ಮಂಡ್ಯ: ದೇವಾಲಯಗಳು ನಮ್ಮ ಸಂಸ್ಕೃತಿ ಹಾಗೂ ಪರಂಪರೆಯ ಪ್ರತಿಬಿಂಬವಾಗಿವೆ. ಶರಣ ಶ್ರದ್ಧಾ ಆಧ್ಯಾತ್ಮಿಕ ಕೇಂದ್ರವಾಗಿರುವ ದೇಗುಲಗಳನ್ನು ಉಳಿಸಿ ಸಂರಕ್ಷಣೆ ಮಾಡಿ ನಮ್ಮ ಮುಂದಿನ ತಲೆಮಾರಿಗೆ ಜೋಪಾನ ಮಾಡುವುದು ನಮ್ಮೆಲ್ಲರ ಆಧ್ಯ ಕರ್ತವ್ಯವಾಗಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಮಮತಾಶೆಟ್ಟಿ ಹೇಳಿದರು.
ಜಿಲ್ಲೆಯ ಬೂಕನಕೆರೆಯಲ್ಲಿ ಶ್ರೀ ಸಾಯಿ ಸೇವಾ ಟ್ರಸ್ಟ್ ನಿರ್ಮಿಸುತ್ತಿರುವ ಸಾಯಿಬಾಬಾ ಮಂದಿರ ನಿರ್ಮಾಣಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಖಾವಂದರಾದ ವೀರೇಂದ್ರ ಹೆಗ್ಗಡೆ ಅವರು ಮಂಜೂರು ಗೊಳಿಸಿರುವ 1 ಲಕ್ಷ ರೂ.ಗಳ ಡಿಡಿಯನ್ನು, ಟ್ರಸ್ಟ್ ಅಧ್ಯಕ್ಷ ಬಿ.ಜಿ ಪ್ರಕಾಶ್ ಮತ್ತು ಕಾರ್ಯದರ್ಶಿ ಮಂಜುನಾಥ್ ಅವರಿಗೆ ಹಸ್ತಾಂತರಿಸಿ ಮಾತನಾಡಿದರು.
ಖಾವಂದರು ಸಾಯಿಬಾಬಾರ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗೆ ಒಂದು ಲಕ್ಷ ರೂ. ಚೆಕ್ ನೀಡಿದ್ದಾರೆ. ಹೊಯ್ಸಳ ವಾಸ್ತುವೈಭವದ ಶಿಲ್ಪಕಲೆಯ ಬೀಡಾದ ಕೃಷ್ಣರಾಜಪೇಟೆ ತಾಲೂಕಿನಲ್ಲಿ ಹತ್ತಾರು ಸುಂದರವಾದ ದೇವಾಲಯಗಳ ಪುನರುಜ್ಜೀವನ ಮಾಡಿಸಿರುವ ಹೆಗ್ಗಡೆಯವರು ರಾಜ್ಯದಲ್ಲಿ ಯಾವುದೇ ದೇವಾಲಯದ ನಿರ್ಮಾಣಕ್ಕೆ ಧನ ಸಹಾಯ ಮಾಡಲು ಮುಂದಾಗಿದ್ದಾರೆ ಎಂದರು.
ಬೂಕನಕೆರೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನರಸಿಂಹರಾಜು, ಗ್ರಾಪಂ ಮಾಜಿ ಸದಸ್ಯ ಶ್ಯಾಮಪ್ರಸಾದ್, ರೈತ ಮುಖಂಡ ನಾಗರಾಜ್, ಮುಖಂಡರಾದ ಮಂಜು, ಲಕ್ಷ್ಮೀಕಾಂತ್ ಒಕ್ಕೂಟದ ಅಧ್ಯಕ್ಷರಾದ ಬಿ.ಎಸ್. ಶುಭಾ, ಪದ್ಮಮ್ಮ, ಮೇಲ್ವಿಚಾರಕರಾದ ರಾಜಪ್ಪ, ಸೇವಾ ಪ್ರತಿನಿಧಿ ರೇಖಾ ಕುಮಾರ್ ಉಪಸ್ಥಿತರಿದ್ದರು.