Vijayapatha – ವಿಜಯಪಥ
Friday, November 1, 2024
NEWSಕೃಷಿದೇಶ-ವಿದೇಶ

ಪ್ರತಿಭಟನಾ ನಿರತ ರೈತರ ಬಳಿಗೆ ಹೋಗಿ ಕೇಂದ್ರ ಸರ್ಕಾರ ಸಮಸ್ಯೆ ಆಲಿಸಬೇಕು: ಮಾಜಿ ಸಿಎಂ ಎಚ್‌ಡಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಹೊರವಲಯದಲ್ಲಿ ರೈತರು ನಡೆಸುತ್ತಿರುವ ಹೋರಾಟ 5ನೇ ದಿನ ತಲುಪಿದೆ. ರೈತರ ಹಿತಕ್ಕಾಗಿ ಕಾಯ್ದೆ ತಂದಿರುವುದಾಗಿ ಹೇಳಿರುವ ಕೇಂದ್ರ ಕೂಡಲೇ ಪ್ರತಿಭಟನಾಕಾರರೊಂದಿಗೆ ಮಾತನಾಡಿ ಅವರ ಅನುಮಾನಗಳನ್ನು ನಿವಾರಿಸುವ ಪ್ರಯತ್ನ ಮಾಡುವುದು ಸೂಕ್ತ. ಇಲ್ಲವಾದರೆ, ರೈತರು, ಜನರ ಅನುಮಾನಗಳು ಬೆಳೆಯುತ್ತಾ ಹೋಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ರೈತರ ಸಮಸ್ಯೆ ಆಲಿಸಬೇಕಿದ್ದರೆ ಬುರಾಡಿ ಉದ್ಯಾನಕ್ಕೆ ಬರಬೇಕು ಎಂದು ಕೇಂದ್ರ ರೈತರಲ್ಲಿ ಮನವಿ ಮಾಡಿದೆ. ಇದನ್ನು ರೈತರು ಒಪ್ಪಿಲ್ಲ. ಇದು ತಮಗೆ ಒಡ್ಡಿರುವ ಷರತ್ತು ಎಂದು ರೈತರು ಭಾವಿಸಿದ್ದಾರೆ. ಆದ್ದರಿಂದ ಈ ಷರತ್ತು ಹಿಂದಕ್ಕೆ ಪಡೆಯುವುದೇ ಸೂಕ್ತ. ರೈತರು ಇರುವಲ್ಲಿಯೇ, ಅವರು ಇಚ್ಚಿಸಿದಲ್ಲಿಯೇ ಸಮಸ್ಯೆಗಳನ್ನು ಆಲಿಸಿ ಎಂಬುದು ನನ್ನ ಸಲಹೆ ಎಂದು ಸುದ್ದಿಗಾರರಿಗೆ ತಿಳಿಸಿದರು.

5 ದಿನಗಳಿಂದ ರೈತರು ಸಿಂಗು ಗಡಿಯಲ್ಲೇ ಧರಣಿ ಕುಳಿತಿದ್ದಾರೆ. ಇದು ಚಳಿಗಾಲ. ದೆಹಲಿ ಚಳಿ ಯಾರಿಗಾದರೂ ಮೈ ನಡುಗಿಸುತ್ತದೆ. ಕೋವಿಡ್‌ ಕಾಲದಲ್ಲಿ ರೈತರನ್ನು ಹಾಗೆ ಅಲ್ಲಿ ಬಿಡುವುದು ಆರೋಗ್ಯದ ದೃಷ್ಟಿಯಿಂದ ಸೂಕ್ತವಲ್ಲ. ಅಲ್ಲಿರುವ ಯಾರಿಗಾದರೂ ಅಪಾಯವಾದರೆ ಅದು ಕೇಂದ್ರ ಸರ್ಕಾರದ ಬಾಧ್ಯತೆಯಾಗುತ್ತದೆ. ಹೀಗಾಗಿ ಕೂಡಲೇ ಮನವಿ ಆಲಿಸುವುದು ಸಮಂಜಸ ಎಂದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ