊಳ್ಳಲು ಉದ್ದೇಶಿಸಿದ್ದ ಮುಷ್ಕರಕ್ಕೆ ಹೈ ಕೋರ್ಟ್‌ ಇಂದು ತಡೆನೀಡಿದೆ.

ಇಂದು (ಮೇ 19) ಹೈಕೋರ್ಟ್‌ನ ದ್ವಿಸದಸ್ಯ ನ್ಯಾಯಪೀಠದ ಮುಂದೆ ಬಂದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಸಂಘಟನೆಗಳ ಪರವಾಗಿ ಭಾಗವಹಿಸಿದ್ದ ವಕೀಲರು ಪ್ರಸ್ತುತ ಸಾರಿಗೆ ನೌಕರರ ಬೇಡಿಕೆಗಳ ಬಗ್ಗೆ ಇನ್ನೂ ಸಹ ಬಗೆಹರಿಸದಿರದ ಬಗ್ಗೆ ಮತ್ತು ಹಿಂದೆ 05.08.2025 ರಂದು ಕರೆ ನೀಡಿದ ಮುಷ್ಕರದಲ್ಲಿ ಸಹ ಹೈ ಕೋರ್ಟ್ ನ ಆದೇಶದ ಹಿನ್ನೆಲೆಯಲ್ಲಿ ಜಂಟಿ ಕ್ರಿಯಾ ಸಮಿತಿಯು ಗೌರವದಿಂದ ಮುಷ್ಕರವನ್ನು ಹಿಂಪಡೆದಿತ್ತು.

ಆದರೆ 10 ತಿಂಗಳೂ ಕಳೆದರು ಇನ್ನೂ ಸಹ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಿಲ್ಲವೆಂದು ಕೋರ್ಟ್ ನ ಗಮನಕ್ಕೆ ತಂದರು. ಈ ಕಾರಣವನ್ನು ಉಲ್ಲೇಖಿಸಿ ಹೈಕೋರ್ಟ್ ನ್ಯಾಯಮೂರ್ತಿಗಳು ಇದೇ 21ರಂದು ಮುಖ್ಯಮಂತ್ರಿಗಳ ಅಥವಾ ಸಾರಿಗೆ ಮಂತ್ರಿಗಳು ಜಂಟಿ ಕ್ರಿಯಾ ಸಮಿತಿ ಜತೆ ಸಭೆ ನಡೆಸುವ ದಿನಾಂಕವನ್ನು ನಿಗದಿ ಮಾಡಿ ಕೋರ್ಟ್ ಗೆ ತಿಳಿಸುವಂತೆ ಸೂಚಿಸಿದ್ದಾರೆ.

ಈ ಹಿನ್ನೆಲ್ಲೇಯಲ್ಲಿ ಜಂಟಿ ಕ್ರಿಯಾ ಸಮಿತಿಯು ಸಭೆ ಸೇರಿ ಸಮಸ್ತ ಸಾರಿಗೆ ನೌಕರರ ಹಿತಕ್ಕಾಗಿ ಹೈಕೋರ್ಟ್ ನ ನಿರ್ದೇಶನದಂತೆ ಮುಂದಿನ ಸಭೆಯಲ್ಲಿ ಚರ್ಚಿಸಲು ಸರ್ಕಾರಕ್ಕೆ ಸೂಚನೆ ನೀಡಿರುವ ಕಾರಣ ಮೇ 20ರಿಂದ ಅಂದರೆ ನಾಳೆಯಿಂದ ಹಮ್ಮಿಕೊಂಡಿದ್ದ ಅರ್ನಿದಿಷ್ಟವಾಧಿ ಮುಷ್ಕರವನ್ನು ಹಿಂಪಡೆಯಲಾಗಿದೆ.

ಸಮಸ್ತ ಸಾರಿಗೆ ನೌಕರರು ಸಹಕರಿಸಿ ಈ ಹೋರಾಟದ ಯಶಸ್ವಿಗೆ ಕಾರಣರಾದ ಪ್ರತಿಯೊಬ್ಬ ಸಂಗಾತಿಗಳಿಗೆ ಅನಂತ ಅನಂತ ಧನ್ಯವಾದಗಳು ಜಂಟಿ ಕ್ರಿಯಾ ಸಮಿತಿ ಪರವಾಗಿ ಎಂದು ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ನಾಳೆಯಿಂದ ಹಮ್ಮಿಕೊಂಡಿದ್ದ ಅರ್ನಿದಿಷ್ಟವಾಧಿ ಸಾರಿಗೆ ನೌಕರರ ಮುಷ್ಕರ ವಾಪಸ್‌: ಜಂಟಿ ಕ್ರಿಯಾ ಸಮಿತಿ ಜಂಟಿ ಕ್ರಿಯಾ ಸಮಿತಿಗೆ ಶಾಕ್‌: KSRTC ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈ ಕೋರ್ಟ್‌ ತಡೆ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ ಮತ್ತೊಂದು KSRTC ನೌಕರರ ಸಂಘ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಸಾವು ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವಿ.ಡಿ.ಸತೀಶನ್ ಇಂದು ಕೇರಳದ ನೂತನ ಸಿಎಂಆಗಿ ವಿ.ಡಿ. ಸತೀಶನ್‌ ಪ್ರಮಾಣ ವಚನ ಸ್ವೀಕಾರ KSRTC ಜಂಟಿ ಸಮಿತಿ ಒಳೊಪ್ಪಂದ ಬಯಲು; 2.5 ಕೋಟಿ ರೂ.ಗೆ ಸೇಲಾದರ ನೀಚರು, ನೌಕರರ ದಾರಿತಪ್ಪಿಸುತ್ತಿರುವುದರ ಹಿಂದಿನ ಮರ್ಮ...