NEWSನಮ್ಮರಾಜ್ಯರಾಜಕೀಯ

ಕರ್ನಾಟಕದ 25 ನೇ ಮುಖ್ಯಮಂತ್ರಿಯಾಗಿ ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್‌

ಇಂದು ಬುಧವಾರ ಜೂನ್‌ 3ರ ಸಂಜೆ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಶಿವಕುಮಾರ್‌ ಅವರಿಗೆ ಪ್ರಮಾಣವಚನ ಬೋಧಿಸಿದರು. ಸಂವಿಧಾನ ಪುಸ್ತಕ ಹಿಡಿದು ಡಿಕೆಶಿ  ಪ್ರಮಾಣ ವಚನ ಸ್ವೀಕರಿಸಿದರು.

ವಿಜಯಪಥ ಸಮಗ್ರ ಸುದ್ದಿ
  • ಒಬ್ಬರು ಉಪಮುಖ್ಯ,ಮಂತ್ರಿ ಹಾಗೂ 12 ಮಂದಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದವರು

ಬೆಂಗಳೂರು: ತಳಮಟ್ಟದ ಹೋರಾಟದಿಂದ ಕಾಂಗ್ರೆಸ್‌ ಪಕ್ಷವನ್ನು ಕಟ್ಟಿ ಬೆಳೆಸಿದ ಕನಕಪುರ ಬಂಡೆ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಇಂದು ಬುಧವಾರ ಜೂನ್‌ 3ರ ಸಂಜೆ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಶಿವಕುಮಾರ್‌ ಅವರಿಗೆ ಪ್ರಮಾಣವಚನ ಬೋಧಿಸಿದರು. ಸಂವಿಧಾನ ಪುಸ್ತಕ ಹಿಡಿದು ಡಿಕೆಶಿ  ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮಾಣ ವಚನ ಸ್ವೀಕರಿಸುವ ಮೊದಲು ವೇದಿಕೆಯಲ್ಲಿ ಡಿ.ಕೆ.ಶಿವಕುಮಾರ್‌ ತಾವು ನಿಂತಿದ್ದ ಸ್ಥಳದಲ್ಲೇ ನೆಲಕ್ಕೆ ಅಡ್ಡ ಬಿದ್ದು ನಮಸ್ಕರಿಸಿದರು. ಬಳಿಕ ಅಜ್ಜಯ್ಯನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬಂದು ಪ್ರಮಾಣ ವಚನ ಸ್ವೀಕರಿಸಿದ್ದು ವಿಶೇಷವಾಗಿತ್ತು.

ಡಿ.ಕೆ.ಶಿವಕುಮಾರ್ ಅವರ ಪದಗ್ರಹಣಕ್ಕೆ ಜ್ಯೋತಿಷ್ಯ ಮತ್ತು ಸಂಖ್ಯಾಶಾಸ್ತ್ರದ ಹಿನ್ನೆಲೆಯಲ್ಲಿ ಅತ್ಯಂತ ಅಪರೂಪದ ಹಾಗೂ ಶಕ್ತಿಶಾಲಿ ‘ಮಾಲವ್ಯ ಯೋಗ’ದ ಮುಹೂರ್ತವನ್ನು ನಿಗದಿಪಡಿಸಲಾಗಿತ್ತು.

ತುಲಾ ಲಗ್ನದಲ್ಲಿ ಡಿಕೆಶಿ ಅವರು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಪ್ರಸ್ತುತ ಜಾತಕದಲ್ಲಿ ಗುರು ಗ್ರಹವು ಉಚ್ಚ ಸ್ಥಿತಿಯಲ್ಲಿದ್ದು, ದಶಮ ಭಾವ ಬಲವಾಗಿರುವುದರಿಂದ, ಮುಂಬರುವ ದಿನಗಳಲ್ಲಿ ಎಷ್ಟು ದೊಡ್ಡ ಸವಾಲುಗಳು ಎದುರಾದರೂ ಅದನ್ನೆಲ್ಲ ಮೆಟ್ಟಿ ನಿಂತು ಜನಪರ ಹಾಗೂ ಸುಗಮ ಆಡಳಿತ ನಡೆಸಲು ಈ ಮುಹೂರ್ತ ಹಾದಿ ಸುಗಮ ಮಾಡಿಕೊಡಲಿದೆ ಎಂಬ ಬಲವಾದ ನಂಬಿಕೆ ಇದೆ.

ಬಳಿಕ ಜಿ.ಪರಮೇಶ್ವರ್‌ ಉಪ ಮುಖ್ಯಮಂತ್ರಿಯಾಗಿ ಡಾ.ಬಿ.ಆರ್‌.ಅಂಬೇಡ್ಕರ್‌ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದವರು: ಬಳಿಕ ಕೆ.ಎಚ್‌.ಮುನಿಯಪ್ಪ, ಕೆ.ಜೆ.ಜಾರ್ಜ್‌ ಅವರು ದೇವರ ಹೆಸರಿನಲ್ಲಿ, ಎಂ.ಬಿ.ಪಾಟೀಲ್‌ ಅವರು ಅಣ್ಣ ಬಸವಣ್ಣನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ರಾಮಲಿಂಗಾರೆಡ್ಡಿ, ಸತೀಶ್‌ ಜಾರಕಿಹೊಳಿ, ಕೃಷ್ಣಬೈರೇಗೌಡ, ಪ್ರಿಯಾಂಕ್‌ ಖರ್ಗೆ, ಯು.ಟಿ.ಖಾದರ್‌, ಈಶ್ವರ್‌ ಖಂಡ್ರೆ, ಡಾ.ಯತೀಂದ್ರ ಸಿದ್ದರಾಮಯ್ಯ, ಭೈರತಿ ಸುರೇಶ್‌ ಹಾಗೂ ಡಾ.ಶರಣಪ್ರಕಾಶ್‌ ಪಾಟೀಲ್‌ ಸೇರಿದಂತೆ ಈ 12 ಮಂದಿ  ಇಂದು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದವರು.

Megha
the authorMegha

Leave a Reply

error: Content is protected !!
Latest news
ಶಾಲೆ- ಕಾಲೇಜು ಹುಡುಗರಿಗೆ ಫ್ರೀ ಬಸ್ : ನೂತನ ಸಿಎಂ ಡಿಕೆಶಿ ಘೋಷಣೆ ಕರ್ನಾಟಕದ 25 ನೇ ಮುಖ್ಯಮಂತ್ರಿಯಾಗಿ ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್‌ ಇಂದು ಸಂಜೆ ಡಿಕೆಶಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ-ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರಕ್ಕೆ ವ್ಯವ... ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಐರಾವತ ಬಸ್ KSRTCಯ ಉಚಿತ ಬಸ್‌ಪಾಸ್ ಪಡೆಯುವ ಪತ್ರಕರ್ತರು ಜೂ.20 ರೊಳಗೆ ಅರ್ಜಿ ಸಲ್ಲಿಸಿ: ಆಯುಕ್ತ ಹೇಮಂತ್ ನಿಂಬಾಳ್ಕರ್ KKRTC- ಮೇ 18ರಿಂದ 22ರವರೆಗೆ ಪಡೆದಿರುವ ಚಾಲನಾ ಸಿಬ್ಬಂದಿಗಳ ರಜೆ ಮಂಜೂರು ಮಾಡಲು ಡಿಸಿಗಳಿಗೆ ಸಿಟಿಎಂ ಆದೇಶ ಕಾಲೇಜಿಗೆ ಡ್ರಾಪ್ ಕೊಡುವ ನೆಪದಲ್ಲಿ ಅಪ್ರಾಪ್ತಯ ಅತ್ಯಾಚಾರಕ್ಕೆ ಯತ್ನ: ಬಂಧನ, ಮತ್ತಿಬ್ಬರ ಪತ್ತೆಗೆ ಬಲೆ ಬೀಸಿದ ಪೊಲೀಸರ... ನಾಳೆ ಮಧ್ಯಾಹ್ನದ ಬಳಿಕ ವಿಧಾನ ಸೌಧ, ವಿಕಾಸ ಸೌಧ, ಬಹುಮಹಡಿಗಳ ಕಟ್ಟಡದ ನೌಕರರಿಗೆ ರಜೆ ಘೋಷಿಸಿ ಸರ್ಕಾರದ ಆದೇಶ ಮುಂದಿನ 5 ವರ್ಷದಲ್ಲಿ ಉದ್ಯೋಗವಿಲ್ಲದ ಪದವೀಧರರ ಸಂಖ್ಯೆ ಹೆಚ್ಚಾಗಲಿದೆ, ಇತ್ತ ಪ್ಲಂಬರ್, ಎಲೆಕ್ಟ್ರಿಷಿಯನ್ಸ್‌ ಸಿಗಲ್ಲ–... ಬನ್ನೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾರ ಅಣ್ಣ ವಾಸುದೇವನ್ ನಿಧನ