NEWSನಮ್ಮಜಿಲ್ಲೆನಮ್ಮರಾಜ್ಯ

ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು

ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ 2000 ರೂ.ಗಳನ್ನು ನೀಡುತ್ತಿದ್ದು. ರಾಜ್ಯದಲ್ಲಿ ಪ್ರತಿ ತಿಂಗಳು 200 ಕೋಟಿ ಗೃಹಲಕ್ಷ್ಮಿ ಹಣ ಮೃತರ ಬ್ಯಾಂಕ್ ಖಾತೆಗೆ ಜಮೆ ಆಗುತ್ತಿದೆ. ಈಗಾಗಲೇ ರಾಜ್ಯಮಟ್ಟದ ಸಭೆಯಲ್ಲಿ ಚರ್ಚಿಸಿ ಎಲ್ಲ ಜಿಲ್ಲೆಗಳಲ್ಲಿ ಮೃತರ ಖಾತೆಗಳ ಬಗ್ಗೆ ಮಾಹಿತಿ ಕಲೆ ಹಾಕಿ, ಸ್ಥಗಿತಗೊಳಿಸಲು ಕ್ರಮ ವಹಿಸಬೇಕು ಎಂದು ತೀರ್ಮಾನಿಸಲಾಗಿದೆ.

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಗೃಹಲಕ್ಷ್ಮಿ ಹಣ ಮೃತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗುತ್ತಿರುವುದನ್ನು ಪತ್ತೆ ಹಚ್ಚಿ ಅಂತಹ ಖಾತೆಗಳಿಗೆ ಹಣ ಜಮೆ ಆಗುವುದನ್ನು ತಡೆಯಬೇಕು ಎಂದು ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ರಾಜಣ್ಣ ತಾಕೀತು ಮಾಡಿದ್ದಾರೆ.

ಇಂದು ಜಿಲ್ಲಾಡಳಿತ ಭವನದ ಜಿಲ್ಲಾ‌ಪಂಚಾಯಿತಿ ಸಭಾಂಗಣಲ್ಲಿ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ 2000 ರೂ.ಗಳನ್ನು ನೀಡುತ್ತಿದ್ದು. ರಾಜ್ಯದಲ್ಲಿ ಪ್ರತಿ ತಿಂಗಳು 200 ಕೋಟಿ ಗೃಹಲಕ್ಷ್ಮಿ ಹಣ ಮೃತರ ಬ್ಯಾಂಕ್ ಖಾತೆಗೆ ಜಮೆ ಆಗುತ್ತಿದೆ. ಈಗಾಗಲೇ ರಾಜ್ಯಮಟ್ಟದ ಸಭೆಯಲ್ಲಿ ಚರ್ಚಿಸಿ ಎಲ್ಲ ಜಿಲ್ಲೆಗಳಲ್ಲಿ ಮೃತರ ಖಾತೆಗಳ ಬಗ್ಗೆ ಮಾಹಿತಿ ಕಲೆ ಹಾಕಿ, ಸ್ಥಗಿತಗೊಳಿಸಲು ಕ್ರಮ ವಹಿಸಬೇಕು ಎಂದು ತೀರ್ಮಾನಿಸಲಾಗಿದೆ. ಅದರಂತೆ ನಮ್ಮ ಜಿಲ್ಲೆಯಲ್ಲಿ ಮೃತರ ಹೆಸರಿನಲ್ಲಿರುವ ಖಾತೆಗಳನ್ನು ಪತ್ತೆ ಹಚ್ಚಬೇಕು.

ಮರಣ ಹೊಂದಿದ ನಂತರ ಎಷ್ಟು ತಿಂಗಳು ಅವರ ಖಾತೆಗೆ ಹಣ ಜಮೆ ಆಗಿದೆ ಅಷ್ಟು ಹಣವನ್ನು ವಾಪಸ್ಸು ಪಡೆಯಬೇಕು. ಜೊತೆಗೆ ಆ ಬ್ಯಾಂಕ್ ಖಾತೆಗೆ ಗೃಹ ಲಕ್ಷ್ಮಿ ಹಣ ಜಮೆ ಆಗದಂತೆ ನಿಲ್ಲಿಸಬೇಕು. ಮೃತರ ಹೆಸರಿನಲ್ಲಿ ಬೇರೆಯವರು ಹಣ ಬಳಸಿಕೊಂಡರೆ ಅದಕ್ಕೆ ಅರ್ಥವಿಲ್ಲ ಹಾಗಾಗಿ ಅಧಿಕಾರಿಗಳು ಕೂಡಲೇ ಇದರ ಬಗ್ಗೆ ಕ್ರಮ ಕೈಗೊಂಡು ವರದಿ ನೀಡಿ ಎಂದರು.

ಇತ್ತೀಚೆಗೆ ದೊಡ್ಡಬಳ್ಳಾಪುರದಲ್ಲಿ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಂಗ್ರಹಿಸಿಟ್ಟಿದ್ದ ಖಾಸಗಿ ವ್ಯಕ್ತಿಯ ವಿರುದ್ಧ ಏನು ಕ್ರಮ ಜರುಗಿಸಲಾಗಿದೆ? ಅನ್ನಭಾಗ್ಯ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಬಡವರಿಗೆ, ದೀನದಲಿತರಿಗೆ ಸಿಗಬೇಕಾದ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದು ತಪ್ಪು ಎಂದು ಉಪಾಧ್ಯಕ್ಷರೊಬ್ಬರು ಪ್ರಸ್ತಾಪಿಸಿದರು. ಇದಕ್ಕೆ ಆಹಾರ ಇಲಾಖೆ ಅಧಿಕಾರಿ ಉತ್ತರಿಸಿ ಈಗಾಗಲೇ ಆ ವ್ಯಕ್ತಿಯ ವಿರುದ್ಧ ಎಫ್ಐಆರ್ ಹಾಕಿ ಪ್ರಕರಣ ದಾಖಲಿಸಿ, ಅನ್ನಭಾಗ್ಯ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ ಎಂದರು.

ಬಿಪಿಎಲ್ ಕಾರ್ಡ್ ಗಳ ಏಕಾಏಕಿ ರದ್ದತಿಗೆ ಅಸಮಾಧಾನ ವ್ಯಕ್ತಪಡಿಸಿದ ಗ್ಯಾರಂಟಿ ಯೋಜನೆ ಸದಸ್ಯರು ಬಡವರು, ಮಧ್ಯಮ ವರ್ಗದವರು ಮಕ್ಕಳ ಶೈಕ್ಷಣಿಕ ಬಿಲ್ ಪಾವತಿ ಉದ್ದೇಶಕ್ಕಾಗಿ, ಅಂಗವಿಕಲರ ಪಿಂಚಣಿ ಸೇರಿದಂತೆ ಇತರೆ ಸರ್ಕಾರಿ ಕೆಲಸಗಳಿಗೆ ರೇಷನ್ ಕಾರ್ಡ್ ಉಪಯೋಗಿಸಲಾಗುತ್ತಿತ್ತು. ಆದರೆ ಏಕಾಏಕಿ ಬಿಪಿಎಲ್ ಕಾರ್ಡ್ ರದ್ದತಿ ಯಿಂದ ಹಲವರಿಗೆ ಅನಾನುಕೂಲವಾಗಿದೆ. ವಜಾ ಆಗಿರುವ ಬಿಪಿಎಲ್ ಕಾರ್ಡ್‌ಗಳನ್ನು ಖುದ್ದಾಗಿ ಭೇಟಿ ನೀಡಿ ಮರು ಪರಿಶೀಲಿಸಿ ಮತ್ತೆ ಅವರಿಗೆ ಕಾರ್ಡ್ ನೀಡಬೇಕು ಎಂದರು.

ಅದಕ್ಕೆ ಆಹಾರ ಇಲಾಖೆ ಅಧಿಕಾರಿ ಪ್ರತಿಕ್ರಿಯಿಸಿ ಜಿಲ್ಲೆಯಲ್ಲಿ ಅಂದಾಜು 10,000 ಬಿಪಿಎಲ್ ಕಾರ್ಡ್ ಸ್ಥಗಿತವಾಗಿದೆ, ಹಣಕಾಸು ವಹಿವಾಟು, ಆರ್ಥಿಕ ಸ್ಥಿತಿಗತಿಯನ್ನಾಧರಿಸಿ ಆಟೋಮ್ಯಾಟಿಕ್ ಆಗಿ ಬಿಪಿಎಲ್ ಕಾರ್ಡ್ ಸ್ಥಗಿತವಾಗಿದೆ. ಸದ್ಯಕ್ಕೆ ವಾರ್ಷಿಕ ಆದಾಯದ ಮಿತಿ 1.5 ಲಕ್ಷ ರೂ ಇದೆ. ಮುಂದೆ 3 ಲಕ್ಷಕ್ಕೆ ಆದಾಯದ ಮಿತಿ ಏರಿಕೆ ಮಾಡುವ ಸನ್ನಿವೇಶ ಇದ್ದು ಇದರಿಂದ ಬಿಪಿಎಲ್ ಕಾರ್ಡ್ ದಾರರಿಗೆ ಅನುಕೂಲ ಆಗಿಲಿದೆ ಎಂದರು.

ಗೃಹ ಜ್ಯೋತಿ ಯೋಜನೆಯಡಿ ಪ್ರತಿ ತಿಂಗಳ ಬಿಲ್ ಪಾವತಿಗೆ ಬಿಲ್ ಕಲೆಕ್ಟರ್ ಖುದ್ದು ಮೀಟರ್ ರೀಡರ್ ಪರಿಶೀಲಿಸಿ ಎಷ್ಟು ಯೂನಿಟ್ ಬಳಸಿದ್ದಾರೆ ಎಂದು ನಂತರ ಬಿಲ್ ಅನ್ನು ನೀಡಬೇಕು. ಆದ್ರೇ ಕೆಲವು ಭಾಗಗಳಲ್ಲಿ ಏಕಾಏಕಿ ಬಂದು ಮೀಟರ್ ನೋಡದೆ ಬಿಲ್ ನೀಡುವುದು, ದೂರದಲ್ಲಿಯೇ ಬಿಲ್ ಕೊಡುವಂತಹ ಘಟನೆಗಳು ನಡೆದಿವೆ. ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಿ, ಬಿಲ್ ಕಲೆಕ್ಟರ್ ಗಳಿಗೆ ಸೂಕ್ತ ತರಬೇತಿ ನೀಡಿ ಎಂದು ಅಧ್ಯಕ್ಷರು ತಿಳಿಸಿದರು.

ಶಕ್ತಿ ಯೋಜನೆಯಿಂದ ಜಿಲ್ಲೆಯ ಮಹಿಳೆಯರಿಗೆ ಸಾಕಷ್ಟು ಅನುಕೂಲ ವಾಗಿದೆ. ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಎಲ್ಲೆಲ್ಲಿ ಸರ್ಕಾರಿ ಬಸ್ಸುಗಳ ಕೊರತೆ ಇದೆ ಅಲ್ಲಿಗೆ ಬೇಡಿಕೆ ಅನುಗುಣವಾಗಿ ಬಸ್ ಗಳನ್ನು ಒದಗಿಸಿ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ದೇವನಹಳ್ಳಿ ಟೌನ್ ಹಾಗೂ ವಿಜಯಪುರ ಟೌನ್ ಹೈಟೆಕ್ ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ. ತ್ವರಿತ ಕಾಮಗಾರಿ ಅನುಷ್ಠಾನಕ್ಕೆ ಮೇಲಿನ ಹಂತದಲ್ಲಿ ಚರ್ಚಿಸಿ ಎಂದು ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.

ಇದುವರೆಗೆ ಗ್ಯಾರಂಟಿ ಯೋಜನೆಗಳು ತಲುಪದೇ ಇರುವ ಅರ್ಹ ಫಲಾನುಭವಿಗಳನ್ನು ಗುರುತಿಸಿ ಆಧಾರ್ ಕಾರ್ಡ್ ಲಿಂಕ್, ಈ ಕೆವೈಸಿ, ಬ್ಯಾಂಕ್ ಸಮಸ್ಯೆ ಇನ್ನಿತರ ಸಣ್ಣಪುಟ್ಟ ಸಮಸ್ಯೆಗಳಿದ್ದಲ್ಲಿ ಪರಿಹರಿಸಿ. ಇದರಿಂದ ಇತ್ತಿಚಿನ ಬೆಲೆ ಏರಿಕೆ ನಡುವೆ ನಮ್ಮ ಗ್ಯಾರಂಟಿ ಯೋಜನೆಗಳು ಬಡವರಿಗೆ, ಮಧ್ಯಮ ವರ್ಗದವರಿಗೆ ಆಶಾದಾಯಕ ಜೀವನಕ್ಕೆ ಸಹಕಾರಿ ಆಗಿದೆ. ಹಾಗಾಗಿ ಗ್ಯಾರಂಟಿ ಯೋಜನೆಗಳಿಂದ ಯಾರು ಕೂಡ ದೂರ ಉಳಿಯದಂತೆ ನೋಡಿಕೊಳ್ಳಿ ಎಂದರು.

ಜಿಲ್ಲಾ ಪಂಚಾಯತ್ ಸಿಇಒ ಡಾ.ವಸಂತಿ ಅಮರ್ ಅವರು ಮಾತನಾಡಿ ಪಂಚಗ್ಯಾರಂಟಿ ಯೋಜನೆಯಲ್ಲಿ ಒಂದಾದ ಯುವನಿಧಿಗೆ ಪ್ರಾಮುಖ್ಯತೆ ನೀಡಿ, ಯುವನಿಧಿಯೊಂದಿಗೆ ಅವರಿಗೆ ಉದ್ಯೋಗ ಒದಗಿಸುವ ಕೆಲಸ ಮಾಡಬೇಕಿದೆ. ಆಯಾ ತಾಲ್ಲೂಕು ಮಟ್ಟದಲ್ಲಿ ಸ್ಥಳೀಯ ಶಾಸಕರು, ಕಂಪೆನಿ ಮುಖ್ಯಸ್ಥರ ಸಭೆ ಕರೆದು ತಾಲ್ಲೂಕು ಮಟ್ಟದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲು ಕ್ರಮ ಕೈಗೊಳ್ಳಿ ಎಂದು ತಾಲ್ಲೂಕು ಇಒ ಗಳಿಗೆ ಸೂಚಿಸಿದರಲ್ಲದೆ ಉದ್ಯೋಗವಕಾಶದಲ್ಲಿ ಸ್ಥಳೀಯರಿಗೆ ಮೊದಲ ಆದ್ಯತೆ ನೀಡಲು ಕಂಪನಿಗಳಿಗೆ ನಿರ್ದೇಶನ ನೀಡಿ ಎಂದರು.

ಗ್ರಾಮ ಪಂಚಾಯಿತಿಗಳಲ್ಲಿ ನಡೆಯುವ ಗ್ರಾಮ ಸಭೆಗಳಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರ ಗಮನಕ್ಕೆ ತಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಕೂಡ ನಡೆಸಲು ಅವಕಾಶ ಕಲ್ಪಿಸಲಾಗುವುದು ಎಂದರು.

ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ರಾಜಶೇಖರ್, ಅಬ್ದುಲ್ ಬಶೀರ್, ನಾರಾಯಣಸ್ವಾಮಿ ಸೇರಿದಂತೆ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!
Latest news
ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ ಕಾಂಗ್ರೆಸ್​​ ಹಿರಿಯ ನಾಯಕ ಮಾಜಿ ಕಾರ್ಮಿಕ ಸಚಿವ ವೆಂಕಟರಮಣಪ್ಪ ನಿಧನ ಕಾರಿನ ಟೈಯರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿ: ಕಾರಿನಲ್ಲಿದ್ದ ಐವರು ಸ್ಥಳದಲ್ಲೇ‌ ಮೃತ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ರಾಜೀನಾಮೆಗೂ ಮುನ್ನ ಸಿಎಂ ಕಚೇರಿ ಸಿಬ್ಬಂದಿ ವರ್ಗಾವಣೆ: ಆಪ್ತ, ಬೆಂಬಲಿಗ ಅಧಿಕಾರಗಳ ರಕ್ಷಣೆ ಮಾಡಿದರ ಸಿದ್ದು!? ಸಿಎಂ ಸ್ಥಾನಕ್ಕೆ ಹೈಕಮಾಂಡ್‌ ರಾಜೀನಾಮೆ ಕೊಡಿ ಅಂತ ಹೇಳಿದ್ರೆ ಕೊಡ್ತೀನಿ ಅಂದಿದ್ದೆ, ಮೊನ್ನೆ ಹೇಳಿದರು ಇಂದು ಕೊಟ್ಟೆ: ಸ... ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯರಿಂದ ಒಂದು ಪುಟದ ರಾಜೀನಾಮೆ ಪತ್ರ ಸಲ್ಲಿಕೆ