Vijayapatha – ವಿಜಯಪಥ
Friday, November 1, 2024
NEWSನಮ್ಮರಾಜ್ಯರಾಜಕೀಯ

ವಿನಾಕಾರಣ ಬಂದ್‌ ಮಾಡಿದರೆ ಕಠಿಣ ಕ್ರಮ: ಕನ್ನಡಪರ ಸಂಘಟನೆಗಳಿಗೆ ಸಿಎಂ ಬಿಎಸ್‌ವೈ ಎಚ್ಚರಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿನಾಕಾರಣ ಬಂದ್‌ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಡಿಸೆಂಬರ್ 5 ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಅನಾವಶ್ಯಕವಾಗಿ ಬಂದ್ ಮಾಡಿದರೆ ನಾನು ಸಹಿಸುವುದಿಲ್ಲ. ನಾನು ಎಲ್ಲವನ್ನೂ ಗಮನಿಸುತ್ತಿದ್ದೇನೆ. ಪ್ರತಿಕೃತಿ ದಹಿಸುವುದು, ಬಂದ್ ಮಾಡುವುದು ಸರಿಯಲ್ಲ. ಶಾಂತಿಯುತವಾಗಿ ಬೇಕಾದರೆ ಪ್ರತಿಭಟನೆ ಮಾಡಲಿ. ಆದರೆ, ವಿನಾಕಾರಣ ಬಂದ್ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.

ತಾವು ಕನ್ನಡದ ಪರವಾಗಿ, ಕನ್ನಡಿಗರ ಪರವಾಗಿ ಇರುವಂಥವನು, ಕನ್ನಡಿಗರಿಗೆ ಬೇಕಾದ ಹೆಚ್ಚಿನ ಸೌಲಭ್ಯ ಒದಗಿಸಲು ತಾವು ಸಿದ್ಧ. ಬೇರೆ ಬೇರೆ ಕಾರಣಗಳಿಗಾಗಿ ಬಂದ್ ಕರೆ ಕೊಡುವುದು ಸೂಕ್ತ ಅಲ್ಲ. ರಾಜ್ಯದ ಜನ ಇದನ್ನು ಮೆಚ್ಚುವುದಿಲ್ಲ. ಬಲವಂತದಿಂದ ಎಲ್ಲೂ ಬಂದ್ ಮಾಡಲು ತಾವು ಅವಕಾಶ ಕೊಡುವುದಿಲ್ಲ ಎಂದು ಸ್ಪಷ್ಪಪಡಿಸಿದರು.

ಪ್ರತಿಭಟನಕಾರರು ಪ್ರತಿಕೃತಿ‌ ದಹನ ಮಾಡುವುದು, ಕೆಟ್ಟದಾಗಿ ನಡೆದುಕೊಳ್ಳುತ್ತಿರುವುದನ್ನು ಗಮನಿಸುತ್ತಿದ್ದೇನೆ, ಇಂತಹವರ ವಿರುದ್ಧ ಬಹಳ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಎಲ್ಲ ವರ್ಗಗಳಿಗೂ ಸರ್ಕಾರ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದೆ. ಸರ್ಕಾರ ಯಾರ ನಡುವೆಯೂ ಭೇದ ಭಾವ ಮಾಡುತ್ತಿಲ್ಲ. ಸರ್ಕಾರದ ಉದ್ದೇಶ ಅರ್ಥ ಮಾಡಿಕೊಂಡು ಸಹಕಾರ ಕೊಡಬೇಕು ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ