ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ರಚಿಸುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಬೆಳ್ಳಂಬೆಳಗ್ಗೆ ಬಂದ್ ಆರಂಭಿಸಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ.
ಇನ್ನು ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣಗಳ ಬಾಗಿಲುಗಳನ್ನು ಮುಚ್ಚಲಾಗಿದೆ. ಅಲ್ಲದೇ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್‌ಗೆ ಬೆಂಬಲ ನೀಡಲು ಅಂಗಡಿ ಮಾಲೀಕರು ನಿರ್ಧಿಸಿದ್ದು, 10ಗಂಟೆ ನಂತರ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುವ ಸಾಧ್ಯತೆ ಇದೆ.
ಈ ನಡುಗೆ ಬಿಎಂಟಿಸ್‌ಗಳು ಕಾರ್ಯಚರಣೆ ಆರಂಭಿಸಿವೆ. ಆದರೆ ಪ್ರಯಾಣಿಕರು ಇಲ್ಲದೆ ಖಾಲಿ ಬಸ್‌ಗಳನ್ನೇ ಓಡಿಸಲಾಗುತ್ತಿದೆ. ಈ ನಡುವೆ ರಸ್ತೆ ಮೇಲೆ ಟೈರ್‌ಗಳನ್ನು ಸುಟ್ಟಿ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಲಾಗಿದೆ.
ಇನ್ನು ಓಲಾ ಊಬರ್ ಈ ಹಿಂದೆ ಬೆಂಬಲ ನೀಡಿದ್ದು ಈಗ ವಾಪಸ್ ಪಡೆದಿದೆ ಎಂದು ಹೇಳಲಾಗಿತ್ತು ಆದರೆ ಓಲಾ ಊಬರ್ ಸಂಘದ ಅಧ್ಯಕ್ಷ ತನ್ವರ್ ಪಾಷಾ ಸ್ಪಷ್ಟನೆ ನೀಡಿದ್ದು, ನಾವು ಬಂದ್‌ಗೆ ಬೆಂಬಲ ನೀಡಿದ್ದು ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಕನ್ನಡ ಭಾಷೆ ಭಾಷೆಯನ್ನಯ ಜಾಗತಿಕ ಮಟ್ಟಕ್ಕೆ ತೆಗೆದುಕೊಂಡು ಹೋಗುವ ನಿಟ್ಟಿನಲ್ಲಿ ಸರ್ಕಾರ ಯೋಜನೆಗಳನ್ನು ರೂಪಿಸುವುದನ್ನು ಬಿಟ್ಟು ಅನ್ಯ ಭಾಷಿಕರ ಅಭಿವೃದ್ಧಿ ನಿಗಮ ರಚಿಸುವ ಮೂಲಕ ಕನ್ನಡಕ್ಕೆ ಕೊಡಲಿ ಪೆಟ್ಟು ನೀಡುವಂತ ನೀಚ ಕೃತ್ಯಕ್ಕೆ ಸರ್ಕಾರ ಇಳಿದಿರುವುದು ನಾಡಿಗೆ ಮತ್ತು ನಾಡಿನ ಜನತೆಗ ಮಾಡಿದ ಅವಮಾನ ಎಂದು ಕನ್ನಡಪರ ಸಂಘಟನೆಗಳ ಮುಖಂಡರು ಕಿಡಿಕಾರುತ್ತಿದ್ದಾರೆ.
ಇನ್ನೂ ಕಾಲ ಮಿಂಚಿಲ್ಲ ನೀವು ಮಾಡಿರುವ ತಪ್ಪನ್ನು ತಿದ್ದಿಕೊಂಡು ಕನ್ನಡ ನಾಡು ನುಡಿಗೆ ಮೊದಲ ಆದ್ಯತೆ ನೀಡುವ ನಿಟ್ಟಿನಲ್ಲಿ ಹೆಜ್ಜೆ ಹಾಕಬೇಕು ಎಂದು ಆಗ್ರಹಿಸಿದ್ದಾರೆ.