NEWSನಮ್ಮರಾಜ್ಯರಾಜಕೀಯ

ಗ್ರಾಪಂ ಚುನಾವಣೆಗೆ ಸ್ಪರ್ಧಿಸಲು 21 ವರ್ಷ ವಯಸ್ಸಾಗಿರಬೇಕು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಎರಡು ಹಂತಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿದ್ದು, ಗ್ರಾಮ ಪಂಚಾಯಿತಿ ಸದಸ್ಯನಾಗಲು ಕನಿಷ್ಠ 21 ವರ್ಷ ವಯಸ್ಸಾಗಿರಬೇಕು ಎಂದು ಚುನಾವಣ ಆಯೋಗ ಸ್ಪಷ್ಟನೆ ಕೊಟ್ಟಿದೆ.

ಗ್ರಾಮ ಪಂಚಾಯಿತಿ ಚುನಾವಣೆ ಕುರಿತು ಚುನಾವಣಾ ಆಯೋಗ ಕೆಲವು ಸ್ಪಷ್ಟೀಕರಣ ನೀಡಿದ್ದು, ಈ ಸಂಬಂಧ ಚುನಾವಣಾ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಗಂಡ ಸರ್ಕಾರಿ ನೌಕರನಾಗಿದ್ದರೆ ಹೆಂಡತಿ ಚುನಾವಣೆಗೆ ಸ್ಪರ್ಧಿಸಬಹುದು. ಅದೇ ರೀತಿ ಹೆಂಡತಿ ಸರ್ಕಾರಿ ನೌಕರಳಾಗಿದ್ದಲ್ಲಿ ಗಂಡ ಕೂಡ ಸ್ಪರ್ಧೆ ಮಾಡಬಹುದಾಗಿದೆ.

ಒಬ್ಬ ಅಭ್ಯರ್ಥಿ ಒಂದು ಕ್ಷೇತ್ರಕ್ಕೆ ಗರಿಷ್ಠ 4 ನಾಮಪತ್ರಗಳನ್ನು ಸಲ್ಲಿಸಬಹುದು. ಆದರೆ, ಗುತ್ತಿಗೆದಾರರು ಪ್ರಸ್ತುತ ಗ್ರಾಮ ಪಂಚಾಯಿತಿ ಕಾಮಗಾರಿ ನಿರ್ವಹಿಸುತ್ತಿದ್ದಲ್ಲಿ ಅವರು ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಲು ಅನರ್ಹರಾಗುತ್ತಾರೆ ಎಂದು ಆಯೋಗ ಸ್ಪಷ್ಟನೆ ಕೊಟ್ಟಿದೆ.

ನಾಮಪತ್ರ ವಾಪಸ್‌ ಪಡೆಯಲು ಸೂಚಕರ ಬದಲಾಗಿ ಬೇರೊಬ್ಬರನ್ನು ಮತದಾರನ ಮುಖಾಂತರ ಕಳುಹಿಸಿದರೆ ಅದನ್ನು ಪರಿಗಣಿಸಬೇಕಿಲ್ಲ. ಅಭ್ಯರ್ಥಿ, ಸೂಚಕ ಅಥವಾ ಅವನ ಏಜೆಂಟನ ಮುಖಾಂತರ ಮಾತ್ರ ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಬಹುದು ಎಂದು ಹೇಳಿದೆ.

ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿ ಹಾಗೂ ಸೂಚಕ ಗ್ರಾಮ ಪಂಚಾಯಿತಿ ಮತದಾರನಾಗಿರಬೇಕು. ಮೀಸಲು ಸ್ಥಾನಕ್ಕೆ ಸ್ಪರ್ಧಿಸುವ ಅಭ್ಯರ್ಥಿಗಳಿಂದ ಅಧಿಕೃತ ಮೂಲ ಜಾತಿ ಪ್ರಮಾಣ ಪತ್ರವನ್ನು ಪಡೆದುಕೊಳ್ಳಬೇಕು. ಚುನಾವಣೆಗೆ ಸಾಮಾನ್ಯ ವರ್ಗಕ್ಕೆ 200 ರೂ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು, ಹಾಗೂ ಮಹಿಳಾ ಮೀಸಲಾತಿಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ 100 ರೂ. ಠೇವಣಿ ನಿಗದಿಡಿಸಲಾಗಿದೆ. ಒಬ್ಬ ಅಭ್ಯರ್ಥಿಗೆ ಸೂಚಕರಾಗಿರುವವರು ಸಹ ಅಭ್ಯರ್ಥಿಯಾಗಲು ಅವಕಾಶವಿದೆ.

ಸೂಚಕನು ಇಷ್ಟೇ ಅಭ್ಯರ್ಥಿಗಳಿಗೆ ಸೂಚಕರಾಗಿರಬೇಕೆಂಬ ನಿಯಮವಿಲ್ಲ. ಪರಿಶಿಷ್ಟ ಜಾತಿ ಪ್ರವರ್ಗಕ್ಕೆ ಮೀಸಲಾಗಿರುವ ಸ್ಥಾನಕ್ಕೆ ಯಾವುದೇ ನಾಮಪತ್ರ ಬಾರದೇ ಇದ್ದ ಪಕ್ಷದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿಯಿಂದ ನಾಮಪತ್ರ ಸ್ವೀಕರಿಸಬಹುದು. ಇದು ಹಿಂದುಳಿದ ವರ್ಗ ಎ ಮತ್ತು ಹಿಂದುಳಿದ ವರ್ಗ ಬಿ ಪ್ರವರ್ಗಕ್ಕೂ ಸಹ ಅನ್ವಯವಾಗುತ್ತದೆ. ಆದರೆ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕದೊಳಗೆ ಮೀಸಲಿಟ್ಟಿರುವ. ಪ್ರವರ್ಗದ ವ್ಯಕ್ತಿಯಿಂದ ನಾಮಪತ್ರ ಸ್ವೀಕೃತವಾದರೆ, ಬೇರೆ ಪ್ರವರ್ಗದ ವ್ಯಕಿ ಸಲ್ಲಿಸಿರುವ ನಾಮಪತ್ರವನ್ನು ಠೇವಣಿ ಹಣದೊಂದಿಗೆ ಹಿಂತಿರುಗಿಸಬೇಕಾಗುತ್ತದೆ ಎಂದು ಸ್ಪಷ್ಟನೆ ನೀಡಿದೆ.

Leave a Reply

error: Content is protected !!
LATEST
ಮೈಸೂರಿನಲ್ಲಿ ಸಚಿವರಿಗೆ ಕಪಾಳ ಮೋಕ್ಷ: ಎಚ್‌ಡಿಕೆ ಆರೋಪ ಸುಳ್ಳು ಎಂದ ಡಿಸಿಎಂ ಶಿವಕುಮಾರ್‌ ಮುಡಾ ಪ್ರಕರಣದ ಹೈಕೋರ್ಟ್‌ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಸಚಿವ ಜಮೀರ್‌ ವಿರುದ್ಧ ಕ್ರಮಕ್ಕೆ ರಾಜ್ಯಾಪಾಲರ ಸೂಚನ... ₹35 ಟಿಕೆಟ್‌ ಪಡೆದು ಓವರ್‌ಟ್ರಾವಲ್‌ ಮಾಡಿದ್ದು ಯುವತಿ- ತನಿಖಾ ಸಿಬ್ಬಂದಿ ಮೆಮೋ ಕೊಟ್ಟಿದ್ದು ಮಾತ್ರ ನಿರ್ವಾಹಕರಿಗೆ ಅದೃಷ್ಟ ತಂದುಕೊಟ್ಟ ಕಾರಿಗೆ ಅಂತ್ಯಕ್ರಿಯೆ ನೆರವೇರಿಸಿದ ಸಂಜಯ್ ಪೋಲ್ರಾ ಕುಟುಂಬ BMTC ದಕ್ಷಿಣ ವಿಭಾಗದ 7 ಘಟಕಗಳಲ್ಲೂ ಚಾಲನಾ ಸಿಬ್ಬಂದಿಯೇ ಕಸಗುಡಿಸಬೇಕು- ಕಂಡು ಕಾಣದಂತೆ ವರ್ತಿಸುವ ಡಿಸಿ ಆಶಾಲತಾ ಮೇಡಂ! KKRTC: ಬಾಲ ಬಿಚ್ಚಿದರೇ ನಿಮ್ಮ ತಲೆಗಳನ್ನು ಉರುಳಿಸಬೇಕಾಗುತ್ತದೆ ಎಂದು ನೌಕರರಿಗೆ ಜೀವ ಬೇದರಿಕೆ ಹಾಕಿದ ಡಿಎಂ ಎತ್ತಂಗಡಿ ಸಿಎಂ ಸ್ವಕ್ಷೇತ್ರ ರಂಗಸಮುದ್ರ ಸ್ಮಶಾನ ಭೂಮಿ ಮೇಲು ಬಿದ್ದ ವಕ್ಫ್‌ ಕಣ್ಣು- ಪಹಣಿಯಲ್ಲಿ 2021-22ರಿಂದ ವಕ್ಫ್‌ ಬೋರ್ಡ್ ಹ... BMTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ-ಎಲ್ಲರನ್ನೂ ಅಭಿನಂದಿಸಿದ ಸಾರಿಗೆ ಸಚಿವರು, ಅಧಿಕಾರಿಗಳು KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ