CrimeNEWSನಮ್ಮಜಿಲ್ಲೆ

ಮಂಡ್ಯ: 61 ವರ್ಷದ ವೃದ್ಧನಿಂದ ಅತ್ಯಾಚಾರ- ಅಪ್ರಾಪ್ತೆ ಗರ್ಭಿಣಿ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಬಾಲಕಿ ಮೇಲೆ ಅತ್ಯಾಚಾರ ಮಾಡಿ ಆಕೆ ಗರ್ಭಿಣಿಯಾಗಲು ಕಾರಣನಾದ ವೃದ್ಧನನ್ನು ಬಂಧಿಸಿರುವ ಘಟನೆ ಮಂಡ್ಯದ ಗಾಂಧಿನಗರದ 8ನೇ ಕ್ರಾಸ್‌ನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

61 ವರ್ಷದ ವೃದ್ಧ ವೆಂಕಟೇಶ್ ಪಕ್ಕದ ಮನೆಯ 14 ವರ್ಷದ ಬಾಲಕಿ ಮೇಲೆ ಮೂರ್ನಾಲ್ಕು ತಿಂಗಳ ಹಿಂದೆ ದೌರ್ಜನ್ಯ ಎಸಗಿದ್ದು, ಬಾಲಕಿ ಈಗ ಗರ್ಭಿಣಿಯಾಗಿರುವುದರಿಂದ ಅತ್ಯಾಚಾರ ಪ್ರಕರಣ ಬಯಲಾಗಿದೆ.

ಗಾoಧಿನಗರ 8ನೇ ಕ್ರಾಸ್ ನಿವಾಸಿ ವೆಂಕಟೇಶ್ ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ನೆರೆ ಮನೆಯ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ನಂತರ ಈ ವಿಷಯವನ್ನು ಯಾರಿಗೂ ತಿಳಿಸಬೇಡ ಎಂದು ಪ್ರಾಣ ಬೆದರಿಕೆ ಹಾಕಿದ್ದಾನೆ. ಇದರಿಂದ ಹೆದರಿದ ಬಾಲಕಿ ಮನೆಯವರಿಂದಲೂ ವಿಷಯ ಮುಚ್ಚಿಟ್ಟಿದ್ದಳು.

ಆದರೆ, ಆಕೆ ಪಕ್ಕದ ಮನೆ ತಾತ ಕೆಟ್ಟ ದೃಷ್ಟಿಯಿಂದ ನನ್ನು ನೋಡುತ್ತಾನೆ, ಮೈಕೈ ಮುಟ್ಟುತ್ತಾನೆ ಎಂದು ಆತನ ದೌರ್ಜನ್ಯದ ಬಗ್ಗೆ ಪೋಷಕರ ಬಳಿ ಹೇಳಿಕೊಂಡಿದ್ದಳು. ಆದರೆ ಅವರು ಹಿರಿಯರು, ಬಾಲಕಿಯೇ ತಪ್ಪಾಗಿ ಅರ್ಥೈಸಿಕೊಂಡಿದ್ದಾಳೆಂದು ಪಾಲಕರು ಆಕೆ ಮಾತಿನ ಬಗ್ಗೆ ಅಷ್ಟೊಂದು ಗಮನಕೊಟ್ಟಿರಲಿಲ್ಲ.

ಬಾಲಕಿ ಗರ್ಭಿಣಿಯಾಗಿರುವುದು ತಿಳಿದ ಬಳಿಕ ಆತನ ಕೃತ್ಯ ಬೆಳಕಿಗೆ ಬಂದಿದೆ. ಸದ್ಯ ಮಂಡ್ಯ ಪಶ್ಚಿಮ ಠಾಣೆಯಲ್ಲಿ ದೂರು ದಾಖಲಾಗಿದ್ದು ಕಾಮುಕ ವೃದ್ಧನನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...