CRIMENEWSನಮ್ಮರಾಜ್ಯ

ಭಟ್ಕಳ: ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ 8 ಮಂದಿ ಮೃತ- ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ನದಿಯಲ್ಲಿ ಲಕ್ಷ್ಮಿ ಮಾದೇವ ನಾಯ್ಕ (38), ಲಕ್ಷ್ಮಿ ಶಿವರಾಂ ನಾಯ್ಕ (39), ಉಮೇಶ್ ಮಂಜುನಾಥ್ ನಾಯ್ಕ (42), ಮಾಸ್ತಮ್ಮ ಮಂಜುನಾಥ್ (43), ಲಕ್ಷ್ಮಿ ಅಣ್ಣಪ್ಪನಾಯ್ಕ (44), ಜ್ಯೋತಿ ನಾಗಪ್ಪ ನಾಯ್ಕ (37), ಮಾಲತಿ ಜಟ್ಟಪ್ಪ ನಾಯ (38) ಮೃತರು. ಎಲ್ಲರೂ ಭಟ್ಕಳದ ಪಡುಶಿರಾಲಿ ಮೂಲದವರು. ಮೃತರೆಲ್ಲ ಒಂದೇ ಕುಟುಂಬದವರು.

ವಿಜಯಪಥ ಸಮಗ್ರ ಸುದ್ದಿ

ಕಾರವಾರ: ಭಟ್ಕಳದ ತಟ್ಟೆ ಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟ 8 ಮಂದಿ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ X ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟೆಹಕ್ಕಲು ಕಡಲ ತೀರದಲ್ಲಿ ಕಪ್ಪೆಚಿಪ್ಪು ತರಲು ಹೋದವರ ಪೈಕಿ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ಇದೊಂದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಟನೆ. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಮಾನವೀಯ ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ಕೆಲವರು ಈ ದುರ್ಘಟನೆಯಲ್ಲಿ ಕಾಣೆಯಾಗಿರುವ ಮಾಹಿತಿಯಿದ್ದು, ಅವರಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಕಾಣೆಯಾದವರು ಬದುಕಿಬಂದು ತಮ್ಮವರನ್ನು ಕೂಡಿಕೊಳ್ಳಲಿ‌ ಎಂದು ನಾವೆಲ್ಲರೂ ದೇವರಲ್ಲಿ ಪ್ರಾರ್ಥಿಸೋಣ ಎಂದು ಹೇಳಿದ್ದಾರೆ.

ನದಿಯಲ್ಲಿ ಮುಳುಗಿ 8 ಜನರು ಮೃತಪಟ್ಟಿದ್ದಾರೆ, ಇಬ್ಬರ ಶವ ಇನ್ನೂ ಸಿಕ್ಕಿಲ್ಲ. ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ. ಗಾಯಳುಗಳ ರಕ್ಷಣೆ ಆಗಿದೆ, ಅವರ ವೈದ್ಯಕೀಯ ವೆಚ್ಚ ಸರ್ಕಾರವೇ ಭರಿಸುತ್ತೆ. ಮೃತರ ಕುಟುಂಬಗ್ಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಅಲ್ಲದೇ ಸಚಿವ ಮಂಕಾಳು ವೈದ್ಯ ಅವರನ್ನು ಘಟನಾ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಿದ್ದೇನೆ ಎಂದು ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ತಿಳಿಸಿದ್ದಾರೆ.

ನೀರುಪಾಲಾದವರು: ನದಿಯಲ್ಲಿ ಲಕ್ಷ್ಮಿ ಮಾದೇವ ನಾಯ್ಕ (38), ಲಕ್ಷ್ಮಿ ಶಿವರಾಂ ನಾಯ್ಕ (39), ಉಮೇಶ್ ಮಂಜುನಾಥ್ ನಾಯ್ಕ (42), ಮಾಸ್ತಮ್ಮ ಮಂಜುನಾಥ್ (43), ಲಕ್ಷ್ಮಿ ಅಣ್ಣಪ್ಪನಾಯ್ಕ (44), ಜ್ಯೋತಿ ನಾಗಪ್ಪ ನಾಯ್ಕ (37), ಮಾಲತಿ ಜಟ್ಟಪ್ಪ ನಾಯ (38) ಮೃತರು. ಎಲ್ಲರೂ ಭಟ್ಕಳದ ಪಡುಶಿರಾಲಿ ಮೂಲದವರು. ಮೃತರೆಲ್ಲ ಒಂದೇ ಕುಟುಂಬದವರು.

ಒಟ್ಟು 13 ಮಂದಿ ಕಪ್ಪೆಚಿಪ್ಪು ತೆಗೆಲು ಹೋಗಿದ್ದರು. ಈ ಪೈಕಿ 8 ಮಂದಿ ನೀರುಪಾಲಾಗಿದ್ದಾರೆ. ಇನ್ನು ಇಬ್ಬರು ಅಸ್ವಸ್ಥರಾಗಿದ್ದು, ಅವರನ್ನು ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ ಮೂವರಿಗಾಗಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ನದಿ ಪ್ರದೇಶದಲ್ಲಿ ಅಪಾರ ಜನರು ಸೇರಿದ್ದು, ಉಳಿದವರಾದ್ರೂ ಬದುಕಿ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.

ಇನ್ನು ಮೃತಪಟ್ಟ 8 ಮಂದಿಯ ಮೃತದೇಹಗಳನ್ನು ಭಟ್ಕಳ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಮಾಜಿ ಶಾಸಕ ಸುನೀಲ್ ನಾಯ್ಕ, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಕೃಷ್ಣಮೂರ್ತಿ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.

Megha
the authorMegha

Leave a Reply

error: Content is protected !!
Latest news
ಭಟ್ಕಳ: ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ 8 ಮಂದಿ ಮೃತ- ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಹೈ ಕೋರ್ಟ್‌ CJಗೆ ಪತ್ರ ಬರೆದ ನೌಕರರು: ಸಮಾನ ಕೆಲಸಕ್ಕೆ ಸಮಾನ ವೇತನ ಬೇಕು! ಸಾರಿಗೆ ನಿಗಮ ನೌಕರರಿಗೆ ನ್ಯಾಯ ಬೇಕು! ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿಗಾಗಿ ಪತ್ರ ಚಳವಳಿಗೆ ಮುಂದಾದ ಸಾರಿಗೆ ನೌಕರರು: ಹೈ ಕೋರ್ಟ್‌ ಸಿಜೆಗೆ ಲೆಟರ್ ಬರೆಯಲು ... ತಂದೆ-ತಾಯಿ ಇಬ್ಬರೂ IAS ಆಗಿದ್ದರೆ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಏಕೆ ಮುಂದುವರಿಯ -ಬೇಕು: ಸುಪ್ರೀಂ ಕೋರ್ಟ್‌ ಮಹತ್ವದ ಪ್... KARNATAKA GOVT: ಕಾರ್ಮಿಕರ ಕನಿಷ್ಠ ವೇತನ ನಿಗದಿ ಮಾಡಿ ಸರ್ಕಾರದ ಆದೇಶ- ಮೇ 22ರಿಂದಲೇ ಜಾರಿ- ಕಾರ್ಮಿಕ ಅಧಿಕಾರಿ ತುಳಸ... ಕಲ್ಲಿದ್ದಲು ಗಣಿಯಲ್ಲಿ ಗ್ಯಾಸ್‌ ಸ್ಫೋಟ: 90 ಜನರು ಮೃತ, 100ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ KSRTC ತುಮಕೂರು ಡಿಸಿಗೆ ಲಂಚ ಸಂಗ್ರಹ ಆರೋಪ: ಸಂಬಂಧಿಕರ ಫೋನ್‌ ಪೇ ಬಳಸಿ ಸಿಕ್ಕ ಬಿದ್ದ ನೌಕರ ಆತ್ಮಹತ್ಯೆಗೆ ಯತ್ನ- ಪಾರ... ಬಿಎಂಟಿಸಿ ಹೊಸ ವೇಗದೂತ ಬಸ್‌ಗಳ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು ನಿವೇಶನ ರಹಿತ 500 ಬಡ ಕುಟುಂಬಗಳಿಗೆ ಜೂನ್ ತಿಂಗಳಲ್ಲಿ ನಿವೇಶನ ವಿತರಣೆ: ಸಚಿವ ಮುನಿಯಪ್ಪ