CrimeNEWSರಾಜಕೀಯ

ಸಂತೋಷ್ ಆತ್ಮಹತ್ಯೆ ಯತ್ನಕ್ಕೆ ಆ ಪರ್ಸನಲ್‌ ವಿಡಿಯೋ ಕಾರಣ? : ಡಿಕೆಶಿ

ವಿಜಯಪಥ ಸಮಗ್ರ ಸುದ್ದಿ

ಕಾರವಾರ: ಮುಖ್ಯಮಂತ್ರಿಗಳ ಕಾರ್ಯದರ್ಶಿ ಆತ್ಮಹತ್ಯೆಗೆ ಯತ್ನಿಸುವುದು ಸಾಮಾನ್ಯ ವಿಚಾರವಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರದ್ದೋ ವೈಯಕ್ತಿಕ ವಿಡಿಯೋವೊಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್‌.ಆರ್‌. ಸಂತೋಷ್ ಆತ್ಮಹತ್ಯೆ ಯತ್ನಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ ಎಂದು ತಿಳಿಸಿದರು.

ಇನ್ನು ಆ ವಿಡಿಯೋ ಅನ್ನು ವಿಧಾನಪರಿಷತ್ ಸದಸ್ಯರಿಗೆ ಹಾಗೂ ಸಚಿವರಿಗೆ ಕೊಟ್ಟಿದ್ದ ಮಾಹಿತಿ 2-3 ತಿಂಗಳ ಹಿಂದೆ ಬಂದಿತ್ತು. ಇದನ್ನು ಮುಂದಿಟ್ಟುಕೊಂಡು ವಿಧಾನಪರಿಷತ್ ಸದಸ್ಯರು, ಸಚಿವರಿಬ್ಬರೂ ಸೇರಿ ಸಿಎಂ ಹಾಗೂ ಸಂತೋಷ್ ಇಬ್ಬರಿಗೂ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರೆ ಎಂದು ಕೇಳಿದ್ದೆ. ಅದರ ಸತ್ಯಾಂಶಗಳೇನೆಂಬುದು ಗೊತ್ತಿಲ್ಲ ಎಂದು ಹೇಳಿದ್ದಾರೆ.

ಆ ವಿಡಿಯೋದಲ್ಲಿ ಗುಪ್ತ ಮಾಹಿತಿಯೇನೋ ಅಡಗಿದೆ. ಹಾಗಾಗಿ ಈ ಕುರಿತು ತನಿಖೆಯಾಗಬೇಕಿದೆ. ಸತ್ಯಾಂಶ ಏನಿದೆ ಎಂಬುದರ ಬಗ್ಗೆ ತನಿಖೆಯಾಗಬೇಕು. ಆದರೆ, ಈ ತನಿಖೆಯು ರಾಜ್ಯ ಸರ್ಕಾರದಿಂದ ಆಗಬಾರದು ಎಂದು ತಿಳಿಸಿದ್ದಾರೆ.

ಈ ನಡುವೆ ಸಚಿವ ಕೆ.ಎಸ್‌. ಈಶ್ವರಪ್ಪ ಅವರು ಪ್ರತಿಕ್ರಿಯಿಸಿ, ಯಾರದ್ದೋ ವೈಯಕ್ತಿಕ ವಿಡಿಯೋವೊಂದು ಎಂದು ಡಿಕೆಶಿ ಹೇಳುತ್ತಿದ್ದಾರಲ್ಲ ಅದರ ಕಾಪಿ ಇದ್ದರೆ ಬಹಿರಂಗಪಡಿಸಿ, ಅದನ್ನು ಬಿಟ್ಟು ಈ ರೀತಿ ಕೆಟ್ಟರಾಜಕಾರಣವನ್ನು ಮಾಡಬಾರದು. ನಾವು ದಬುಕ್ಕಿದ್ದೀವಿ ಎಂದು ತೋರಿಸಿಕೊಳ್ಳುವುದಕ್ಕೆ ಇಂಥ ಕೆಟ್ಟರಾಜಕಾರಣಮಾಡಬಾರದು ಎಂದು ಹೇಳಿದರು.

ಇನ್ನು ಅದ್ಯಾರೋ ಶಾಸಕರು ಮತ್ತು ಸಚಿವರು ಇದ್ದಾರೆ ಎಂದು ಹೇಳಿದ್ದಾರಲ್ಲ ಅವರ ಹೆಸರನ್ನಾದರೂ ಹೇಳಿ. ಅದನ್ನು ಬಿಟ್ಟು ಸುಮ್ಮನೇ ಈ ರೀತಿ ಪ್ರಚಾರಕ್ಕಾಗಿ ಹೇಳಿಕೆಗಳನ್ನು ನೀಡಬಾರದು ಎಂದು  ತಿಳಿಸಿದರು.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...