ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರನ್ನು ಮಂತ್ರಿ ಮಾಡುವುದು ನೂರಕ್ಕೆ ನೂರರಷ್ಟು ಖಚಿತ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಯೋಗೇಶ್ವರ್ ಪರ ಬ್ಯಾಟಿಂಗ್ ಮಾಡುವವರು ಸಚಿವ ಸ್ಥಾನ ತ್ಯಾಗ ಮಾಡಲಿ’ ಎಂದು ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಯಾಗಿರುವ ಶಾಸಕ ರೇಣುಕಾಚಾರ್ಯ ಹೇಳಿರುವ ಬಗ್ಗೆ ಕೇಳಿದ ಪ್ರಶ್ನೆಗೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಯಾರು ಏನೇ ಹೇಳಿದರು ಯೋಗೇಶ್ವರ್ಗೆ ಸಚಿವ ಸ್ಥಾನ ನೀಡುತ್ತೇವೆ ಎಂದು ಹೇಳಿದ್ದಾರೆ. ಅವರನ್ನು ಸಚಿವರನ್ನಾಗಿ ಮಾಡುವುದು ಖಚಿತ’ ಎಂದರು.
ಮುಖ್ಯಮಂತ್ರಿಗಳಿಗೆ ಧನ್ಯವಾದ ಹೇಳಿದ ಯೋಗೇಶ್ವರ್
ಒಬ್ಬ ವ್ಯಕ್ತಿಯ ಪ್ರಯತ್ನದಿಂದ ನಾನು ಮಂತ್ರಿಯಾಗುತ್ತಿಲ್ಲ, ಪಕ್ಷ ಮತ್ತು ಸಿಎಂ ಹಾಗೂ ಹೈಕಮಾಂಡ್ ನನ್ನ ಮೇಲೆ ಭರವಸೆ ಇಟ್ಟಿದೆ. ಸಿಎಂ ಮೊದಲೇ ನನಗೆ ಮಾತು ಕೊಟ್ಟಿದ್ದರು, ಆದರೆ ಸಂದರ್ಭ ಒದಗಿ ಬಂದಿರಲಿಲ್ಲ, ಈಗ ಸುಸಮಯ ಬಂದಿದೆ. ಸಿಎಂ ಗೆ ನಾನು ಆಭಾರಿಯಾಗಿದ್ದೇನೆ ಎಂದು ಯೋಗೇಶ್ವರ್ ಹೇಳಿದ್ದಾರೆ.
ರಮೇಶ್ ಜಾರಕಿಹೊಳಿ ನನ್ನ ಉತ್ತಮ ಸ್ನೇಹಿತ, ಆದರೆ ಅವರು ಲಾಬಿ ನಡೆಸಿಲ್ಲ, ಮುಖ್ಯಮಂತ್ರಿಗಳು ನೀಡಿದ ಭರವಸೆಯಂತೆ ನನಗೆ ಸಚಿವ ಸ್ಥಾನ ನೀಡುವುದಾಗಿ ಸಿಎಂ ಹೇಳಿದ್ದಾರೆ ಎಂದರು.
Ayyo nimma muka muccha