ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಐರಾವತ ಬಸ್
ಅದೃಷ್ಟವಶಾತ್ ಘಟನೆಯಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರು ಮತ್ತು ಚಾಲನಾ ಸಿಬ್ಬಂದಿಗಳಿಗೆಯಾವುದೇ ಸಮಸ್ಯೆಯಾಗಿಲ್ಲ. ಯಾರಿಗೂ ಗಾಯಗಳಾಗಿಲ್ಲ
Megha03.06.2026

ಶಿವಮೊಗ್ಗ: ಬೆಂಗಳೂರಿನಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಐರಾವತ ಬಸ್ ಮುಡುಬಾ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅಡಿಕೆ ತೋಟಕ್ಕೆ ನುಗ್ಗಿರುವ ಘಟನೆ ನಡೆದಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರು ಮತ್ತು ಚಾಲನಾ ಸಿಬ್ಬಂದಿಗಳಿಗೆಯಾವುದೇ ಸಮಸ್ಯೆಯಾಗಿಲ್ಲ. ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಈ ಅಪಘಾತದ ವೇಳೆ ತೋಟದೊಳಗೆ ಬಸ್ ನುಗ್ಗಿದ್ದರಿಂದ ತೋಟದ ಬೇಲಿ ಹಾಗೂ ಕೆಲವು ಅಡಿಕೆ ಗಿಡಗಳು ಹಾನಿಗೀಡಾಗಿವೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಬಸ್ಸಿನಲ್ಲಿದ್ದವರಿಗೆ ನೆರವಾಗಿದ್ದಾರೆ. ಇದು ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.
Related


Megha







