ಕಾರಿನ ಟೈಯರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿ: ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತ
ಅತಿ ವೇಗದಿಂದಾಗಿ ಕಾರಿನ ಟೈಯರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಅಸುನೀಗಿದ್ದಾರೆ.
Megha29.05.2026

ಚಿತ್ರದುರ್ಗ: ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟಗೊಂಡು ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿ ಗೇಟ್ ಬಳಿ ನಡೆದಿದೆ.
ಚಳ್ಳಕೆರೆ ಮೂಲದ ಛಾಯಾಗ್ರಾಹಕ ರಾಘವೇಂದ್ರ, ರುದ್ರೇಶ್, ಸೋಮ, ಮಲ್ಲಿಕಾರ್ಜುನ, ಪ್ರಮೋದ್ ಸ್ಥಳದಲ್ಲೇ ಮೃತಪಟ್ಟವರು.
ಕಾರಿನಲ್ಲಿ ಬಳ್ಳಾರಿಯಿಂದ ಚಳ್ಳಕೆರೆಗೆ ಆಗಮಿಸಿ ಮತ್ತೆ ಚಳ್ಳಕೆರೆ ಛಾಯಾಗ್ರಾಹಕರ ಸಂಘದ ಸಹ ಕಾರ್ಯದರ್ಶಿ ರಾಘವೇಂದ್ರ ಸೇರಿದಂತೆ ಐವರು ಬಳ್ಳಾರಿಗೆ ಹೋಗುತ್ತಿದ್ದರು. ಈ ವೇಳೆ ಅತಿ ವೇಗದಿಂದಾಗಿ ಕಾರಿನ ಟೈಯರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಅಸುನೀಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಪೊಲೀಸರು, ಮೃತ ದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದು, ಮುಂದಿನ ಕಾನೂನು ಕ್ರಮ ತೆಗೆದುಕೊಂಡಿದ್ದಾರೆ.
Related


Megha







