NEWSನಮ್ಮರಾಜ್ಯ

ವಿಧವಾ ವೇತನ ನೀಡಲಾಗದ ಮಟ್ಟಿಗೆ ಸರ್ಕಾರ ದಿವಾಳಿಯಾಗಿದೆ, ಆದರೂ ದುಂದುವೆಚ್ಚ: ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವೃದ್ಧಾಪ್ಯ, ವಿಧವಾ ವೇತನ ನೀಡಲಾಗದಷ್ಟರ ಮಟ್ಟಿಗೆ ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ.

ರಾಜ್ಯ ಸರ್ಕಾರ ದಿವಾಳಿಯಾಗಿದೆ. ವೃದ್ಧಾಪ್ಯ ವೇತನ, ವಿಧವಾ ವೇತನ ನೀಡಲು ಸರ್ಕಾರದ ಬಳಿ ಹಣವಿಲ್ಲ. ಇಂತಹ ಆರ್ಥಿಕ ಸಂಕಷ್ಟದ ನಡುವೆ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸಿ ಸರ್ಕಾರ ಇನ್ನಷ್ಟು ದುಂದುವೆಚ್ಚಕ್ಕೆ ಎಡೆಮಾಡಿಕೊಟ್ಟಿದೆ. ಇದು ಸಿಎಂ ಯಡಿಯೂರಪ್ಪ ಅವರಿಂದ ಅಧಿಕಾರ ಉಳಿಸಿಕೊಳ್ಳುವ ಸರ್ಕಸ್ಸಲ್ಲದೆ ಬೇರೇನಲ್ಲ ಎಂದು ಹೇಳಿದರು.

ಕೊರೊನಾದಿಂದ ಜನ ಬದುಕು ಸಾಗಿಸುವುದೇ ಕಷ್ಟವೆನ್ನುವ ಪರಿಸ್ಥಿತಿ ಇರುವಾಗ ಶುಲ್ಕ ಪಾವತಿಸಿಲ್ಲ ಎಂಬ ಕಾರಣಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳು ಆನ್‌ಲೈನ್ ಶಿಕ್ಷಣವನ್ನು ಕೈಬಿಡಲು ಹೊರಟಿರುವುದು ಅಮಾನವೀಯ. ಇದು ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ, ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಂಡು ಸಮಸ್ಯೆಯನ್ನು ಬಗೆಹರಿಸಬೇಕು ಎಂದು ತಾಕೀತು ಮಾಡಿದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ