ಬೆಂಗಳೂರು: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ 2021ರ ಫೆ.26ರಿಂದ ಫೆ.28ರವರೆಗೆ ನಡೆಸಲು ಕನ್ನಡ ಸಾಹಿತ್ಯ ಪರಿಷತ್ತು ನಿರ್ಧರಿಸಿದೆ.
ಪರಿಷತ್ ಅಧ್ಯಕ್ಷ ಮನು ಬಳಿಗಾರ್ ನೇತೃತ್ವದಲ್ಲಿ ನಿನ್ನೆ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಹೀಗಾಗಿ ಮಾರ್ಗಸೂಚಿಗಳನ್ನು ಸಡಿಲಗೊಳಿಸಿ, ಅಕ್ಷರ ಜಾತ್ರೆ ನಡೆಸಲು ಅನುವು ಮಾಡಿಕೊಡಬೇಕೆಂದು ಸರ್ಕಾರಕ್ಕೆ ಮನವಿ ಸಲ್ಲಿಸುವ ಬಗ್ಗೆ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು. ಇದಕ್ಕೆ ಸರ್ವಾನುಮತದಿಂದ ಒಪ್ಪಿಗೆ ಸಿಕ್ಕಿತು.
ಸಭೆ ನಡೆಸುವುದಕ್ಕೂ ಮೊದಲು ಅಕ್ಷರ ಜಾತ್ರೆಗೆ ದಿನಾಂಕ ನಿಗದಿ ಸಂಬಂಧ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವರಾಗಿರುವ ಬಸವರಾಜ ಬೊಮ್ಮಾಯಿ, ಕೃಷಿ ಸಚಿವ ಬಿ.ಸಿ. ಪಾಟೀಲ ಹಾಗೂ ಹಾವೇರಿ ಶಾಸಕ ನೆಹರೂ ಓಲೇಕಾರ್ ಅವರೊಂದಿಗೆ ಚರ್ಚಿಸಲಾಯಿತು ಎಂದು ಪರಿಷತ್ ಅಧ್ಯಕ್ಷ ಮನು ಬಳಿಗಾರ್ ತಿಳಿಸಿದ್ದಾರೆ.