Please assign a menu to the primary menu location under menu

NEWSನಮ್ಮರಾಜ್ಯಶಿಕ್ಷಣ-

15 ದಿನಗಳವರೆಗೆ ಆನ್‌ಲೈನ್‌ ತರಗತಿ ನಿರಾತಂಕ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಶುಲ್ಕ ಪಾವತಿಸದ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ತರಗತಿ ನಡೆಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಪದಾಧಿಕಾರಿಗಳೊಂದಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ. ಅನ್ಬುಕುಮಾರ್‌ ಶುಕ್ರವಾರ ಸಭೆ ನಡೆಸಿದರ ಫಲವಾಗಿ ಎಲ್ಲ ಮಕ್ಕಳಿಗೂ ಆನ್‌ಲೈನ್‌ ತರಗತಿಯನ್ನು ನಿಗದಿಯಂತೆ ನಡೆಸಲು ಖಾಸಗಿ ಶಾಲೆಗಳು ಸಮ್ಮತಿ ನೀಡಿವೆ.

ಕೋವಿಡ್‌ ಬಿಕ್ಕಟ್ಟಿನಿಂದ ಎದುರಿಸುತ್ತಿರುವ ಸಮಸ್ಯೆಗಳನ್ನು ಸರ್ಕಾರದ ಮುಂದಿಟ್ಟ ಖಾಸಗಿ ಶಾಲಾ ಆಡಳಿತ ಮಂಡಳಿಗಳು, ಸರ್ಕಾರ ನಮ್ಮಗೆ ಸಕರಾತ್ಮಕವಾಗಿ ಸ್ಪಂದಿಸದಿದ್ದರೆ ಮುಂದಿನ 15 ದಿನಗಳಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಎಚ್ಚರಿಕೆಯನ್ನು ನೀಡಿವೆ ಎಂದು ತಿಳಿದು ಬಂದಿದೆ.

ಖಾಸಗಿ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳ ಸಂಪೂರ್ಣ ಅರಿವು ಸರ್ಕಾರಕ್ಕೆ ಇದೆ. ಸಭೆಯ ಮಾತುಕತೆಯ ವಿವರವನ್ನು ಸಚಿವರ ಮುಂದೆ ಇಡಲಾಗುವುದು ಎಂದು ಆಯುಕ್ತರು ಭರವಸೆ ನೀಡಿದರು ಎಂದು ಹೇಳಲಾಗುತ್ತಿದೆ.

ಖಾಸಗಿ ಅನುದಾನರಹಿತ ಸಂಸ್ಥೆಗಳ ಬೋಧಕ–ಬೋಧಕೇತರ ಸಿಬ್ಬಂದಿ ಸಂಬಳ, ಕೆಲಸವಿಲ್ಲದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ, ಶಾಲಾ ಪ್ರವೇಶ ಶುಲ್ಕದ ಒಂದು ಕಂತನ್ನು ಮಾತ್ರ ಪಾವತಿಸಿ ಮತ್ತು ಒಂದು ಕಂತನ್ನೂ ಕಟ್ಟದಿರುವ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವುದಿಲ್ಲ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ ಎಂದು ಮಾಧ್ಯಮಗಳಲ್ಲಿ ಪ್ರಕಟವಾಗಿದ್ದರಿಂದ ಬಹಳಷ್ಟು ಪೋಷಕರು ಶುಲ್ಕ ಪಾವತಿಸುತ್ತಿಲ್ಲ ಎಂದು ಖಾಸಗಿ ಶಾಲೆಗಳ ಪದಾಧಿಕಾರಿಗಳು ಅಳಲು ತೋಡಿಕೊಂಡರು.

ಶುಲ್ಕ ಪಾವತಿಸುವಂತೆ ನ್ಯಾಯಾಲಯವೂ ಆದೇಶ ನೀಡಿದೆ. ಆದರೂ ಬಹುತೇಕ ಪೋಷಕರು ಇದನ್ನು ಪಾಲಿಸುತ್ತಿಲ್ಲ. 2019-20ರ ಸಾಲಿನ 137.5 ಕೋಟಿ ರೂ. ಹಾಗೂ 2020–21ನೇ ಸಾಲಿನಲ್ಲಿ ಹೆಚ್ಚುವರಿಯಾಗಿ 600 ಕೋಟಿ ರೂ. ಆರ್‌ಟಿಇ ಬಾಕಿ ಸರ್ಕಾರದಿಂದ ಬರಬೇಕು. ಈ ಹಣವೂ ಬಿಡುಗಡೆಯಾಗದೆ ಸಮಸ್ಯೆಯಾಗಿದೆ ಎಂದರು.

ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ಆಹಾರ ಕಿಟ್ ಹಾಗೂ ಗೌರವ ಧನ ನೀಡಬೇಕು ಮತ್ತು ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಮನವಿ ಮಾಡಿದರು.

ಒಂದು ಕಂತು ಪಾವತಿಸದ ಮಕ್ಕಳನ್ನೂ ಅನುತ್ತೀರ್ಣಗೊಳಿಸಬಾರದು ಎಂದು ಸಚಿವರು ಹೇಳಿಲ್ಲ. ಮಾಧ್ಯಮಗಳಲ್ಲಿ ಈ ಬಗ್ಗೆ ಬಂದಿರುವ ವರದಿಯಲ್ಲಿ ಸತ್ಯಾಂಶವಿಲ್ಲ ಎಂದು ಆಯುಕ್ತರು ಸ್ಪಷ್ಟ
ಪಡಿಸಿದರು. ಎಲ್ಲ ಸಮಸ್ಯೆಗಳನ್ನು ಆಲಿಸಿ, ಸಚಿವರ ಮುಂದೆ ಪ್ರಸ್ತಾಪಿಸುವುದಾಗಿ ಹೇಳಿದರು ಎಂದು ಕ್ಯಾಮ್ಸ್‌ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್‌ ತಿಳಿಸಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...