ಬೆಂಗಳೂರು: ರಾಜ್ಯದಲ್ಲಿ ಎರಡು ಹಂತಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಆಯೋಗ ಸ್ಪಷ್ಟವಾಗಿ ಹೇಳಿದೆ.
ಗುತ್ತಿಗೆದಾರರು ಪ್ರಸ್ತುತ ಗ್ರಾಮ ಪಂಚಾಯಿತಿ ಕಾಮಗಾರಿ ನಿರ್ವಹಿಸುತ್ತಿದ್ದಲ್ಲಿ ಅವರು ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಲು ಅನರ್ಹರಾಗುತ್ತಾರೆ. ಈ ವಿಷಯದಲ್ಲಿ ಚುನಾವಣಾಧಿಕಾರಿಗಳಿಗೆ ಮಾಹಿತಿ ಇಲ್ಲವಾದಲ್ಲಿ ಅವರು ಯಾವುದೇ ಕ್ರಮ ತೆಗೆದುಕೊಳ್ಳುವ ಅಗತ್ಯವಿಲ್ಲ.
ಆದರೆ, ಒಂದು ವೇಳೆ ಅಭ್ಯರ್ಥಿಯೊಬ್ಬರು ಈ ಬಗ್ಗೆ ಮಾಹಿತಿಯನ್ನು ಸೂಕ್ತ ದೃಢೀಕರಣದೊಂದಿಗೆ ನೀಡಿದಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ. ಇದರಿಂದ ಈ ಹಿಂದೆ ಗ್ರಾಪಂ ವ್ಯಾಪ್ತಿಯಲ್ಲಿ ಗುತ್ತಿಗೆ ಪಡೆದು ಸರ್ಕಾರ ಹಣ ಖರ್ಚುಮಾಡಿ ನಾವೇ ಕಾಮಗಾರಿಗಳನ್ನು ಮಾಡಿ ಗ್ರಾಮಗಳನ್ನು ಅಭಿವೃದ್ಧಿ ಪಡಿಸಿದ್ದು ಎಂದು ಜನರನ್ನುಯಾಮಾರಿಸುತ್ತಿದ್ದವರಿಗೆ ಈ ಸೂಚನೆ ಬಿಸಿ ಮುಟ್ಟಿಸಿದೆ ಎಂದು ಹೇಳಬಹುದು.