NEWSನಮ್ಮರಾಜ್ಯ

ಇಂದು ಸಂಜೆ ಡಿಕೆಶಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ-ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರಕ್ಕೆ ವ್ಯವಸ್ಥೆ

ಬೆಂಗಳೂರಿನ ಲೋಕ ಭವನದ ಗಾಜಿನ ಮನೆಯಲ್ಲಿ ಇಂದು ಸಂಜೆ 4.05ಕ್ಕೆ ಆಯೋಜಿಸಲಾಗಿರುವ ಭವ್ಯ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಹಾಗೂ ಅವರ ಸಂಪುಟದ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಐತಿಹಾಸಿಕ ಮತ್ತು ಮಹತ್ವದ ಕ್ಷಣವನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳಲು ರಾಜ್ಯದ ಆಯ್ದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿದೆ.

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಸಂಜೆ 4 ಗಂಟೆಗೆ ಲೋಕಭವನದಲ್ಲಿ ಅಧಿಕಾರ ಸ್ವೀಕರಿಸಲಿರುವ ಕನಕಪುರ ಶಾಸಕ ಡಿ.ಕೆ.ಶಿವಕುಮಾರ್ ಅವರ ಪ್ರಮಾಣ ವಚನ ಕಾರ್ಯಕ್ರಮವನ್ನು 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ ಮಾಡುತ್ತಿದ್ದು ಸಾರ್ವಜನಿಕರು ವೀಕ್ಷಿಸಬಹುದಾಗಿದೆ.

ಬೆಂಗಳೂರಿನ ಲೋಕ ಭವನದ ಗಾಜಿನ ಮನೆಯಲ್ಲಿ ಇಂದು ಸಂಜೆ 4.05ಕ್ಕೆ ಆಯೋಜಿಸಲಾಗಿರುವ ಭವ್ಯ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಹಾಗೂ ಅವರ ಸಂಪುಟದ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಐತಿಹಾಸಿಕ ಮತ್ತು ಮಹತ್ವದ ಕ್ಷಣವನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳಲು ರಾಜ್ಯದ ಆಯ್ದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿದೆ.

ರಾಜ್ಯದ ಜನತೆಗೆ ಈ ಮಹತ್ವದ ಕಾರ್ಯಕ್ರಮವನ್ನು ತಲುಪಿಸುವ ಉದ್ದೇಶದಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ‘ವೃತ್ತಿ ಸೊಲ್ಯೂಷನ್ಸ್ ಲಿಮಿಟೆಡ್’ ಸಂಸ್ಥೆಯ ಸಹಯೋಗದಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ.

ರಾಜ್ಯಾದ್ಯಂತ ಇರುವ ಪ್ರಮುಖ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಅಳವಡಿಸಲಾಗಿರುವ ಡಿಜಿಟಲ್ ಡಿಸ್‍ಪ್ಲೇ ಪರದೆಗಳ ಮೂಲಕ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಸಂಪೂರ್ಣ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲಾಗುತ್ತಿದೆ.

ದೂರದ ಊರುಗಳಿಗೆ ಪ್ರಯಾಣಿಸುವ ಸಾರ್ವಜನಿಕರು ಹಾಗೂ ಸಾಮಾನ್ಯ ಜನರು ಈ ಐತಿಹಾಸಿಕ ಸಮಾರಂಭದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಈ ತಂತ್ರಜ್ಞಾನ ಆಧಾರಿತ ಉಪಕ್ರಮವನ್ನು ಕೈಗೊಳ್ಳಲಾಗಿದೆ. ಇದರಿಂದಾಗಿ ಸಾರ್ವಜನಿಕರು ತಮ್ಮ ಹತ್ತಿರದ ಬಸ್ ನಿಲ್ದಾಣಗಳಲ್ಲೇ ನಿಂತು ಮುಖ್ಯಮಂತ್ರಿಗಳು ಹಾಗೂ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ನೋಡಬಹುದು.

ಲೋಕ ಭವನದಲ್ಲಿ ನಡೆಯಲಿರುವ ಈ ಅದ್ದೂರಿ ಕಾರ್ಯಕ್ರಮಕ್ಕೆ ಈಗಾಗಲೇ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಇಡೀ ರಾಜ್ಯದ ಕಣ್ಣು ಇಂದು ಸಂಜೆ ಬಸ್ ನಿಲ್ದಾಣಗಳ ಡಿಜಿಟಲ್ ಪರದೆಗಳತ್ತ ನೆಡಲಿವೆ.

Megha
the authorMegha

Leave a Reply

error: Content is protected !!
Latest news
ಶಾಲೆ- ಕಾಲೇಜು ಹುಡುಗರಿಗೆ ಫ್ರೀ ಬಸ್ : ನೂತನ ಸಿಎಂ ಡಿಕೆಶಿ ಘೋಷಣೆ ಕರ್ನಾಟಕದ 25 ನೇ ಮುಖ್ಯಮಂತ್ರಿಯಾಗಿ ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್‌ ಇಂದು ಸಂಜೆ ಡಿಕೆಶಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ-ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರಕ್ಕೆ ವ್ಯವ... ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಐರಾವತ ಬಸ್ KSRTCಯ ಉಚಿತ ಬಸ್‌ಪಾಸ್ ಪಡೆಯುವ ಪತ್ರಕರ್ತರು ಜೂ.20 ರೊಳಗೆ ಅರ್ಜಿ ಸಲ್ಲಿಸಿ: ಆಯುಕ್ತ ಹೇಮಂತ್ ನಿಂಬಾಳ್ಕರ್ KKRTC- ಮೇ 18ರಿಂದ 22ರವರೆಗೆ ಪಡೆದಿರುವ ಚಾಲನಾ ಸಿಬ್ಬಂದಿಗಳ ರಜೆ ಮಂಜೂರು ಮಾಡಲು ಡಿಸಿಗಳಿಗೆ ಸಿಟಿಎಂ ಆದೇಶ ಕಾಲೇಜಿಗೆ ಡ್ರಾಪ್ ಕೊಡುವ ನೆಪದಲ್ಲಿ ಅಪ್ರಾಪ್ತಯ ಅತ್ಯಾಚಾರಕ್ಕೆ ಯತ್ನ: ಬಂಧನ, ಮತ್ತಿಬ್ಬರ ಪತ್ತೆಗೆ ಬಲೆ ಬೀಸಿದ ಪೊಲೀಸರ... ನಾಳೆ ಮಧ್ಯಾಹ್ನದ ಬಳಿಕ ವಿಧಾನ ಸೌಧ, ವಿಕಾಸ ಸೌಧ, ಬಹುಮಹಡಿಗಳ ಕಟ್ಟಡದ ನೌಕರರಿಗೆ ರಜೆ ಘೋಷಿಸಿ ಸರ್ಕಾರದ ಆದೇಶ ಮುಂದಿನ 5 ವರ್ಷದಲ್ಲಿ ಉದ್ಯೋಗವಿಲ್ಲದ ಪದವೀಧರರ ಸಂಖ್ಯೆ ಹೆಚ್ಚಾಗಲಿದೆ, ಇತ್ತ ಪ್ಲಂಬರ್, ಎಲೆಕ್ಟ್ರಿಷಿಯನ್ಸ್‌ ಸಿಗಲ್ಲ–... ಬನ್ನೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾರ ಅಣ್ಣ ವಾಸುದೇವನ್ ನಿಧನ