NEWSನಮ್ಮರಾಜ್ಯರಾಜಕೀಯ

ಬಂದ್‌ ಸಮರ- ಗುಲಾಮಗಿರಿ ಒಪ್ಪಿಕೊಳ್ಳುತ್ತಾರೆಯೇ ಯತ್ನಾಳ್?‌: ಕರವೇ ನಾರಾಯಣಗೌಡ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮರಾಠ ಸಮಾಜ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ರೋಲ್‌ಕಾಲ್‌ ಹೋರಾಟಗಾರರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಸಿಎಂ ಬಿಎಸ್‌ ವೈ ಹೆದರಬೇಕಿಲ್ಲ. ವಿಜಯಪುರವನ್ನು ಯಾರು ಬಂದ್‌ ಮಾಡುತ್ತಾರೋ ನಾನು ನೋಡುತ್ತೇನೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಆಕ್ರೋಶ ವ್ಯಕ್ತಪಡಿಸಿರುವ ಕರವೇ ಅಧ್ಯಕ್ಷ ಟಿ.ಎ. ನಾರಾಯಣಗೌಡ ಯತ್ನಾಳ್‌ಗೆ ಎರಡೂ ಸವಾಲು ಹಾಕಿದ್ದಾರೆ.

ಈ ಬಗ್ಗೆ ತಮ್ಮ ಫೇಸ್‌ಪುಟದಲ್ಲಿ ಬರೆದುಕೊಂಡಿರುವ ಅವರು, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಕನ್ನಡಪರ ಚಳವಳಿಗಾರರ ಕುರಿತು ಕುಚೇಷ್ಟೆಯ ಮಾತುಗಳನ್ನು ಆಡಿದ್ದಾರೆ. ಅವರು ಕನ್ನಡ ಚಳವಳಿಗಾರರ ಕುರಿತು ಏನೆಲ್ಲ ಮಾತುಗಳನ್ನು ಆಡಿದ್ದಾರೋ ಅದೆಲ್ಲವೂ ಅವರಿಗೇ ಅನ್ವಯಿಸುತ್ತದೆ. ಸಚಿವ ಸ್ಥಾನ ಪಡೆಯಲು ಆಗಾಗ ತಮ್ಮ ಪಕ್ಷದ ಸರ್ಕಾರವನ್ನೇ ಬ್ಲಾಕ್ ಮೇಲ್ ಮಾಡಿಕೊಂಡುಬಂದವರು ಯತ್ನಾಳ್. ಕಂಡಕಂಡವರಿಗೆ ಸವಾಲು ಎಸೆಯುವ ಯತ್ನಾಳ್ ಅವರಿಗೆ ಎರಡೇ ಎರಡು ಸವಾಲು ಕೊಡುತ್ತಿದ್ದೇನೆ. ಅವರಿಗೆ ನಿಜವಾಗಿಯೂ ತಾಕತ್ತಿದ್ದರೆ ಈ ಸವಾಲುಗಳನ್ನು ಸ್ವೀಕರಿಸಲಿ. ಇಲ್ಲವಾದಲ್ಲಿ ಬೂಟಾಟಿಕೆಯ ರಾಜಕೀಯ ಮಾಡುವುದನ್ನು ಬಿಟ್ಟುಬಿಡಲಿ.

ಸವಾಲು-1
ಯತ್ನಾಳ್ ಶಾಸಕರಾಗಿರುವ ಜಿಲ್ಲೆ ಬಿಜಾಪುರವೂ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಸಂಭವಿಸಿದ ಭೀಕರ ನೆರೆ, ಭಾರೀ ಮಳೆಯಿಂದಾಗಿ ಸುಮಾರು 25,000 ಕೋಟಿ ರುಪಾಯಿ ನಷ್ಟವಾಗಿದ್ದು, ಕನಿಷ್ಠ 10,000 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸ್ವತಃ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ ಬೇಡಿಕೆ ಇಟ್ಟಿದ್ದಾರೆ. ಕೇಂದ್ರ ಸರ್ಕಾರ ಕೊಟ್ಟಿರುವುದು ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ ಕೇವಲ 550 ಕೋಟಿ ರುಪಾಯಿ. ಬಿಜಾಪುರ ಜಿಲ್ಲೆಯಲ್ಲಿ ಎರಡು ಲಕ್ಷ ಎಕರೆಗೂ ಹೆಚ್ಚು ಕೃಷಿ ಭೂಮಿ, ಹತ್ತು ಸಾವಿರ ಎಕರೆಗೂ ಹೆಚ್ಚು ತೋಟಗಾರಿಕಾ ಭೂಮಿ ಹಾಳಾಗಿದೆ. ರೈತರಿಗೆ ಪರಿಹಾರವಿಲ್ಲ, ಮನೆ ಕಳೆದುಕೊಂಡವರಿಗೆ ಪರಿಹಾರವಿಲ್ಲ. ಅಲ್ಪಸ್ವಲ್ಪ ಬಿಡುಗಡೆಯಾದ ಹಣವನ್ನೂ ಪುಡಾರಿಗಳು ನುಂಗಿ ನೀರು ಕುಡಿದಿದ್ದಾರೆ. ಗಂಜೀಕೇಂದ್ರಗಳಲ್ಲಿ ಮೂಲಭೂತ ಸೌಕರ್ಯವಿಲ್ಲದೆ ಸಂತ್ರಸ್ಥರು ಒದ್ದಾಡುತ್ತಿದ್ದಾರೆ. ಯತ್ನಾಳ್ ಗೆ ನಿಜವಾಗಿಯೂ ಜನಪರ ಕಾಳಜಿ ಇದ್ದರೆ, ತನ್ನ ಕ್ಷೇತ್ರದ ಮತದಾರರ ಹಿತ ಕಾಯುವ ಮನಸ್ಸಿದ್ದರೆ, ಕೇಂದ್ರ ಸರ್ಕಾರ ಯಾಕೆ ಹಣ ನೀಡುತ್ತಿಲ್ಲ ಎಂದು ಪ್ರಶ್ನಿಸುವ ತಾಕತ್ತು ನಿಮಗಿದೆಯೇ ಎಂದು ಸವಾಲು ಹಾಕಿದ್ದಾರೆ.

ಸವಾಲು-2
ಜಿಎಸ್ ಟಿ ವ್ಯವಸ್ಥೆ ಜಾರಿಯಾದಾಗಿನಿಂದಲೂ ಕರ್ನಾಟಕ ಸರ್ಕಾರ ಲಕ್ಷಾಂತರ ಕೋಟಿ ರುಪಾಯಿ ಹಣವನ್ನು ಸಂಗ್ರಹಿಸಿ ಕೇಂದ್ರ ಸರ್ಕಾರಕ್ಕೆ ನೀಡುತ್ತಿದೆ. ಜಿಎಸ್ ಟಿ ವ್ಯವಸ್ಥೆ ಜಾರಿಯಾದ ಸಂದರ್ಭದಲ್ಲಿ ರಾಜ್ಯಗಳಿಗೆ ಆಗುವ ನಷ್ಟವಾಗುವ ಹಣವನ್ನು ಕೊಡುವ ವಾಗ್ದಾನವನ್ನು ಕೇಂದ್ರ ಸರ್ಕಾರ ನೀಡಿತ್ತು. ಆದರೆ ಕೇಂದ್ರ ಸರ್ಕಾರ ಮಾತು ಮುರಿದಿದೆ. ಪರಿಹಾರದ ಹಣ ನೀಡುತ್ತಿಲ್ಲ. ಬದಲಾಗಿ ರಿಸರ್ವ್ ಬ್ಯಾಂಕ್ ನಿಂದ ಸಾಲ ಪಡೆಯಿರಿ ಎಂದು ಹೇಳುತ್ತಿದೆ. ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ. ಸರ್ಕಾರಿ ನೌಕರರಿಗೆ ಸಂಬಳ ಕೊಡಲೂ ಹಣವಿಲ್ಲ. ಇದೇ ಪರಿಸ್ಥಿತಿ ಮುಂದುವರೆದರೆ ಸರ್ಕಾರ ದಿವಾಳಿಯಾಗುವ ಸ್ಥಿತಿ ಇದೆ. ಯತ್ನಾಳ್ ಅವರಿಗೆ ನಿಜವಾಗಿಯೂ ಧೈರ್ಯ ಅನ್ನೋದೇನಾದರೂ ಇದ್ದರೆ ನಮ್ಮ ಹಣ ನಮಗೆ ಕೊಡಿ ಎಂದು ಮೋದಿ ಸರ್ಕಾರವನ್ನು ಕೇಳಲಿ, ಅದಕ್ಕಾಗಿ ಧರಣಿ‌ ಮಾಡಲಿ.
ಇದೆರಡು ಕೆಲಸ ಮಾಡಲು ಯತ್ನಾಳ್ ಅವರಿಂದ ಸಾಧ್ಯವೇ? ಅಥವಾ ತಾವು ಹೈಕಮಾಂಡ್ ಗುಲಾಮಗಿರಿಯನ್ನೇ ಮಾಡುತ್ತೇವೆ, ಗುಲಾಮಗಿರಿ ಬಿಟ್ಟು ಬೇರೇನೂ ತಮಗೆ ಗೊತ್ತಿಲ್ಲ ಎಂದು ಒಪ್ಪಿಕೊಳ್ಳುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...