NEWSರಾಜಕೀಯಸಂಸ್ಕೃತಿ

ವಾಟಾಳ್‌ ನಾಗರಾಜ್‌, ಸಾರಾ ಗೋವಿಂದ್, ಕರವೇ ನಾರಾಯಣಗೌಡ‌ ಅರೆಸ್ಟ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮರಾಠಾ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಕರೆ ನೀಡಲಾಗಿರುವ ಕರ್ನಾಟಕ ಬಂದ್​ಗೆ ಇಂದು ಬೆಳಗಿನ ಜಾವದ ಅವಧಿಯಲ್ಲಿ ರಾಜ್ಯಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ನಂತರ ಸಮಯದಲ್ಲಿ ಬಂದ್‌ ಬಿಸಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕನ್ನಡ ಪರ ಸಂಘಟನೆಗಳ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ.

ಪೊಲೀಸರ ಮೂಲಕ ಸರ್ಕಾರ ಬಂದ್‌ ಅನ್ನು ಹತ್ತಿಕ್ಕು ಎಲ್ಲಾ ಕೆಲಸವನ್ನು ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈಗಾಗಲೇ ಪುರಭವನದ ಬಳಿ ಬಂದ ಸಂಘಟನೆಗಳ ಮುಖಂಡರನ್ನು ವಶಕ್ಕೆ ಪಡದಿರುವ ಪೊಲೀಸರು ಈಗತಾನೆ ಟೌನ್‌ಹಾಲ ಬಳಿ ಬಂದ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ನಡುವೆ ವಾಟಾಳ್‌ ನಾಗರಾಜ್‌ ಸರ್ಕಾರ ಮತ್ತು ಸಿಎಂ ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು ಬಿಎಸ್‌ವೈ ಹಿಟ್ಲರ್‌ ಎಂದು ಜರಿದಿದ್ದಾರೆ. ಅಲ್ಲದೇ ಕನ್ನೆ ಭಾಷೆ ಬಗ್ಗೆ ಕಾಳಜಿ ಇಲ್ಲದ ಸಿಎಂ ಎಂದು ಕಿಡಿಕಾರಿದ್ದಾರೆ.

ಇದಕ್ಕೂ ಮುನ್ನ ಗಾಂಧಿನಗರದಲ್ಲಿರುವ ಕರವೇ ಕಚೇರಿಯಿಂದ ಸಿಎಂ ಮನೆಗೆ ಮುತ್ತಿಗೆ ಹಾಕಲು ಪ್ರತಿಭಟನಾ ರ‍್ಯಾಲಿ ಹೊರಟಿದ್ದ ನಾರಾಯಣಗೌಡ ಮತ್ತು ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿದ್ದಾರೆ.

ಒಟ್ಟಾರೆ ಕನ್ನಡಪರ ಸಂಘಟನೆಗಳು ರಾಜ್ಯ ಸರ್ಕಾರ ಮತ್ತು ಸಿಎಂ ಯಡಿಯೂರಪ್ಪ ನಡೆಯನ್ನು ತೀವ್ರವಾಗಿ ಖಂಡಿಸುವ ಮೂಲಕ ಹಂತಹಂತವಾಗಿ ಹೋರಾಟವನ್ನು ತೀವ್ರಗೊಳಿಸಲು ಮುಂದಾಗಿದ್ದು, ಇದರಿಂದ ಬೆಂಗಳೂರಿನ ಹಲವೆಡೆ ಪ್ರತಿಭಟನೆಯ ಬಿಸಿ ಹೆಚ್ಚಾಗುತ್ತಿದೆ.

ಇನ್ನು ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗದಿದ್ದರೂ ಕನ್ನಡಪರ ಸಂಘಟನೆಗಳ ಪ್ರತಿಭಟನೆಗಳು ಬಹಳ ಕಡೆ ನಡೆದಿವೆ.

ಹಾಸನ, ಚಿಕ್ಕಮಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಮಾತ್ರ ಪ್ರತಿಭಟನಾಕಾರರು ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸಿರುವುದು ಬಿಟ್ಟರೆ ಅನಿವಾರ್ಯತೆಗಳಾದ ಮಾರುಕಟ್ಟೆ ಇತ್ಯಾದಿಗಳು ಬಹುತೇಕ ಕಡೆ ತೆರೆದಿವೆ.

ಹಲವು ಜಿಲ್ಲೆಗಳ ರಸ್ತೆಯಲ್ಲಿ ಜನ ಸಂಚಾರ ಕಡಿಮೆಯೇ ಇದೆ. ಬಸ್‌, ಆಟೋಗಳು ಎಂದಿನಂತೆ ಸಂಚರಿಸುತ್ತಿದ್ದರೂ ಪ್ರಯಾಣಿಕರ ಸಂಖ್ಯೆ ತೀರಾ ವಿರಳವಾಗಿದೆ.

ರಾಜ್ಯಾದ್ಯಂತ ಅಲ್ಲಲ್ಲಿ ಪ್ರತಿಭಟನಾಕಾರರು ಬೀದಿಗಿಳಿದು ಟೈರ್​ಗೆ ಬೆಂಕಿ ಹಚ್ಚಿದ್ದಾರೆ. ಹೆದ್ದಾರಿ ತಡೆ ಮಾಡಿದ್ದಾರೆ. ಉರುಳು ಸೇವೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

ಗದಗದಲ್ಲಂತೂ ಪ್ರತಿಭಟನಾಕಾರರು ಬಾಯಿ ಬಡಿದುಕೊಂಡು ಪ್ರತಿಭಟಿಸಿದ್ದಾರೆ. ಕೆಲವೆಡೆ ಸಿಎಂ, ಯತ್ನಾಳರ ಭಾವಚಿತ್ರಗಳಿಗೆ ಚಪ್ಪಲಿ ಏಟು ಕೊಟ್ಟಿದ್ದಾರೆ. ಒಟ್ಟಾರೆಯಾಗಿ ಇಂದು ಬೆಳಗ್ಗೆ ಕರ್ನಾಟಕ ಬಂದ್​ಗೆ ಓಗೊಟ್ಟು ರಾಜ್ಯ ಸ್ತಬ್ಧವಾಗುತ್ತಿದೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...