ಬೆಂಗಳೂರು: ನ್ಯೂಡೆಲ್ಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಿ ಬಂದಿದ್ದು, ಇನ್ನೆರಡು ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿ, ಸದ್ಯದಲ್ಲಿಯೇ ಹೊಸ ಸಚಿವರು ಯಾರು, ಯಾರಿಗೆ ಯಾವ ಖಾತೆ ಎನ್ನುವುದು ಗೊತ್ತಾಗಲಿದೆ. ಇನ್ನೆರೆಡು ಮೂರು ದಿನಗಳಲ್ಲಿ ಎಲ್ಲವೂ ಅಂತಿಮವಾಗಲಿದೆ ಎಂದರು.
ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ರೇಣುಕಾಚಾರ್ಯ ಸಭೆ ನಡೆಸಿದರ ಬಗ್ಗೆ ಕೇಳಿದ ಪ್ರಶ್ನೆಗೆ, ಎಲ್ಲಾ ಶಾಸಕರು ಸೇರಿ ಸಭೆ ನಡೆಸುವುದು ಸಾಮಾನ್ಯ ಎಂದು ಪ್ರತಿಕ್ರಿಯಿಸಿದರು.
ಸಚಿವ ಸಂಪುಟ ವಿಸ್ತರಣೆ ಸಂಬಂಧ ಬುಧವಾರ ನ್ಯೂಡೆಲ್ಲಿಗೆ ತೆರಳಿದ್ದ ಸಿಎಂ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ 20 ನಿಮಿಷ ಚರ್ಚೆ ನಡೆಸಿ ಬರಿಗೈಯಲ್ಲಿ ವಾಪಸ್ ಆಗಿದ್ದಾರೆ.