NEWSನಮ್ಮರಾಜ್ಯಸಿನಿಪಥ

2ನೇ ವರ್ಷದ ಪುಣ್ಯಸ್ಮರಣೆ- ಅಂಬರೀಶ್‍ನನ್ನು ಮಂಡ್ಯ ಜನ ದೇವರಂತೆ ಪೂಜಿಸುತಿದ್ರು: ಸುಮಲತಾ

ಅವರ ಮಗನಾಗಿ ಹುಟ್ಟಿದ್ದು ನನ್ನ ಪುಣ್ಯ ಎಂದ ಅಭಿಷೇಕ್‌ l ಅಪ್ಪಾಜಿ ಸಮಾಧಿ ದೇವಸ್ಥಾನವಿದ್ದಂತೆ ಅಂದರು ದರ್ಶನ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಂಡ್ಯದ ಜನ ಅಂಬರೀಶ್‌ ಅವರನ್ನು ವಿಶೇಷವಾಗಿ ದೇವರಂತೆ ಪೂಜಿಸುತ್ತಿದ್ದರು. ಪ್ರೀತಿ ಒಂದೇ ಅವರು ಸಂಪಾದಿಸಿರೋ ಆಸ್ತಿ. ಜನರು ಅವರನ್ನು ಹೃದಯಲ್ಲಿ ಇಟ್ಟುಕೊಂಡು ಪೂಜಿಸ್ತಾ ಇದ್ದಾರೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.

ಇಂದು ಅಂಬಿ ಎರಡನೇ ವರ್ಷದ ಪುಣ್ಯತಿಥಿಯ ಅಂಗವಾಗಿ ಸಮಾಧಿಗೆ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಅಂಬರೀಶ್ ಅವರು ಎಲ್ಲರನ್ನೂ ಕುಟುಂಬದ ಸದಸ್ಯರಂತೆ ನೋಡಿಕೊಳ್ಳುತ್ತಿದ್ದರು. ಎಲ್ಲರ ಪ್ರೀತಿ ಗಳಿಸಿ ಆ ಪ್ರೀತಿಯನ್ನ ಶಾಶ್ವತವಾಗಿ ಉಳಿಸಿಕೊಂಡಿದ್ದಾರೆ ಎಂದರು.

ಮಂಡ್ಯದಲ್ಲಿ ನಿಜಕ್ಕೂ ಅಂಬಿ ಗುಡಿ ಕಟ್ಟಿರೋದು ಅದ್ಭುತ. ಆ ಊರಿನವರು ನನ್ನಿಂದ ಯಾವುದೇ ಸಹಾಯ ತಗೊಂಡಿಲ್ಲ. ನನಗೆ ಇದು ಸರ್ಪ್ರೈಸ್, ಜತೆಗೆ ಅಂಬಿ ಪ್ರೀತಿಗೆ ಕಂಚಿನ ಪುತ್ಥಳಿ ಸಂಕೇತ. ಅವರು ಬದುಕಿದ್ದಾಗ ಪ್ರತಿದಿನ ಜನರ ಮಧ್ಯೆ ಇರುತ್ತಿದ್ದರು ಎಂದು ತಿಳಿಸಿದರು.

ಸಚಿವ ಗೋಪಾಲಯ್ಯ ಮಾತನಾಡಿ, ಅಂಬರೀಶ್ ಬದುಕಿದ್ದಾಗ ಎಲ್ಲರಿಗೂ ಪ್ರೀತಿ-ಪಾತ್ರರಾಗಿದ್ದರು. ಎಲ್ಲರಿಗೂ ಸಹಾಯ ಮಾಡಿದ್ದ ಮೇರುನಟ, ನನ್ನ ಅವರ ನಡುವೆ ಬಾಂಧವ್ಯ ಚೆನ್ನಾಗಿತ್ತು. ಅಂಬಿ ಸಚಿವರಾಗಿದ್ದಾಗ ನಮ್ಮ ಕ್ಷೇತ್ರಕ್ಕೆ ಮಾಡಿರೋ ಸಹಾಯ ಮರೆಯುವಂತಿಲ್ಲ. ಸ್ಮಾರಕ ಕಟ್ಟೋ ಬಗ್ಗೆ ಮುಖ್ಯಮಂತ್ರಿ ಜತೆ ಮೀಟಿಂಗ್ ಆಗಿದೆ ಎಂದು ತಿಳಿಸಿದರು.

ಅವರ ಮಗನಾಗಿ ಹುಟ್ಟಿದ್ದು ನನ್ನ ಪುಣ್ಯ
ರೆಬೆಲ್ ಸ್ಟಾರ್ ಅಂಬರೀಶ್ ವಿಧಿವಶರಾಗಿ ಇಂದಿಗೆ 2 ವರ್ಷವೇ ಕಳೆದು ಹೋಗಿದೆ. ಇಂದು ಅಂಬಿ ಪುಣ್ಯತಿಥಿಯಾಗಿದ್ದು, ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿದ ಅಂಬಿಪುತ್ರ ಅಭಿಷೇಕ್ ಮಾತನಾಡಿ, ಅರ್ಜುನ್ ಸರ್ಜಾ ಅವರು ಮನೆಗೆ ಬಂದಿದ್ದ ಸಮಯದಲ್ಲಿ ಸುಮಾರು 4 ಗಂಟೆ ಅಪ್ಪನ ಬಗ್ಗೆ ಚರ್ಚೆ ಮಾಡಿದ್ವಿ. ನಿನ್ನೆ ಕೂಡ ನಾನು ಹಾಗೂ ದರ್ಶನ್ ಅಣ್ಣ ಇಬ್ಬರೇ ಮನೆಯಲ್ಲಿ ಕುಳಿತುಕೊಂಡು ಹಳೆಯ ನೆನಪುಗಳನ್ನು ಹಂಚಿಕೊಳ್ತಿದ್ವಿ. ಹೀಗೆ ಅಪ್ಪ ತುಂಬಾ ನೆನಪಾಗ್ತಾರೆ ಎಂದರು.

ಅಪ್ಪನ ಸಾಧನೆಗಳ ಬಗ್ಗೆ ಮಾತನಾಡಲು ನಾನು ತುಂಬಾ ಚಿಕ್ಕವನು. ಅವರು ಮತ್ತು ಅವರ ಅಭಿಮಾನಿಗಳ ಬಗ್ಗೆ ಮಾತನಾಡಲು ನನಗೆ ಅಧಿಕಾರ ಇಲ್ಲ. ಅವರ ಮಧ್ಯದಲ್ಲಿ ಸಂಬಂಧ ಅಷ್ಟೊಂದು ಗಟ್ಟಿಯಾಗಿತ್ತು. ಇಂದಿಗೂ ಅದೇ ರೀತಿ ಇದೆ. ನಮಗೂ ಇಂದು ನಮಗೂ ಅಷ್ಟೇ ಪ್ರೀತಿ ತೋರಿಸುತ್ತಿದೆ. ಅವರ ಮಗನಾಗಿ ಹುಟ್ಟಲು ನಾನು ಪುಣ್ಯ ಮಾಡಿದ್ದೀನಿ ಎಂದು ಹೇಳಿದರು.

ಅಪ್ಪಾಜಿ ಸಮಾಧಿ ದೇವಸ್ಥಾನವಿದ್ದಂತೆ: ದರ್ಶನ್‌
ರೆಬೆಲ್ ಸ್ಟಾರ್ ಅಂಬರೀಶ್ ಅವರು ಬೈಯೋದನ್ನು ಯಾವತ್ತೂ ಮಿಸ್ ಮಾಡಿಕೊಳ್ಳುತ್ತೇನೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ.

ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಅಪ್ಪಾಜಿ 24 ಗಂಟೆಯೂ ನಮ್ಮ ಜೊತೆಗೇ ಇರುತ್ತಾರೆ. ಈ ಕಡೆ ಬಂದ್ರೆ ಸಮಾಧಿ ಬಳಿ ಬಂದೇ ಬರುತ್ತೇನೆ. ಇದು ನಮಗೆ ದೇವಸ್ಥಾನ ಇದ್ದಂತೆ ಎಂದರು.

ಅವರು ನನ್ನ ಬೈಯುತ್ತಿರುವ ನೆನಪು ತುಂಬಾ ಕಾಡುತ್ತಿದೆ. ಆಗಾಗ ಬೈತಾ ಇದ್ರು. ಈವಾಗ ಅದು ಇಲ್ಲ ಅನ್ನೋ ಬೇಜಾರಿದೆ. ಇಂದು ಆ ವಾಯ್ಸ್ ನಮ್ಮ ಜೊತೆ ಇಲ್ಲ, ಬರ್ರೋ ಇಲ್ಲಿ ಅಂತ ಹೇಳೋ ವಾಯ್ಸ್ ಇಲ್ಲ. ಹೀಗಾಗಿ ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ ಎಂದು ಹೇಳಿದರು.

ಇದಕ್ಕೂ ಮುನ್ನ ಟ್ವೀಟ್ ಮಾಡಿದ್ದ ದರ್ಶನ್, ನನ್ನ ಪ್ರೀತಿಯ ಅಂಬಿ ಅಪ್ಪಾಜಿ ಇಂದಿಗೆ ದೈಹಿಕವಾಗಿ ಅಗಲಿ 2 ಸಂವತ್ಸರಗಳು ಕಳೆದಿವೆ. ಆದರೆ ನಮ್ಮೆಲ್ಲರ ಮನಗಳಲ್ಲಿ ಸದಾ ಚಿರಸ್ಥಾಯಿಯಾಗಿ ಉಳಿದಿದ್ದಾರೆ. ಅವರ ನೇರನುಡಿಯ ವ್ಯಕ್ತಿತ್ವ, ಮಾಡಿರುವ ಸಹೃದಯಿ ಕಾರ್ಯಗಳು ಸದಾ ಕನ್ನಡಿಗರ ಮನಸ್ಸಲ್ಲಿ ಜೀವಂತವಾಗಿರುತ್ತವೆ ಎಂದು ಬರೆದುಕೊಳ್ಳುವ ಮೂಲಕ ಅಂಬಿ ನೆನಪು ಮಾಡಿಕೊಂಡಿದ್ದಾರೆ.

Miss you Anna
ಎಲ್ಲರಿಂದಲೂ ಪ್ರೀತಿಸಲ್ಪಡುವುದಕ್ಕೂ, ಎಲ್ಲರೂ ಭಯಪಡುವುದಕ್ಕೂ ಬಹಳ ವ್ಯತ್ಯಾಸವಿದೆ. ಎಲ್ಲರ ಪ್ರೀತಿ, ಅಭಿಮಾನ ಗಳಿಸುವಂಥದ್ದಾಗಿತ್ತು ಅಂಬರೀಶಣ್ಣನ ವ್ಯಕ್ತಿತ್ವ. Miss you Anna ಎಂದು ಸಂಸದ ಪ್ರತಾಪ್‌ಸಿಂಹ ಟ್ವೀಟ್‌ ಮಾಡಿದ್ದಾರೆ.

 

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ