Vijayapatha – ವಿಜಯಪಥ
Friday, November 1, 2024
NEWSನಮ್ಮರಾಜ್ಯರಾಜಕೀಯ

ಕರ್ನಾಟಕ ಬಂದ್‌ ಹಿನ್ನೆಲೆ ಬೆಂಗಳೂರಿನಲ್ಲಿ ಪೊಲೀಸ್‌ ಅಲರ್ಟ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ರಚಿಸುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಬೆಳ್ಳಂಬೆಳಗ್ಗೆ ಬಂದ್‌ ಆರಂಭಿಸಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ನಗರದಲ್ಲಿ 35 ಕೆಎಸ್​ಆರ್​ಪಿ, 32 ಸಿಎಆರ್ ತುಕಡಿಗಳನ್ನ ನಿಯೋಜನೆ ಮಾಡಲಾಗಿದೆ. ಆಯಾ ವಿಭಾಗದ ಡಿಸಿಪಿಗಳಿಗೆ ಬಂದ್ ನಿರ್ವಹಣೆಯ ಹೊಣೆ ವಹಿಸಲಾಗಿದೆ. 300 ಪೊಲೀಸ್ ವ್ಯಾನ್​ಗಳು ನಗರದಾದ್ಯಂತ ವಿಶೇಷ ಗಸ್ತು ನಡೆಸುತ್ತಿವೆ. ಆಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ರೌಡಿಶೀಟರ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಮೂಲಕ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಿಯಂತ್ರಿಸಲು ನಗರದಲ್ಲಿ ಒಟ್ಟಾರೆ 15 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಇಂದು ಬೆಳಗ್ಗೆಯಿಂದಲೇ ಪೊಲೀಸರು ಎಲ್ಲ ಕಡೆಯೂ ಗಸ್ತು ತಿರುಗುತ್ತಿದ್ದಾರೆ. 5 ಮಂದಿ ಹೆಚ್ಚುವರಿ ಸಿಪಿಗಳು, ಡಿಸಿಪಿಗಳು, ಎಸಿಪಿಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.

ಕರ್ನಾಟಕ ಬಂದ್​​ಗೆ ಯಾರೂ ಕೂಡ ಅನುಮತಿ ಕೇಳಿಲ್ಲ. ನಾವೂ ಅನುಮತಿ ಕೊಟ್ಟಿಲ್ಲ. ಇಂದು ಯಾವುದೇ ಪ್ರತಿಭಟನಾ ಮೆರವಣಿಗೆಗೆ ಅವಕಾಶ ನೀಡುವುದಿಲ್ಲ. ಬಿಎಂಟಿಸಿ, ಕೆಎಸ್​ಆರ್​ಟಿಸಿ ಸಂಸ್ಥೆಗಳು ಬಂದ್​ಗೆ ಬೆಂಬಲ ಸೂಚಿಸಿಲ್ಲ. ಹೀಗಾಗಿ ಬಸ್‌ಗಳನ್ನು ತಡೆಯುವ ಹಾಗಿಲ್ಲ. ಕೆಎಸ್​ಆರ್​ಟಿಸಿ ಮತ್ತು ಬಿಎಂಟಿಸಿ ಬಸ್‌ಗಳು ಎಂದಿನಂತೆ ಸಂಚರಿಸುತ್ತವೆ. ಯಾರೂ ಕೂಡ ಭಯ ಪಡುವ ಅಗತ್ಯ ಇಲ್ಲ. ಜನರು ಎಂದಿನಂತೆ ತಮ್ಮ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಹುದು. ಏನಾದರೂ ಅಹಿತಕರ ಘಟನೆ ನಡೆದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂಥ್ ಹೇಳಿದ್ದಾರೆ.

ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರೆ ನೀಡಲಾಗಿರುವ ಈ ಬಂದ್​ಗೆ 50ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿವೆ. ಕೆಲ ಕರವೇ ಬಣಗಳು ನೈತಿಕ ಬೆಂಬಲ ಮಾತ್ರ ನೀಡಿವೆ. ಹೀಗಾಗಿ ಜನಜೀವನ ಅಸ್ತವ್ಯಸ್ತಗೊಳ್ಳುವ ಸಾಧ್ಯತೆಯೂ ಇದೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ