Vijayapatha – ವಿಜಯಪಥ
Friday, November 1, 2024
NEWSಕೃಷಿದೇಶ-ವಿದೇಶ

ರೈತರ ಪ್ರತಿಭಟನೆ:  ಸರ್ಕಾರದ ಊಟ ತಿರಸ್ಕರಿಸಿ ತಾವೇ ತಂದ ಊಟ ಮಾಡಿ ಪ್ರಶಂಸೆ ಪಡೆದ ಸ್ವಾಭಿಮಾನಿ ಅನ್ನದಾತರು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕೇಂದ್ರ ಸರ್ಕಾರದ ನೂತನ ಮೂರು ಕೃಷಿ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವ ರೈತರೊಂದಿಗಿನ ಇಂದಿನ ಸಭೆ ವೇಳೆ ಮಧ್ಯಾಹ್ನದ ಊಟದ ಬಿಡುವಿನಲ್ಲಿ ರೈತ ಮುಖಂಡರಿಗೆ ಸರ್ಕಾರದ ವತಿಯಿಂದ ಊಟದ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಸರ್ಕಾರದ ಆತಿಥ್ಯವನ್ನು ತಿರಸ್ಕರಿಸಿರುವ ರೈತರು, ತಾವೇ ತಂದಿದ್ದ ಊಟವನ್ನು ನೆಲದ ಮೇಲೆ ಕೂತು ಊಟ ಮಾಡುವ ಮೂಲಕ ಸರ್ಕಾರದ ಹಂಗು ನಮಗೆ ಬೇಡ ಎಂಬ ಸಂದೇಶವನ್ನು ರವಾನಿಸಿದ್ದಾರೆ. ಈ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕೃಷಿ ಕಾಯ್ದೆ ವಿರೋಧಿಸಿ ದೇಶದ ರೈತರು ಕಳೆದು 8 ದಿನಗಳಿಂದ ದೆಹಲಿಯಲ್ಲಿ ಸತತ ಹೋರಾಟದಲ್ಲಿ ನಿರತರಾಗಿದ್ದಾರೆ. ಕಳೆದ ಮಂಗಳವಾರ ರೈತರನ್ನು ಮೊದಲ ಬಾರಿಗೆ ಮಾತುಕತೆಗೆ ಕರೆದಿದ್ದ ಸರ್ಕಾರ ಇಂದು ನಾಲ್ಕನೇ ಬಾರಿಗೆ ಮಾತುಕತೆಗೆ ಕರೆದಿತ್ತು. ಆದರೆ, ಮೂವರು ಕೇಂದ್ರ ಸಚಿವರೊಂದಿಗಿನ ಇಂದಿನ ರೈತ ಮುಖಂಡರ ಮಹತ್ವದ ಸಭೆಯಲ್ಲಿ ರೈತರು ಮತ್ತೊಮ್ಮೆ ಸ್ವಾಭಿಮಾನ ಮೆರೆಯುವ ಮೂಲಕ ದೇಶದಾದ್ಯಂತ ಸುದ್ದಿಯಾಗಿದ್ದಾರೆ.

ಸಚಿವರೊಂದಿಗೆ ಸಭೆಯ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ರೈತ ಮುಖಂಡರು, ನಾವು ಸರ್ಕಾರ ಒದಗಿಸಿದ ಊಟವನ್ನು ತಿರಸ್ಕರಿಸಿ ನಾವೇ ತಂದಿದ್ದ ಊಟವನ್ನು ಮಾಡಿದ್ದೇವೆ. ಸರ್ಕಾರದ ವತಿಯಿಂದ ಒದಗಿಸಲಾದ ಚಹವನ್ನೂ ಸಹ ನಾವು ನಿರಾಕರಿಸಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಹೋರಾಟ 8ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಸಚಿವರು ಇಂದು ನಾಲ್ಕನೆ ಬಾರಿಗೆ ರೈತರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರವು ಕೃಷಿ ಕಾಯ್ದೆಗಳನ್ನು ಉಳಿಸಿಕೊಂಡು ಕನಿಷ್ಠ ಬೆಂಬಲ ಬೆಲೆ ನೀಡುವುದಾಗಿ ರೈತರಿಗೆ ಲಿಖಿತ ಭರವಸೆ ನೀಡಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ಡಿ.5ಕ್ಕೆ ಮತ್ತೆ ಸಭೆ ಮುಂದೂಡಿಕೆ
ರೈತ ಸಂಘಟನೆಗಳ ಮುಖಂಡರು 3 ಕೃಷಿ ಕಾಯ್ದೆಗಳನ್ನು ಬೇಷರತ್ತಾಗಿ ಹಿಂಪಡೆಯಬೇಕು, ಅದಕ್ಕಾಗಿ ವಿಶೇಷ ಸಂಸತ್ ಅಧಿವೇಶನ ಕರೆಯಬೇಕೆಂದು ತಾಕೀತು ಮಾಡಿದ್ದಾರೆ. ಅಲ್ಲದೇ ಅದಕ್ಕೆ ಇಂದು ಅಂತಿಮ ಅವಕಾಶವಾಗಿದ್ದು ಸರ್ಕಾರ ರೈತರ ಬೇಡಿಕೆಗೆ ಒಪ್ಪದಿದ್ದಲ್ಲಿ ದೆಹಲಿಗೆ ಬರುವ ಎಲ್ಲಾ ರಸ್ತೆಗಳನ್ನು ಮುಚ್ಚುವ ಮೂಲಕ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದವು. ಆದರೆ ಇಂದು ನಡೆದ  ಸಭೆಯೂ ಫಲಪ್ರದವಾಗದ ಹಿನ್ನೆಲೆಯಲ್ಲೆ ಮತ್ತೆ ಡಿ.5ಕ್ಕೆ ಸಭೆಯನ್ನು ಮುಂದೂಡಲಾಗಿದೆ .

ಇಂದು ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಪರವಾಗಿ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಕ್ಯಾಬಿನೆಟ್ ಸಚಿವ ಪಿಯೂಶ್ ಗೋಯಲ್ ಮತ್ತು ಸೋಮ್‌ ಪ್ರಕಾಶ್ ಸಭೆಯಲ್ಲಿ ಭಾಗವಹಿಸಿದ್ದರು. 30 ಕ್ಕೂ ಹೆಚ್ಚು ರೈತ ಸಂಘಟನೆಗಳ ಮುಖಂಡರು ಮಾತುಕತೆಯಲ್ಲಿ ತೊಡಗಿದ್ದರು ಎಂದು ತಿಳಿದುಬಂದಿದೆ.

ಇನ್ನು ಈ ಮುಂಚೆಯೇ ಕೇಂದ್ರ ಗೃಹ ಸಚಿವ ಅಮಿತ್​ ಶಾ ಜೊತೆಗೆನ ಮಾತುಕತೆ ವೇಳೆ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್​ ಸಿಂಗ್, “ಪಂಜಾಬ್ ಸರ್ಕಾರಕ್ಕೂ ಈ ಕೃಷಿ ಕಾನೂನಿನ ವಿರುದ್ಧ ಅಸಮಾಧಾನ ಇದೆ. ಈ ಹಿಂದೆಯೂ ಅದನ್ನು ಸ್ಪಷ್ಟಪಡಿಸಿದ್ದೇವೆ. ಆದರೆ, ಇದು ರೈತ ಹೋರಾಟ. ಕೇಂದ್ರ ಸರ್ಕಾರ ಮತ್ತು ರೈತರ ನಡುವಿನ ವ್ಯಾಜ್ಯ. ಇದನ್ನು ಕೇಂದ್ರ ಸರ್ಕಾರ ಪರಿಹರಿಸಬೇಕು. ಅಲ್ಲದೆ, ಈ ಹೋರಾಟಕ್ಕೂ ತಮ್ಮ ಸರ್ಕಾರಕ್ಕೂ ಯಾವುದೇ ನಂಟು ಇಲ್ಲ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ