NEWSನಮ್ಮಜಿಲ್ಲೆನಮ್ಮರಾಜ್ಯ

ಬಿಎಂಟಿಸಿ ಹೊಸ ವೇಗದೂತ ಬಸ್‌ಗಳ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

ಎರಡು ಮಾರ್ಗಗಳಲ್ಲಿ ನಿತ್ಯ 88 ಟ್ರಿಪ್‌ ಬಸ್‌ಗಳು ಸಂಚಾರ ಮಾಡಲಿದ್ದು, ಶುಕ್ರವಾರ ಎಚ್ ಕ್ರಾಸ್ ಬಸ್ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಈ ನೂತನ ವೇಗದೂತ ಸೀಮಿತ ನಿಲುಗಡೆ ಮಾರ್ಗಗಳಿಗೆ ಸಾರಿಗೆ ಸಚಿವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನೆಲಮಂಗಲ – ಹೊಸಕೋಟೆ, ಟಿನ್‌ಪ್ಯಾಕ್ಟರಿ – ಎಚ್ ಕ್ರಾಸ್‌ ನಡುವೆ ಬಿಎಂಟಿಸಿ ಹೊಸ ಎಕ್ಸ್‌ಪ್ರೆಸ್‌ ವೇಗದೂತ ಬಸ್‌ಗಳ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ.

ಈ ಬಸ್‌ಗಳು ಒಟ್ಟು ಎರಡು ಮಾರ್ಗಗಳಲ್ಲಿ ನಿತ್ಯ 88 ಟ್ರಿಪ್‌ ಬಸ್‌ಗಳು ಸಂಚಾರ ಮಾಡಲಿದ್ದು, ಶುಕ್ರವಾರ ಎಚ್ ಕ್ರಾಸ್ ಬಸ್ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಈ ನೂತನ ವೇಗದೂತ ಸೀಮಿತ ನಿಲುಗಡೆ ಮಾರ್ಗಗಳಿಗೆ ಸಾರಿಗೆ ಸಚಿವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ ಅವರು, ಎಚ್.ಕ್ರಾಸ್ ಹಾಗೂ ಹೊಸಕೋಟೆ ರಸ್ತೆ ಭಾಗದ ಸಾರ್ವಜನಿಕರ ಅನುಕೂಲಕ್ಕಾಗಿ ಈ ಹೊಸ ಬಸ್‌ಗಳ ಸೇವೆ ಪ್ರಾರಂಭಿಸಲಾಗುತ್ತಿದ್ದು, 30 ನಿಮಿಷಗಳ ಅಂತರದಲ್ಲಿ ಪ್ರತಿದಿನ 60 ಸುತ್ತುವಳಿಗಳು (ಟ್ರಿಪ್‌) ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಪ್ರಯಾಣ ದರ 60 ರೂ. ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.

ಇನ್ನು ಹೊಸಕೋಟೆಯಿಂದ ನೆಲಮಂಗಲದವರೆಗೆ ಪ್ರಯಾಣಿಸುವ ಸಾರ್ವಜನಿಕರ ಅನುಕೂಲವನ್ನು ಗಮನದಲ್ಲಿಟ್ಟುಕೊಂಡು ಮಾರ್ಗ ಸಂಖ್ಯೆ EX-STRR-1 ಅಡಿಯಲ್ಲಿ ನೂತನ ವೇಗದೂತ ಸೀಮಿತ ನಿಲುಗಡೆ ಸೇವೆಯನ್ನು ಪ್ರಾರಂಭಿಸಲಾಗುತ್ತಿದೆ ಎಂದು ಹೇಳಿದರು.

ಈ ಮಾರ್ಗದಲ್ಲಿ ನೆಲಮಂಗಲ, ರೈಲ್ವೆ ಗೊಲ್ಲಹಳ್ಳಿ, ಕನಸವಾಡಿ, ಮಧುರೆ ದೇವಸ್ಥಾನ, ದೊಡ್ಡಬಳ್ಳಾಪುರ, ಡಿ ಕ್ರಾಸ್, ಚಪ್ಪರದಕಲ್ಲು, ವಿಶ್ವನಾಥಪುರ, ದೇವನಹಳ್ಳಿ, ಎಂ.ವಿ.ಜೆ. ಮೆಡಿಕಲ್ ಕಾಲೇಜು ಹಾಗೂ ಹೊಸಕೋಟೆ ಪ್ರಮುಖ ನಿಲುಗಡೆಗಳಾಗಿವೆ. ನಿತ್ಯ 11 ಬಸ್‌ಗಳು 28 ಟ್ರಿಪ್‌ ಸಂಚಾರ ನಡೆಸಲಿವೆ. ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಯಾಣ ದರವನ್ನು 25 ರಿಂದ 110 ರೂ.ರವರೆಗೆ ನಿಗದಿಪಡಿಸಲಾಗಿದೆ ಎಂದು ವಿವರಿಸಿದರು.

ಇನ್ನು ಈ ಸೇವೆಗಳಿಂದ ಕೆ.ಆರ್.ಪುರಂ, ಹೊಸಕೋಟೆ, ನಂದಗುಡಿ, ಹಿಂಡಗಾನಹಳ್ಳಿ, ಎಚ್.ಕ್ರಾಸ್, ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ ಹಾಗೂ ಹೊಸಕೋಟೆ ಭಾಗದ ವಿದ್ಯಾರ್ಥಿಗಳು, ಉದ್ಯೋಗಿಗಳು ಮತ್ತು ಸಾರ್ವಜನಿಕರಿಗೆ ವೇಗವಾದ ಹಾಗೂ ಸುಲಭ ಪ್ರಯಾಣ ಸೌಲಭ್ಯ ದೊರೆಯಲಿದೆ ಎಂದು ಬಿಎಂಟಿಸಿ ಅಧಿಕಾರಿಗಳು ಮಾಹಿತಿ ನೀಡಿದರು.

ಸಮಾರಂಭದಲ್ಲಿ ಶಾಸಕರಾದ ಶರತ್ ಬಚ್ಚೇಗೌಡ, ಬಿ.ಎನ್‌. ರವಿಕುಮಾರ್, ಬಿಎಂಟಿಸಿ ಅಧ್ಯಕ್ಷ ವಿ.ಎಸ್‌. ಆರಾಧ್ಯ ಸೇರಿದಂತೆ ಹಲವು ಉಪಸ್ಥಿತರಿದ್ದರು.

Deva
the authorDeva

Leave a Reply

error: Content is protected !!
Latest news
ಬಿಎಂಟಿಸಿ ಹೊಸ ವೇಗದೂತ ಬಸ್‌ಗಳ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು ನಿವೇಶನ ರಹಿತ 500 ಬಡ ಕುಟುಂಬಗಳಿಗೆ ಜೂನ್ ತಿಂಗಳಲ್ಲಿ ನಿವೇಶನ ವಿತರಣೆ: ಸಚಿವ ಮುನಿಯಪ್ಪ ಸಿಬಿಎಸ್‌ಇ ತ್ರಿಭಾಷಾ ನೀತಿ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಪಾಲಕರು: ಮುಂದಿನ ವಾರ ವಿಚಾರಣೆ ಫೆಬ್ರವರಿ 2025- ಮಾರ್ಚ್‌ 2025ರ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಗೆ ನಿರ್ದೇಶನ ನೀಡಲು ಹೈ ಕೋರ್ಟ್‌ ಮೆಟ್ಟಿಲೇರಿ... BMTC ನೌಕರರಿಗೆ ಏಪ್ರಿಲ್-2018 ರಿಂದ ಜುಲೈ-2018 ರವರೆಗಿನ 4ತಿಂಗಳ ಮೂಲ ತುಟ್ಟಭತ್ಯೆ ಮೇ 2026ರ ವೇತನದೊಂದಿಗೆ ಪಾವತಿಸಲ... KSRTC ನೌಕರರ ವೇತನ ಸಂಬಂಧ ಕೋರ್ಟ್‌ ಆದೇಶ ಮಾಡಿದರೆ ನಾವು ಪಾಲಿಸಲೇಬೇಕು: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನೌಕರರ ನ್ಯಾಯಯುತವಾದ ಬೇಡಿಕೆಯ ನ್ಯಾಯಯುತವಾಗಿ ಈಡೇರಿಸಿದ ನಂತರ ಪ್ರಕರಣ ಇತ್ಯರ್ಥ: ಹೈ ಕೋರ್ಟ್‌ KSRTC ಮೈಸೂರು ಡಿಸಿಗೆ- RC, FC ಚಾಲಕ ನಿರ್ವಾಹಕರ ಜವಾಬ್ದಾರಿನಾ?: ಹೇ ತಲೆಕೆಟ್ಟ ಡಿಸಿ ನೀನು ನಿಜವಾಗಲು ಜವಾಬ್ದಾರಿಯಿಂ... ಭಾರೀ ಮಳೆಗೆ ನೆಲಕಚ್ಚಿದ ಪರಂಗಿ ಅಡಿಕೆ ಗಿಡಗಳು -ಅಪಾರ ಪ್ರಮಾಣದ ಬೆಳೆ ಹಾನಿ ರೈತರ ಗೋಳಾಟ