NEWSನಮ್ಮಜಿಲ್ಲೆ

ಕಸದ ನಿರ್ವಹಣೆಗೆ ಬಿಬಿಎಂಪಿಯಿಂದ ಪ್ರತ್ಯೇಕ ಮಂಡಲಿ ಪ್ರಸ್ತಾವನೆ: ಎಎಪಿ ವಿರೋಧ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೃಹತ್ ಸಮಸ್ಯೆಯಾಗಿ, ಮಾಫಿಯಾವಾಗಿ ಬದಲಾಗಿರುವ ತ್ಯಾಜ್ಯ ನಿರ್ವಹಣೆಗೆ ಪ್ರತ್ಯೇಕ ಸ್ವಾಯತ್ತ ಮಂಡಳಿ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸುವುದಾಗಿ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಹೇಳಿದ್ದು, ಈ ನಡೆಯನ್ನು ಆಮ್ ಆದ್ಮಿ ಪಕ್ಷ ವಿರೋಧಿಸುತ್ತದೆ ಎಂದು ಬಿಬಿಎಂಪಿ ಕ್ಯಾಂಪೇನ್ ಉಸ್ತುವಾರಿ, ರಾಜ್ಯ ಸಹ ಸಂಚಾಲಕಿ ಶಾಂತಲಾ ದಾಮ್ಲೆ ಹೇಳಿದ್ದಾರೆ.

ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಾಗಿ ಬದಲಾಗುವುದಕ್ಕಿಂತ ಮೊದಲು ಬೆಂಗಳೂರಿನ ಕಸ ನಿರ್ವಹಣೆ ಆರೋಗ್ಯ ಅಧಿಕಾರಿಗಳ ಅಡಿಯಲ್ಲಿ ಬರುತ್ತಿತ್ತು ಆನಂತರ ಇದನ್ನು ಇಂಜಿನಿಯರಿಂಗ್ ವಿಭಾಗಕ್ಕೆ ವರ್ಗಾಯಿಸಲಾಯಿತು, ಇದಾದ ನಂತರ ಕಸದ ಮಾಫಿಯಾ ಕೈಗೆ ಸಿಲುಕಿದ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟು ಇಡೀ ಬೆಂಗಳೂರು ಕಸದ ಕೊಂಪೆಯಾಗಿ ಮಾರ್ಪಟ್ಟಿದೆ ಎಂದು ದೂರಿದರು.

ಇಡೀ ಸರ್ಕಾರವನ್ನೇ ನಿಯಂತ್ರಣ ಮಾಡುವಷ್ಟು ಬೆಳೆದಿರುವ ಕಸದ ಮಾಫಿಯಾಗಳ ಚಿತಾವಣೆಯಿಂದ ಈ ಕೆಲಸಕ್ಕೆ ಬಿಬಿಎಂಪಿ ಕೈ ಹಾಕಿದೆ. 150 ಕೋಟಿ ರೂ. ವೆಚ್ಚದ ಕಸ ನಿರ್ವಹಣೆ ಬಜೆಟ್ ಈಗಾಗಲೇ 1200 ಕೋಟಿರೂ.ಗೆ ಮುಟ್ಟಿದೆ. ಇನ್ನು ಪ್ರತ್ಯೇಕ ಮಂಡಳಿ ರಚಿಸಿ ಮತ್ತಷ್ಟು ಜನರ ಹಣವನ್ನು ತಿನ್ನುವ ಹುನ್ನಾರ ನಡೆಯುತ್ತಿದೆ ಎಂದು ಕಿಡಿಕಾರಿದರು.

ಪ್ರಸ್ತುತ ಹಲ್ಲುಕಿತ್ತ ಹಾವಿನಂತಾಗಿರುವ ಬಿಬಿಎಂಪಿಯನ್ನು ಮತ್ತಷ್ಟು ದೌರ್ಬಲ್ಯವಾಗಿಸುವ ಹುನ್ನಾರ ಇದಾಗಿದೆ. ನೀರು ಸರಬರಾಜನ್ನು ಜಲ ಮಂಡಳಿಗೆ ನೀಡಲಾಗಿದೆ, ಆಸ್ತಿ ನಿರ್ವಹಣೆ, ಶಾಲೆಗಳ, ಆಸ್ಪತ್ರೆಗಳ ನಿರ್ವಹಣೆ ಹೀಗೆ ಒಂದೊಂದೆ ನಿಯಂತ್ರಣವನ್ನು ಕಿತ್ತುಹಾಕಿ ಕೊನೆಗೊಂದು ದಿನ ಕೇವಲ ಅತೃಪ್ತರನ್ನು ಕೂರಿಸುವ ಆವಾಸಸ್ಥಾನ ಆಗಲಿದೆ ಎಂದು ವ್ಯಂಗ್ಯವಾಡಿದರು.

ಈ ಮೂಲಕ ಜನತೆಯು ಪ್ರಶ್ನೆ ಮಾಡುವ ಹಕ್ಕನ್ನು ಕಿತ್ತುಕೊಳ್ಳಲಾಗುತ್ತಿದೆ. ಜನಪ್ರತಿನಿಧಿಗಳಿಗೆ ಇರುವ ಸಮುದಾಯ ಆರೋಗ್ಯ ಜವಾಬ್ದಾರಿಯನ್ನು ಮರೆಮಾಚಿ ಇಡೀ ಮಾಫಿಯಾವನ್ನು ಪ್ರಭಾವಿ ಶಾಸಕರು, ಸಚಿವರು ತಮ್ಮ ಕೈಯಲ್ಲಿ ಹಿಡಿಯುವ ಹುನ್ನಾರ ಇದಾಗಿದೆ ಎಂದರು.

ಕಿಡ್ನಿ ವೈಫಲ್ಯದಿಂದ ರೋಗಿ ಹಂತ ಹಂತವಾಗಿ ಸಾಯುವಂತೆ ಬಿಬಿಎಂಪಿಯನ್ನು ಹಂತ ಹಂತವಾಗಿ ಸಾಯಿಸಲಾಗುತ್ತಿದೆ. ಆಯುಕ್ತ ಮಂಜುನಾಥ್ ಪ್ರಸಾದ್ ಅವರು ಯಾರ ಮರ್ಜಿಗೆ ಒಳಗಾಗಿ ಈ ಕೆಲಸಕ್ಕೆ ಕೈಹಾಕಿದ್ದಾರೆ ಎಂಬುದು ಗೊತ್ತಿಲ್ಲ. ಆದರೆ ಈ ಕೆಲಸಕ್ಕೆ ಬಿಬಿಎಂಪಿಯಾಗಲಿ ಸರ್ಕಾರವಾಗಲಿ ಕೈ ಹಾಕಿದರೆ ಆಮ್ ಆದ್ಮಿ ಪಕ್ಷ ಬೃಹತ್ ಹೋರಾಟ ನಡೆಸುತ್ತದೆ ಎಂದು ಎಚ್ಚರಿಕೆ ನೀಡಿದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ