NEWSಬೆಂಗಳೂರುರಾಜಕೀಯ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌

ಸಂವಿಧಾನಬದ್ಧವಾಗಿ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದು, ಈ ಮೂಲಕ ಈವರೆಗೂ ರಾಜ್ಯ ಸರ್ಕಾರದಲ್ಲಿ ಸಚಿವರಾಗಿದ್ದ ಎಲ್ಲರೂ ಮಾಜಿ ಸಚಿವರಾಗಿದ್ದಾರೆ.

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ನಿನ್ನೆ ಗುರುವಾರ ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ಇಂದು ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ.

ಸಂವಿಧಾನಬದ್ಧವಾಗಿ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದು, ಈ ಮೂಲಕ ಈವರೆಗೂ ರಾಜ್ಯ ಸರ್ಕಾರದಲ್ಲಿ ಸಚಿವರಾಗಿದ್ದ ಎಲ್ಲರೂ ಮಾಜಿ ಸಚಿವರಾಗಿದ್ದಾರೆ.

ಇನ್ನು ಸಿಎಂ ರಾಜೀನಾಮೆ ಅಂಗಿರಿಸಿರುವ ಬಗ್ಗೆ ಲೋಕಭವನದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಆದಾಗ್ಯೂ ಹೊಸ ಸರ್ಕಾರ ರಚನೆಯಾಗುವವರೆಗೆ ಇನ್ನೂ 2-3 ದಿನಗಳ ಕಾಲ ಸಿದ್ದರಾಮಯ್ಯ ಅವರು ಹಂಗಾಮಿ ಸಿಎಂ ಆಗಿ ಮುಂದುವರಿಯಲಿದ್ದಾರೆ.

ರಾಜ್ಯಪಾಲರು ನಿನ್ನೆ ಬೆಂಗಳೂರಿನಲ್ಲಿ ಇಲ್ಲದ ಕಾರಣ, ಅವರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗುರುವಾರ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಹಸ್ತಾಂತರಿಸಿದ್ದರು. ಸಿಎಂ ರಾಜೀನಾಮೆ ಪತ್ರವನ್ನು ಕಾರ್ಯದರ್ಶಿಗಳು ಸ್ವೀಕರಿಸಿದ್ದರೂ, ಸಂವಿಧಾನದ ನಿಯಮಾವಳಿಗಳ ಪ್ರಕಾರ ರಾಜ್ಯಪಾಲರು ಖುದ್ದಾಗಿ ಸಹಿ ಮಾಡದೇ ಅದು ಅಂಗೀಕಾರವಾಗುವುದಿಲ್ಲ.

ಹೀಗಾಗಿ ಇಂದೋರ್‌ಗೆ ಹೋಗಿದ್ದ ರಾಜ್ಯಪಾಲರು ಬೆಂಗಳೂರಿಗೆ ರಾತ್ರಿ ಆಗಮಿಸಿದ್ದರು. ಆ ಬಳಿಕ ಅಂದರೆ ಇಂದು ಬೆಳಗ್ಗೆಯೇ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಹೀಗಾಗಿ ಹೊಸ ಸರ್ಕಾರ ರಚನೆ ಪ್ರಕ್ರಿಯೆ ಜರೂರಾಗಿ ಸಾಗಿದೆ. ಇನ್ನು ಡಿ.ಕೆ.ಶಿವಕುಮಾರ್‌ ಮುಂದಿನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Megha
the authorMegha

Leave a Reply

error: Content is protected !!
Latest news
ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ ಕಾಂಗ್ರೆಸ್​​ ಹಿರಿಯ ನಾಯಕ ಮಾಜಿ ಕಾರ್ಮಿಕ ಸಚಿವ ವೆಂಕಟರಮಣಪ್ಪ ನಿಧನ ಕಾರಿನ ಟೈಯರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿ: ಕಾರಿನಲ್ಲಿದ್ದ ಐವರು ಸ್ಥಳದಲ್ಲೇ‌ ಮೃತ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ರಾಜೀನಾಮೆಗೂ ಮುನ್ನ ಸಿಎಂ ಕಚೇರಿ ಸಿಬ್ಬಂದಿ ವರ್ಗಾವಣೆ: ಆಪ್ತ, ಬೆಂಬಲಿಗ ಅಧಿಕಾರಗಳ ರಕ್ಷಣೆ ಮಾಡಿದರ ಸಿದ್ದು!? ಸಿಎಂ ಸ್ಥಾನಕ್ಕೆ ಹೈಕಮಾಂಡ್‌ ರಾಜೀನಾಮೆ ಕೊಡಿ ಅಂತ ಹೇಳಿದ್ರೆ ಕೊಡ್ತೀನಿ ಅಂದಿದ್ದೆ, ಮೊನ್ನೆ ಹೇಳಿದರು ಇಂದು ಕೊಟ್ಟೆ: ಸ... ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯರಿಂದ ಒಂದು ಪುಟದ ರಾಜೀನಾಮೆ ಪತ್ರ ಸಲ್ಲಿಕೆ