NEWSನಮ್ಮಜಿಲ್ಲೆನಮ್ಮರಾಜ್ಯ

ಫೆಬ್ರವರಿ 2025- ಮಾರ್ಚ್‌ 2025ರ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಗೆ ನಿರ್ದೇಶನ ನೀಡಲು ಹೈ ಕೋರ್ಟ್‌ ಮೆಟ್ಟಿಲೇರಿದ ಗೃಹಿಣಿಯರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಎರಡು ತಿಂಗಳ ಹಣ ಬಿಡುಗಡೆ ಮಾಡಿಲ್ಲ ಹೀಗಾಗಿ ಆ ಹಣ ಬಿಡುಗಡೆ ಮಾಡಲು ನಿರ್ದೇಶನ ನೀಡುವಂತೆ ಕೋರಿ ಇಂದು ಮೇ 21ರಂದು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದ್ದು, ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಈ ಗೃಹಲಕ್ಷ್ಮಿ ಯೋಜನೆಯ ಮಾಸಿಕ ಧನಸಹಾಯ ಸರಿಯಾಗಿ ತಲುಪುತ್ತಿಲ್ಲ ಎಂದು ಬೇಸತ್ತ ಬೆಂಗಳೂರಿನ ಇಬ್ಬರು ಮಹಿಳೆಯರು ಇದೀಗ ನೇರವಾಗಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಈ ಎರಡು ತಿಂಗಳ ಗೃಹಲಕ್ಷ್ಮಿ ಹಣವನ್ನು ಬಿಡುಗಡೆ ಮಾಡುವುದಕ್ಕೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಬೆಂಗಳೂರಿನ ಕಮಲಾನಗರದ ನಿವಾಸಿ ಆರ್. ಗಂಗಾ ಹಾಗೂ ನಂದಿನಿ ಲೇಔಟ್‌ನ ಜಿ.ಡಿ. ಪವಿತ್ರಾ ಎಂಬುವರು ಹೈಕೋರ್ಟ್‌ ಮೊರೆಹೋಗಿದ್ದು, ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದಾರೆ.

ಕಳೆದ ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಿಲ್ಲ. ಈ ಬಾಕಿ ಇರುವ ಎರಡು ತಿಂಗಳ ಹಣವನ್ನು ತಕ್ಷಣವೇ ಪಾವತಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಇನ್ನು ನ್ಯಾಯಮೂರ್ತಿಗಳಾದ ಡಾ.ಕೆ.ಮನ್ಮಥ ರಾವ್‌ ಮತ್ತು ಸೂರಜ್ ಗೋವಿಂದರಾಜ್​​ ಅವರಿದ್ದ ವಿಭಾಗೀಯ ಪೀಠ ಅರ್ಜಿ ವಿಚಾರಣೆ ನಡೆಸಿದ್ದು, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಹಣಕಾಸು ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ತುರ್ತು ನೋಟಿಸ್ ಜಾರಿ ಮಾಡಿ ಆದೇಶ ಹೊರಡಿಸಿ ವಿಚಾರಣೆಯನ್ನು ಮುಂದೂಡಿದೆ.

ಅರ್ಜಿದಾರರ ಪರ ಹಿರಿಯ ವಕೀಲ ವಿಕ್ರಮ್‌ ಹುಯಿಲಗೋಳ ವಾದ ಮಂಡಿಸಿದರು.

2024ರ ಏಪ್ರಿಲ್‌ನಿಂದ 2025ರ ಜನವರಿವರೆಗೆ ಯಾವುದೇ ಅಡೆತಡೆಯಿಲ್ಲದೆ ಸಾಗುತ್ತಿದ್ದ ಗೃಹಲಕ್ಷ್ಮಿ ಯೋಜನೆಯ ಧನಸಹಾಯ ವಿತರಣೆ, ಫೆಬ್ರವರಿಯಲ್ಲಿ ದಿಢೀರ್ ಹಳಿ ತಪ್ಪಿತ್ತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಸ್ತುವಾರಿಯಲ್ಲಿದ್ದ ಈ ಪ್ರಕ್ರಿಯೆಯನ್ನು, ತಾಲೂಕು ಪಂಚಾಯಿತಿಗಳ ಮೂಲಕ ನಿರ್ವಹಿಸಲು ಸರ್ಕಾರ ಹೊಸ ನೀತಿ ರೂಪಿಸಿತ್ತು.

ಆದರೆ, ಈ ತಾಂತ್ರಿಕ ಹಸ್ತಾಂತರದ ಗೊಂದಲದಿಂದಾಗಿ 2025ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಕಂತುಗಳ ಹಣ ಫಲಾನುಭವಿಗಳಿಗೆ ಈವರೆಗೂ ಕೈಸೇರಿಲ್ಲ. ಹೀಗಾಗಿ ಇದನ್ನು ತಕ್ಷಣ ಬಿಡುಗಡೆ ಮಾಡಲು ನಿರ್ದೇಶನ ನೀಡಬೇಕು ಎಂದು ಮನವಿ ಮಾಡಲಾಗಿದೆ.

Deva
the authorDeva

Leave a Reply

error: Content is protected !!
Latest news
ಫೆಬ್ರವರಿ 2025- ಮಾರ್ಚ್‌ 2025ರ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಗೆ ನಿರ್ದೇಶನ ನೀಡಲು ಹೈ ಕೋರ್ಟ್‌ ಮೆಟ್ಟಿಲೇರಿ... BMTC ನೌಕರರಿಗೆ ಏಪ್ರಿಲ್-2018 ರಿಂದ ಜುಲೈ-2018 ರವರೆಗಿನ 4ತಿಂಗಳ ಮೂಲ ತುಟ್ಟಭತ್ಯೆ ಮೇ 2026ರ ವೇತನದೊಂದಿಗೆ ಪಾವತಿಸಲ... KSRTC ನೌಕರರ ವೇತನ ಸಂಬಂಧ ಕೋರ್ಟ್‌ ಆದೇಶ ಮಾಡಿದರೆ ನಾವು ಪಾಲಿಸಲೇಬೇಕು: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನೌಕರರ ನ್ಯಾಯಯುತವಾದ ಬೇಡಿಕೆಯ ನ್ಯಾಯಯುತವಾಗಿ ಈಡೇರಿಸಿದ ನಂತರ ಪ್ರಕರಣ ಇತ್ಯರ್ಥ: ಹೈ ಕೋರ್ಟ್‌ KSRTC ಮೈಸೂರು ಡಿಸಿಗೆ- RC, FC ಚಾಲಕ ನಿರ್ವಾಹಕರ ಜವಾಬ್ದಾರಿನಾ?: ಹೇ ತಲೆಕೆಟ್ಟ ಡಿಸಿ ನೀನು ನಿಜವಾಗಲು ಜವಾಬ್ದಾರಿಯಿಂ... ಭಾರೀ ಮಳೆಗೆ ನೆಲಕಚ್ಚಿದ ಪರಂಗಿ ಅಡಿಕೆ ಗಿಡಗಳು -ಅಪಾರ ಪ್ರಮಾಣದ ಬೆಳೆ ಹಾನಿ ರೈತರ ಗೋಳಾಟ ಪ್ರೀತಿ ನಿರಾಕರಿಸಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿ ಕುಳಿತಿರುವ ಪಾಗಲ್‌ ನಾಳೆಯಿಂದ ಹಮ್ಮಿಕೊಂಡಿದ್ದ ಅರ್ನಿದಿಷ್ಟವಾಧಿ ಸಾರಿಗೆ ನೌಕರರ ಮುಷ್ಕರ ವಾಪಸ್‌: ಜಂಟಿ ಕ್ರಿಯಾ ಸಮಿತಿ ಜಂಟಿ ಕ್ರಿಯಾ ಸಮಿತಿಗೆ ಶಾಕ್‌: KSRTC ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈ ಕೋರ್ಟ್‌ ತಡೆ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ ಮತ್ತೊಂದು KSRTC ನೌಕರರ ಸಂಘ