ಕಾಲೇಜಿಗೆ ಡ್ರಾಪ್ ಕೊಡುವ ನೆಪದಲ್ಲಿ ಅಪ್ರಾಪ್ತಯ ಅತ್ಯಾಚಾರಕ್ಕೆ ಯತ್ನ: ಬಂಧನ, ಮತ್ತಿಬ್ಬರ ಪತ್ತೆಗೆ ಬಲೆ ಬೀಸಿದ ಪೊಲೀಸರು
ಯಾರಿಗಾದ್ರೂ ಈ ವಿಷಯವನ್ನು ಹೇಳಿದರೆ ಹತ್ಯೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ಇದರಿಂದ ಹೆದರಿದ ಬಾಲಕಿ ಬೈಕ್ನಿಂದ ಜಿಗಿದಿದ್ದಾಳೆ. ಪರಿಣಾಮ ಬಾಲಕಿಗೆ ಗಂಭೀರ ಗಾಯಗಳಾಗಿದ್ದು, ಆಕೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಯ ಬಂಧಿಸಿದ್ದಾರೆ

ಹಾಸನ: ಕಾಲೇಜಿಗೆ ಡ್ರಾಪ್ ಕೊಡುವ ನೆಪದಲ್ಲಿ ಪರಿಚಯಸ್ಥನೊಬ್ಬ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣ ಹಾಸನದಲ್ಲಿ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪದವಿ ವ್ಯಾಸಂಗ ಮಾಡುತ್ತಿರುವ ಆರೋಪಿ, ಬಾಲಕಿಗೆ ಡ್ರಾಪ್ ಕೊಡುವುದಾಗಿ ಹೇಳಿ ಬೈಕ್ನಲ್ಲಿ ಕೂರಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.
ಆ ಬಳಿಕ ಆಕೆ ಅವಕಾಶ ಮಾಡಿಕೊಡದಿದ್ದಾಗ ಮತ್ತೆ ವಾಪಸ್ ಕರೆದುಕೊಂಡು ಬರುತ್ತಿದ್ದ, ಈ ವೇಳೆ ಯಾರಿಗಾದ್ರೂ ಈ ವಿಷಯವನ್ನು ಹೇಳಿದರೆ ಹತ್ಯೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ಇದರಿಂದ ಹೆದರಿದ ಬಾಲಕಿ ಬೈಕ್ನಿಂದ ಜಿಗಿದಿದ್ದಾಳೆ.
ಚಲಿಸುತ್ತಿದ್ದ ಬೈಕ್ನಿಂದ ಜಿಗಿದ ಪರಿಣಾಮ ಬಾಲಕಿಗೆ ಗಂಭೀರ ಗಾಯಗಳಾಗಿದ್ದು, ಆಕೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಈ ಆರೋಪಿತ ವಿದ್ಯಾಭ್ಯಾಸದ ಜತೆಗೆ ಪಾನಿಪುರಿ ಅಂಗಡಿ ನಡೆಸುತ್ತಿದ್ದ. ಸದ್ಯ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಈತನಿಗೆ ಸಾಥ್ ನೀಡಿರುವ ಇನ್ನಿಬ್ಬರು ಸ್ನೇಹಿತರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಈ ಸಂಬಂಧ ಹಾಸನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ವಿಚಾರಣೆ ಮುಂದುವರಿಸಿದ್ದಾರೆ.
Related









