NEWSನಮ್ಮರಾಜ್ಯಬೆಂಗಳೂರು

ನಾಳೆ ಮಧ್ಯಾಹ್ನದ ಬಳಿಕ ವಿಧಾನ ಸೌಧ, ವಿಕಾಸ ಸೌಧ, ಬಹುಮಹಡಿಗಳ ಕಟ್ಟಡದ ನೌಕರರಿಗೆ ರಜೆ ಘೋಷಿಸಿ ಸರ್ಕಾರದ ಆದೇಶ

ಪ್ರಮಾಣ ವಚನ ಸಮಾರಂಭ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಭವನ ಮತ್ತು ಸುತ್ತ ಮುತ್ತಲ ಪ್ರದೇಶದಲ್ಲಿ ಜನಸಂದಣಿ ಸೇರುವ ಹಾಗೂ ವಾಹನ ಸಂಚಾರ ದಟ್ಟಣೆ ಉಂಟಾಗುವ ಸಂಭವನೀಯತೆ ಇರುವುದರಿಂದ, ಭದ್ರತೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ಅಪರಾಹ್ನ ರಜೆ ಘೋಷಿಸಲಾಗಿದೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ಸರ್ಕಾರದ ನಿಯೋಜಿತ ಮುಖ್ಯಮಂತ್ರಿಯವರ ಪ್ರಮಾಣ ವಚನ ಸಮಾರಂಭವು ನಾಳೆ ಜೂನ್‌ 3ರ ಅಪರಾಹ್ನ 4.05 ಗಂಟೆಗೆ ಕರ್ನಾಟಕ ಲೋಕಭವನದಲ್ಲಿ ನಿಗದಿಯಾಗಿರುವುದರಿಂದ ಭದ್ರತೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ವಿಧಾನ ಸೌಧ, ವಿಕಾಸ ಸೌಧ ಹಾಗೂ ಬಹುಮಹಡಿಗಳ ಕಟ್ಟಡದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿಗಳಿಗೆ ಮಧ್ಯಾಹ್ನ ರಜೆ ಘೋಷಿಸಲಾಗಿದೆ.

ಈ ಸಂಬಂಧ ಇಂದು ಸರ್ಕಾರದ ಅಧೀನ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಆ‌ರ್.ಯದು ಕುಮಾರ್ ಆದೇಶ ಹೊರಡಿಸಿದ್ದಾರೆ.

ಪ್ರಮಾಣ ವಚನ ಸಮಾರಂಭ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಭವನ ಮತ್ತು ಸುತ್ತ ಮುತ್ತಲ ಪ್ರದೇಶದಲ್ಲಿ ಜನಸಂದಣಿ ಸೇರುವ ಹಾಗೂ ವಾಹನ ಸಂಚಾರ ದಟ್ಟಣೆ ಉಂಟಾಗುವ ಸಂಭವನೀಯತೆ ಇರುವುದರಿಂದ, ಭದ್ರತೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ಅಪರಾಹ್ನ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರದ ನಿಯೋಜಿತ ಮುಖ್ಯಮಂತ್ರಿಯವರ ಪ್ರಮಾಣ ವಚನ ಸಮಾರಂಭವು ದಿನಾಂಕ: 03.06.2026 ರ ಅಪರಾಹ್ನ 4.05 ಗಂಟೆಗೆ ಕರ್ನಾಟಕ ಲೋಕಭವನದಲ್ಲಿ ನಿಗದಿಯಾಗಿರುವುದರಿಂದ, ಕರ್ನಾಟಕ ಲೋಕಭವನ ಮತ್ತು ಸುತ್ತ ಮುತ್ತ ಪ್ರದೇಶದಲ್ಲಿ ಜನಸಂದಣಿ ಸೇರುವ ಹಾಗೂ ವಾಹನ ಸಂಚಾರ ದಟ್ಟಣೆ ಉಂಟಾಗುವ ಸಂಭವನೀಯತೆ ಇರುವುದರಿಂದ, ಭದ್ರತೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ವಿಧಾನ ಸೌಧ, ವಿಕಾಸ ಸೌಧ ಹಾಗೂ ಬಹುಮಹಡಿಗಳ ಕಟ್ಟಡದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ/ಸಿಬ್ಬಂದಿಗಳಿಗೆ ದಿನಾಂಕ: 03.06.2026ರ ಅಪರಾಹ್ನ ರಜೆ ಘೋಷಿಸಿ ಆದೇಶಿಸಿದೆ.

ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡದಲ್ಲಿರುವ ಸರ್ಕಾರದ ಎಲ್ಲ ಅಪರ ಮುಖ್ಯಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ವಿಧಾನಸಭೆ, ವಿಧಾನಪರಿಷತ್ ಕಾರ್ಯದರ್ಶಿಗಳು, ವಾರ್ತಾ ಮತ್ತು ಪ್ರಚಾರ ಇಲಾಖೆ ನಿರ್ದೇಶಕರು, ವಿಕಾಸಸೌಧದ ಸರ್ಕಾರಿ ಮುದ್ರಣಾಲಯ ನಿರ್ದೇಶಕರು, ರಾಜ್ಯ ಪತ್ರಾಗಾರ ಇಲಾಖೆ ನಿರ್ದೇಶಕರು, ಕರ್ನಾಟಕ ಸರ್ಕಾರ ಸಚಿವಾಲಯದ ನೌಕರರ ಸಂಘದ ಅಧ್ಯಕ್ಷರು, ವಿಧಾನಸೌಧದ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಆಪ್ತ ಕಾರ್ಯದರ್ಶಿ, ಸರ್ಕಾರದ ಕಾರ್ಯದರ್ಶಿಯವರ ಆಪ್ತ ಕಾರ್ಯದರ್ಶಿಯವರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
ನಾಳೆ ಮಧ್ಯಾಹ್ನದ ಬಳಿಕ ವಿಧಾನ ಸೌಧ, ವಿಕಾಸ ಸೌಧ, ಬಹುಮಹಡಿಗಳ ಕಟ್ಟಡದ ನೌಕರರಿಗೆ ರಜೆ ಘೋಷಿಸಿ ಸರ್ಕಾರದ ಆದೇಶ ಮುಂದಿನ 5 ವರ್ಷದಲ್ಲಿ ಉದ್ಯೋಗವಿಲ್ಲದ ಪದವೀಧರರ ಸಂಖ್ಯೆ ಹೆಚ್ಚಾಗಲಿದೆ, ಇತ್ತ ಪ್ಲಂಬರ್, ಎಲೆಕ್ಟ್ರಿಷಿಯನ್ಸ್‌ ಸಿಗಲ್ಲ–... ಬನ್ನೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾರ ಅಣ್ಣ ವಾಸುದೇವನ್ ನಿಧನ ಅದೃಷ್ಟ ಅಂದರೆ ಇದೇ ಅಲ್ವಾ- ನಾಲ್ಕಾರು ಮನೆಗೆಲಸ ಮಾಡಿ ಜೀವನ ಸಾಗಿಸುತ್ತಿದ್ದಾಕಿ ಈಗ ಪಶ್ಚಿಮ ಬಂಗಾಳದ ಮಂತ್ರಿ ! NWKRTC: ನೌಕರರ 11 ತಿಂಗಳ ಹಿಂಬಾಕಿ ಕುರಿತು ವಿವರಣೆ ಸ್ಲಿಪ್‌ ನೀಡಲು ಆದೇಶ ಮಾಡುತ್ತೇನೆ- ನೌಕರರಿಗೆ ಎಂಡಿ ಭರವಸೆ ಸರ್ಕಾರಿ ನೌಕರ ಪರೋಕ್ಷವಾಗಿ ಬೇರೊಬ್ಬರ ಮೂಲಕ ಲಂಚ ಪಡೆದರೂ ಆತ ತಪ್ಪಿತಸ್ಥನೆ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ಇಂದಿನಿಂದ ಜಾರಿ: ಕರೆಂಟ್‌ ಬಿಲ್‌ಕೊಟ್ಟ ದಿನದಿಂದ ರಜೆ ಹೊರತುಪಡಿಸಿ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಸರ್ಕಾರಿ ಸಾರಿಗೆ ಚಾಲನಾ, ತಾಂತ್ರಿಕಾ ಸಿಬ್ಬಂದಿ ಕಾರ್ಮಿಕರಲ್ಲ: “ಸಂಸ್ಥೆ ನಿಯಮಗಳ ಮೂಲಕ ಯಾರು ನೇಮಕವಾಗಿದ್ದಾರೋ ಅವರೇ ಅ... ನಾಲ್ಕೂ ರಸ್ತೆ ಸಾರಿಗೆ ಸಂಸ್ಥೆ ಎಂಡಿಗಳಿಗೆ ಪತ್ರ ಬರೆದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಾಳೆ ವೇತನ ಹೆಚ್ಚಳದ 11 ತಿಂಗಳ ಹಿಂಬಾಕಿಯ ವ್ಯತ್ಯಾಸ ತಿಳಿಯಲು ಸಾರಿಗೆ ನೌಕರರಿಂದ NWKRTC ಎಂಡಿ ಭೇಟಿ