NEWSಕೃಷಿನಮ್ಮಜಿಲ್ಲೆ

ಅಕ್ರಮ ಪಂಪ್‍ಸೆಟ್‍ಗಳ ಸಕ್ರಮೀಕರಣಕ್ಕೆ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸುವ ಪ್ರಕ್ರಿಯೆಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಪಿರಿಯಾಪಟ್ಟಣ ತಾಲೂಕಿನಲ್ಲಿ ಚಾಲನೆ ನೀಡಿದೆ.

ಪಿರಿಯಾ ಪಟ್ಟಣ ಉಪವಿಭಾಗ ವ್ಯಾಪ್ತಿಗೆ ಬರುವ ಮುತ್ತೂರು, ಮಾಲಂಗಿ, ಚೌತಿ, ಕಂಪಲಾಪುರ, ಕೀರನಹಳ್ಳಿ, ಪಂಚವಳ್ಳಿ, ದೊಡ್ಡಬೇಲಾಳು, ಹುಣಸವಾಡಿ, ಪುನಾಡಹಳಿ, ನವಿಲೂರು, ಬೈಲಕೊಪ್ಪ, ಚನ್‍ಕಲ್, ಕೊಪ್ಪ, ಟಿಬೆಟ್‍ಕ್ಯಾಂಪ್, ಆವರ್ತಿ, ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಅನಧೀಕೃತವಾಗಿ ಕೃಷಿ ನೀರಾವರಿ ಪಂಪ್‍ಸೆಟ್‍ಗಳನ್ನು ಉಪಯೋಗಿಸುತ್ತಿರುವವರು ನವೆಂಬರ್ 30ರೊಳಗೆ ಅಗತ್ಯ ದಾಖಲೆಗಳೊಂದಿಗೆ ಹಣ ಪಾವತಿಸಿ ಅಕ್ರಮ ಪಂಪ್‍ಸೆಟ್‍ಗಳನ್ನು ಸಕ್ರಮೀಕರಣಗೊಳಿಸಿ ಮೂಲಭೂತ ಸೌಕರ್ಯ ಕಲ್ಪಿಸಲು ನಿಗಮದ ವತಿಯಿಂದ ಕ್ರಮವನ್ನು ಕೈಗೊಳ್ಳಲಾಗಿದೆ.

ತಪ್ಪಿದ್ದಲ್ಲಿ, ಅಕ್ರಮ ಪಂಪ್‍ಸೆಟ್‍ಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿ, ಪಂಪ್‍ಸೆಟ್ ಸ್ಥಾವರದ ಗ್ರಾಹಕರ ಜ್ಯೇಷ್ಠತಾ ಪಟ್ಟಿಗಳನ್ನು ರದ್ದುಗೊಳಿಸಲಾಗುವುದು ಎಂದು ಚಾಮುಂಡೇಶ್ವರಿ ವಿದ್ಯುಚ್ಛಕ್ತಿ ಸರಬರಾಜು ನಿಗಮ ನಿಯಮಿತ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ.08223-274228ಗೆ ಸಂಪರ್ಕಿಸಬಹುದು.

Leave a Reply

error: Content is protected !!
LATEST
KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ