CrimeNEWSದೇಶ-ವಿದೇಶ

ಪೊಲೀಸರ ಸೋಗಿನಲ್ಲಿ ಟ್ರಕ್ ಚಾಲಕರಿಂದ ಹಣ ಸುಲಿಗೆ: ಒಬ್ಬನ ಬಂಧನ

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಪೊಲೀಸರ ಸೋಗಿನಲ್ಲಿ ಟ್ರಕ್ ಚಾಲಕರಿಂದ ಹಣ ಸುಲಿಗೆ ಮಾಡುತ್ತಿದ್ದ 43 ವರ್ಷದ ವ್ಯಕ್ತಿಯನ್ನು ಪೊಲೀಸರು ಮುಂಬೈನ ವಡಾಲಾದಲ್ಲಿ ಬಂಧಿಸಿದ್ದಾರೆ.

ಮೊಹಮ್ಮದ್ ನಿಜಾಮ್ ಶೇಖ್ ಬಂಧಿತ ಆರೋಪಿ. ದಿಲೀಪ್ ಕುಮಾರ್ ಮತ್ತು ವಿಜಯ್ ಚೌಹಾನ್ ಟ್ರಕ್‍ನಲ್ಲಿ ಕಬ್ಬಿಣದ ಸರಳುಗಳನ್ನುವಡಾಲಾದಿಂದ ರಾಯ್‍ಘರ್‌ನ ಸೆವ್ರಿ ಪ್ರದೇಶಕ್ಕೆ ಸಾಗಿಸುತ್ತಿದ್ದಾಗ ಇಬ್ಬರು ದುಷ್ಕರ್ಮಿಗಳು ನಮ್ಮನ್ನು ತಡೆದು ಹಣ ನೀಡುವಂತೆ ಬೆದರಿಕೆ ಹಾಕಿದರು ಎಂದು ಟ್ರಕ್ ಚಾಲಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ವಡಾಲಾದ ಶಾಂತಿ ನಗರ ಸಿಗ್ನಲ್ ಸಮೀಪ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಟ್ರಕ್ ತಡೆದು ಪೊಲೀಸ್ ಎಂದು ಹೇಳಿಕೊಂಡು ಹಣ ನೀಡುವಂತೆ ಬೆದರಿಕೆ ಹಾಕಿದ್ದರು. ಅಲ್ಲದೆ ಆರೋಪಿಗಳು ಚಾಕು ತೋರಿಸಿ ಚುಚ್ಚುವುದಾಗಿ ಭಯಹುಟ್ಟಿಸಿದ್ದರು. ಈ ವೇಳೆ ಕರ್ತವ್ಯದಲ್ಲಿದ್ದ ಪೊಲೀಸ್ ವ್ಯಾನ್ ಘಟನೆ ನಡೆಯುವ ಸ್ಥಳದಲ್ಲಿ ಹಾದು ಹೋಗುವಾಗ ಇಬ್ಬರು ಆರೋಪಿಗಳು ಪರಾರಿಯಾಗಲು ಪ್ರಯತ್ನಿಸಿದರು. ಆರೋಪಿಗಳಲ್ಲಿ ಒಬ್ಬನನ್ನು ಪೊಲೀಸರು ಬಂಧಿಸಿ ಠಾಣೆಗೆ ಕರೆತಂದಿದ್ದಾರೆ ಎಂದು ಎಸ್‌ಐ ತಿಳಿಸಿದ್ದಾರೆ.

ಪರಾರಿಯಾಗಿರುವ ಇನ್ನೊಬ್ಬ ಆರೋಪಿಗೆ ಪೊಲೀಸರು ಬಲೆ ಬೀಸಿದ್ದಾರೆ. ಟ್ರಕ್ ಚಾಲಕನಿಗೆ ಬೆದರಿಕೆ ಹಾಕಲು ಆರೋಪಿಗಳು ಬಳಸಿದ ಚಾಕುವನ್ನು ವಶಪಡಿಸಿಕೊಂಡಿರುವ ಪೊಲೀಸರು ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿರುವುದಾಗಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?