KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು
ಸ್ಥಳದಲ್ಲಿದ್ದ ಪ್ರಯಾಣಿಕರು ಸಹ ಧರ್ಮದೇಟು ನೀಡಿದ್ದು, ಯುವಕ ಬಸ್ ನಿಲ್ದಾಣದಿಂದ ಪರಾರಿಯಾಗಿದ್ದಾನೆ. ಲಿಂಗಸುಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಇಂಥ ಪುಂಡರಿಗೆ ಬುದ್ಧಿ ಕಲಿಸಬೇಕು ಎಂದು ಜನರು ಪೊಲೀಸರಲ್ಲಿ ಮನವಿ ಮಾಡಿದ್ದಾರೆ

ರಾಯಚೂರು: ಅನುಚಿತ ವರ್ತನೆ ತೋರಿದ ಯುವಕನಿಗೆ ಮಹಿಳೆ ಚಪ್ಪಲಿ ಏಟು ನೀಡಿರುವ ಘಟನೆ ಜಿಲ್ಲೆಯ ಲಿಂಗಸುಗೂರು ಪಟ್ಟಣದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಸ್ ನಿಲ್ದಾಣದಲ್ಲಿ ನಡೆದಿದೆ.
ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಬಸ್ಸಿಗಾಗಿ ಕಾಯುತ್ತಾ ನಿಂತಿದ್ದರು. ಈ ವೇಳೆ ಯುವಕ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಜತೆಗೆ ಅಶ್ಲೀಲವಾಗಿ ಮಾತಾಡಿದ್ದಾನೆ. ಇದರಿಂದ ಸಹನೆ ಕಳೆದುಕೊಂಡ ಮಹಿಳೆ ಯುವಕನ ವರ್ತನೆ ಸಹಿಸಲಾಗದೇ ಕೆನ್ನೆಗೆ ಬಾರಿಸಿ, ಚಪ್ಪಲಿಯಿಂದ ಹೊಡೆದಿದ್ದಾರೆ.
ಈ ವೇಳೆ ಸ್ಥಳದಲ್ಲಿದ್ದ ಪ್ರಯಾಣಿಕರು ಸಹ ಧರ್ಮದೇಟು ನೀಡಿದ್ದು, ಯುವಕ ಬಸ್ ನಿಲ್ದಾಣದಿಂದ ಪರಾರಿಯಾಗಿದ್ದಾನೆ. ಲಿಂಗಸುಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಇಂಥ ಪುಂಡರಿಗೆ ಬುದ್ಧಿ ಕಲಿಸಬೇಕು ಎಂದು ಜನರು ಪೊಲೀಸರಲ್ಲಿ ಮನವಿ ಮಾಡಿದ್ದಾರೆ.
ಇನ್ನು ಬಸ್ ನಿಲ್ದಾಣದಲ್ಲಿ ಈರೀತಿ ಬಸ್ಗಾಗಿ ಕಾಯುವವರೊಂದಿಗೆ ಅನುಚಿತ ವರ್ತನೆ ತೋರುವ ಕಿಡಿಗೇಡಿಗಳನ್ನು ಬಸ್ ನಿಲ್ದಾಣದ ಅಧಿಕಾರಿಗಳು ಸೂಕ್ಷ್ಮವಾಗಿ ಗಮನಿಸಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವ ಮೂಲಕ ನಿಲ್ದಾಣ ಪ್ರಯಾಣಿಕರಿಗೆ ಸುರಕ್ಷಿತವಾಗಿ ಎಂದು ಅನಿಸುವಂತಾಗಬೇಕು ಎಂದು ಹೇಳಿದ್ದಾರೆ.
ಬಹುತೇಕ ರಾಜ್ಯದಲ್ಲಿರುವ ಬಸ್ ನಿಲ್ದಾಣಗಳಲ್ಲಿ ಕೆಲ ಪುಂಡಪೋಕರಿಗಳು ಈರೀತಿಯ ವರ್ತನೆ ತೋರುತ್ತಿರುವುದು ಅಲ್ಲಲ್ಲಿ ಕಂಡು ಬರುತ್ತದೆ. ಇದಕ್ಕೆ ಸಂಬಂಧಪಟ್ಟ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಎಂಡಿಗಳು ಎಚ್ಚರಿಕೆ ವಹಿಸುವ ಅಗತ್ಯ ತುಂಬಾ ಇದೆ ಎಂದು ಪ್ರಜ್ಞಾವಂತ ನಾಗರಿಕರು ಹೇಳಿದ್ದಾರೆ.
Related









