CrimeNEWSನಮ್ಮಜಿಲ್ಲೆ

ಮೈಸೂರು: ನಾಪತ್ತೆಯಾಗಿದ್ದ ವಿವಾಹಿತೆ ಶವ ಕೆರೆಯಲ್ಲಿ ಪತ್ತೆ! – ಕೊಲೆ ಆರೋಪಿನ ಮನೆ ಹೆಂಚುಗಳು ಪುಡಿಪುಡಿ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿವಾಹಿತೆಯ ಶವ ಗೋಣಿಚೀಲದಲ್ಲಿ ಕಟ್ಟಿದ ಸ್ಥಿತಿಯಲ್ಲಿ ಕೆರೆಯಲ್ಲಿ ಪತ್ತೆಯಾಗಿದ್ದು, ಇದರಿಂದ ಆಕ್ರೋಶಗೊಂಡ ಸಂಬಂಧಿಕರು ಕೊಲೆ ಶಂಕಿತನ ಮನೆ ಮೇಲೆ ದಾಳಿ ಮಾಡಿ ಹೆಂಚುಗಳನ್ನು ಒಡೆದು, ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಿದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆ ಮೈಸೂರಿನಲ್ಲಿ ನಡೆದಿದ್ದು, ಶ್ವೇತಾ (20) ಎಂಬುವರ ಶವ ಕರೆಯಲ್ಲಿ ಪತ್ತೆಯಾಗಿರುವುದು. ಈಕೆ ನಂಜನಗೂಡು ತಾಲೂಕಿನ ಕೆಂಬಾಲು ಗ್ರಾಮದ ನಿವಾಸಿ. ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ಸೋದರ ಮಾವ ಶಶಿ ಕುಮಾರ್ ಜೊತೆ 2 ವರ್ಷಗಳ ಹಿಂದೆ ಶ್ವೇತಾ ಮದುವೆಯಾಗಿದ್ದರು. ಶಶಿಕುಮಾರ್ ಕಾಸರಗೋಡಿನ ಹೋಟೆಲ್‍ನಲ್ಲಿ ಕೆಲಸ ಮಾಡುತ್ತಿರುವುದರಿಂದ ದಂಪತಿ ಅಲ್ಲಿಯೇ ನೆಲೆಸಿದ್ದರು. ಆದರೆ ಒಂದೂವರೆ ತಿಂಗಳ ಹಿಂದೆ ಸ್ವಗ್ರಾಮ ಕೆಂಬಾಲುಗೆ ಆಗಮಿಸಿದ್ದ ಶ್ವೇತಾ, ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದರು.

ಇಂದು ಮಾರ್ಬಳ್ಳಿ ಗ್ರಾಮದ ಕೆರೆಯಲ್ಲಿ ಗೋಣಿಚೀಲದಲ್ಲಿ ಶ್ವೇತಾ ಶವ ಪತ್ತೆಯಾಗಿದೆ. ಅದೇ ಗ್ರಾಮದ ಶಿವು ಎಂಬಾತ ಕೊಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಶಿವು ಮನೆ ಮೇಲೆ ದಾಳಿ ನಡೆಸಿರುವ ಶ್ವೇತಾ ಸಂಬಂಧಿಕರು, 2 ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಿ, ಮನೆಯ ಹೆಂಚುಗಳನ್ನು ಒಡೆದು ಆಕ್ರೋಶ ಹೊರಹಾಕಿದ್ದಾರೆ.

ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಶಿವುಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ