NEWSನಮ್ಮರಾಜ್ಯರಾಜಕೀಯ

ಹೊಸ ವರ್ಷದ ಆರಂಭದಲ್ಲೇ 150 ವಿಧಾನಸಭಾ ಕ್ಷೇತ್ರಗಳಿಗೆ ಜೆಡಿಎಸ್‌ ಅಭ್ಯರ್ಥಿಗಳ ಘೋಷಣೆ: ಎಚ್‌ಡಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಎಚ್.ಡಿ.ಕೋಟೆ: ರಾಜ್ಯದ 224ರಲ್ಲಿ 150 ಕ್ಷೇತ್ರಗಳಿಗೆ ವಿಧಾನಸಭೆ ಚುನಾವಣಾ ಅಭ್ಯರ್ಥಿಗಳನ್ನು ಹೊಸ ವರ್ಷದ ಆರಂಭದಲ್ಲಿ ಜೆಡಿಎಸ್‌ನಿಂದ ಘೋಷಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಬುಧವಾರ ತಾಲೂಕಿನ ಗುಂಡತ್ತೂರು ಗ್ರಾಮದಲ್ಲಿ ಪಕ್ಷದ ಮೃತಪಟ್ಟ ಕಾರ್ಯಕರ್ತರೊಬ್ಬರ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ಡಿ.ಕೋಟೆ ಸೇರಿ 150 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡುವುದರಿಂದ ಪಕ್ಷ ಸಂಘಟನೆಗೆ, ಕಾರ್ಯಕರ್ತರನ್ನು ಭೆಟಿಯಾಗಲು ಅನುಕೂಲವಾಗಲಿದೆ. ಈ ಸಂಬಂಧ ಈಗಾಗಲೇ ಪಕ್ಷದ ಹಿರಿಯ ಮುಖಂಡರೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ ಎಂದು ತಿಳಿಸಿದರು.

ಇನ್ನು ಮುಂಬರುವ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಅಭ್ಯರ್ಥಿಗಳನ್ನು ಘೋಷಣೇ ಮಾಡುವ ಕಾರ್ಯಕ್ಕೆ ಜೆಡಿಎಸ್‌ ಮುಂದಾಗಿರುವುದು ಪಕ್ಷದ ಕಾರ್ಯಕರ್ತರು ಮತ್ತು ಅಭ್ಯರ್ಥಿಗಳಲ್ಲಿ ಚುನಾವಣೆ ಸಮಯದಲ್ಲಿ ಆಗುತ್ತಿದ್ದ ಗೊಂದಲ ನಿವಾರಣೆ ಆಗಲಿದೆ ಎಂದು ಹೇಳಿದರು.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ