NEWSಕೃಷಿದೇಶ-ವಿದೇಶ

ಹೆಚ್ಚಾಗುತ್ತಿದೆ ರೈತರ ಕಿಚ್ಚು: ಸರ್ಕಾರ ನಡೆಸಿದ 3ನೇ ಸಭೆಯೂ ವಿಫಲ- 7ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ನಾಳೆ ಏನಾಗುವುದೋ ?

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ರಾಷ್ಟ್ರ ರಾಜಧಾನಿ ದೆಹಲಿ ಗಡಿಯಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ನಡೆದ ಮಾತುಕತೆ ವಿಫಲವಾಗಿದ್ದು, ರೈತರು ತಮ್ಮ ಪ್ರತಿಭಟನೆಯನ್ನು ಮುಂದುವರಿಸಲು ನಿರ್ಧರಿಸಿದ್ದಾರೆ.

ಕೇಂದ್ರ ಕೃಷಿ ಸಚಿವ ನರೇಂದ್ರ ತೋಮರ್, ಪಿಯೂಷ್ ಗೋಯಲ್, ಕಿರಿಯ ಕೈಗಾರಿಕಾ ಸಚಿವ ಸೋಮ್ ಪ್ರಕಾಶ್ ಹಾಗೂ ರೈತ ಸಂಘಟನೆಗಳ 30ಕ್ಕೂ ಹೆಚ್ಚು ಪ್ರತಿನಿಧಿಗಳ‌ ನಡುವೆ ನಿನ್ನೆ ಸಭೆ ನಡೆದಿತ್ತು. ಆ ಸಭೆ ವಿಫಲವಾಗಿದ್ದು ರೈತರು ಪ್ರತಿಭಟನೆಯನ್ನು ಮುಂದುವರಿಸಿದ್ದು, ಆ ಪ್ರತಿಭಟನೆ 7ನೇ ದಿನಕ್ಕೆ ಕಾಲಿಟ್ಟಿದೆ.

ಸಭೆಯಲ್ಲಿ ಕೇಂದ್ರ ಸಚಿವರುಗಳು ಕೃಷಿ ಕಾನೂನುಗಳಲ್ಲಿನ ಭಿನ್ನಾಭಿಪ್ರಾಯಗಳನ್ನು ವಿಂಗಡಿಸಿ ಚರ್ಚಿಸಲು ಸಮಿತಿಯೊಂದನ್ನು ರಚಿಸುವ ಪ್ರಸ್ತಾಪವನ್ನು ಮುಂದಿಟ್ಟರು. ಈ ಪ್ರಸ್ತಾಪಕ್ಕೆ ಒಪ್ಪದ ರೈತ ಮುಖಂಡರು ಕೇಂದ್ರ ಸರ್ಕಾರ ಇತ್ತೀಚೆಗೆ ತಂದಿರುವ ಮೂರು ವಿವಾದಾತ್ಮಕ ಮಸೂದೆಗಳನ್ನು ಹಿಂಪಡೆಯಬೇಕು. ಜತೆಗೆ ರೈತರಿಗೆ ಮಾರಕವಾಗಿರುವ ವಿದ್ಯುತ್ ಕಾನೂನನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿದರು. ಪರಸ್ಪರ ಸಹಕಾರ ಮೂಡದೆ ಸಭೆ ವಿಫಲವಾಯಿತು.

ಕೇಂದ್ರ ಸರ್ಕಾರ ತಮ್ಮ ಬೇಡಿಕೆಗಳನ್ನು ‌ಈಡೇರಿಸದಿದ್ದರೆ ದೆಹಲಿಯ ಎಲ್ಲಾ ಗಡಿಗಳ ರಸ್ತೆಗಳನ್ನು ಬಂದ್ ಮಾಡುತ್ತೇವೆ ಎಂದು ರೈತರು ಎಚ್ಚರಿಸಿದ್ದರು. ಇದರಿಂದ ಬೆಚ್ಚಿದ ಕೇಂದ್ರ ಸರ್ಕಾರ ಪ್ರತಿಭಟನೆ ಕೈಬಿಟ್ಟು ಮಾತುಕತೆಗೆ ಬನ್ನಿ ಎಂದು ಆಹ್ವಾನಿಸಿತ್ತು. ಆದರೆ ಈಗಾಗಲೇ ಎರಡು ಸುತ್ತಿನ‌ ಮಾತುಕತೆಗಳು ನಡೆದು ಎರಡು ಸಭೆಗಳೂ ವಿಫಲವಾಗಿವೆ. ತಮ್ಮ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ಸಿದ್ದವಿಲ್ಲ ಎಂದು ರೈತರು ಸಭೆಗೆ ಒಪ್ಪಿರಲಿಲ್ಲ. ಕಡೆಗೆ ಒಪ್ಪಿ ನಿನ್ನೆಯ ಮಾತುಕತೆಯಲ್ಲಿ ರೈತ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಆದರೆ ಮೂರನೇ ಸಭೆಯೂ ವಿಫಲವಾಗಿದೆ.

ದೇಶದ ವಿವಿಧ ಮೂಲೆಗಳಿಂದ ದೆಹಲಿಯತ್ತ ಧಾವಿಸಿದ್ದ ರೈತರು ನವೆಂಬರ್ 26ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ಪ್ರತಿಭಟನೆಗೆ ಮೊದಲು ಒಪ್ಪಿಗೆ ನೀಡಿದ್ದ ಪೊಲೀಸರು ನಂತರ ಪ್ರತಿಭಟನೆ ಹತ್ತಿಕ್ಕಲೆಂದೇ ಕೊರೊನಾ ಕಾರಣವೊಡ್ಡಿ ಒಪ್ಪಿಗೆಯನ್ನು ಹಿಂಪಡೆದರು. ಇದಲ್ಲದೆ ರೈತರು ದೆಹಲಿಯನ್ನು ಪ್ರವೇಶಿಸದಂತೆ ಗಡಿಯಲ್ಲೇ ತಡೆದರು. ಸದ್ಯ ದೆಹಲಿಯ ಗಡಿಯಲ್ಲಿರುವ ರೈತರು ತಾವಿದ್ದ ಸ್ಥಳಗಳಲ್ಲೇ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.

ನಾಳೆ ಮತ್ತೆ ಸಭೆ
ನಿನ್ನೆಯ ಸಭೆ ವಿಫಲವಾಗಿರುವುದರಿಂದ ನಾಳೆ (ಡಿಸೆಂಬರ್ 3) ರೈತರ ಜೊತೆಗೆ ಕೇಂದ್ರ ಸರ್ಕಾರ ಮತ್ತೊಂದು ಸಭೆ ನಡೆಸಲಿದೆ. ಹಿಂದೆ ನವೆಂಬರ್ 13ರ ಸಭೆ ವಿಫಲವಾದಾಗಲೇ ಡಿಸೆಂಬರ್ 3ರಂದು ಮತ್ತೊಂದು ಸುತ್ತಿನ ಸಭೆ ನಡೆಸುವ ನಿರ್ಧಾರಕ್ಕೆ ಬರಲಾಗಿತ್ತು.‌ ಆಗಲೇ ರೈತರು ನವೆಂಬರ್ 26ರಿಂದ ದೆಹಲಿಯಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ತಿಳಿಸಿದ್ದರು. ರೈತರ ಪ್ರತಿಭಟನೆ ಇಷ್ಟು ತೀವ್ರವಾಗಿರುತ್ತದೆ ಎಂದು ಅಂದಾಜು ಮಾಡದ ಕೇಂದ್ರ ಸರ್ಕಾರ ಉಪೇಕ್ಷೆ ಮಾಡಿತ್ತು.‌ ಈಗ ಪ್ರತಿಭಟನೆ ತೀವ್ರಗೊಳ್ಳುತ್ತಿರುವುದರಿಂದ ಕಳವಳಕ್ಕೀಡಾಗಿ ನಿನ್ನೆಯೇ ಸಭೆ ನಡೆಸಿತು. ನಿನ್ನೆಯೂ ಸಭೆ ವಿಫಲವಾಗಿರುವುದರಿಂದ ನಾಳಿನ ಸಭೆ ಏನಾಗುತ್ತದೆ ಎಂಬುದು ಭಾರಿ ಕುತೂಹಲಕಾರಿಯಾಗಿದೆ.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ