NEWSನಮ್ಮರಾಜ್ಯರಾಜಕೀಯ

ಸಚಿವ ಸ್ಥಾನಕ್ಕೆ ಅಧಿಕೃತ ರಾಜೀನಾಮೆ ಕೊಟ್ಟ ರಾಮಲಿಂಗಾರೆಡ್ಡಿ: ಸಿಎಂ ಡಿಕೆಶಿ ಕೊಟ್ಟ ಮಾತು ತಪ್ಪಿದ್ದಕ್ಕೆ ಈ ನಿರ್ಧಾರ ಎಂದ RLR

ಯಾರ ಮನವೊಲಿಕೆಗೂ ಬಗ್ಗದ ರೆಡ್ಡಿ, “ನನ್ನ ನಿರ್ಧಾರ ಅಚಲ, ಯಾರನ್ನೂ ಭೇಟಿಯಾಗುವ ಪ್ರಶ್ನೆಯೇ ಇಲ್ಲ” ಎಂದು ಹಠ ಹಿಡಿದಿರುವುದು ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪಾಲಿಗೆ ಆರಂಭದಲ್ಲೇ ಅತಿ ದೊಡ್ಡ ತಲೆನೋವಾಗಿ ಪರಿಣಮಿಸಿದೆ

ವಿಜಯಪಥ ಸಮಗ್ರ ಸುದ್ದಿ

 ಬೆಂಗಳೂರು: ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ಕೇವಲ ಎರಡೇ ದಿನಕ್ಕೆ ಸರ್ಕಾರಕ್ಕೆ ಬಂಡಾಯದ ಬಿಸಿ ತಟ್ಟಿದೆ. ತಮಗೆ ಇಷ್ಟವಿಲ್ಲದ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಿರುವುದಕ್ಕೆ ತೀವ್ರ ಆಕ್ರೋಶ ಹೊರಹಾಕಿರುವ ಕಾಂಗ್ರೆಸ್‌ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರು ಕೋರಮಂಗಲದ ತಮ್ಮ ಕಚೇರಿಯಲ್ಲಿ ಕಾರ್ಯಕರ್ತರ ಮುಂದುಗಡೆ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ.

ಯಾರ ಮನವೊಲಿಕೆಗೂ ಬಗ್ಗದ ರೆಡ್ಡಿ, “ನನ್ನ ನಿರ್ಧಾರ ಅಚಲ, ಯಾರನ್ನೂ ಭೇಟಿಯಾಗುವ ಪ್ರಶ್ನೆಯೇ ಇಲ್ಲ” ಎಂದು ಹಠ ಹಿಡಿದಿರುವುದು ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪಾಲಿಗೆ ಆರಂಭದಲ್ಲೇ ಅತಿ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಅಸಮಾಧಾನ ಭುಗಿಲೆದ್ದಿರುವುದು ಸ್ಪಷ್ಟವಾಗಿ ಕಾಣುತ್ತಿದೆ.

ರಾಮಲಿಂಗಾರೆಡ್ಡಿ ಅವರು ಕೇವಲ ಖಾತೆಗಾಗಿ ರಾಜೀನಾಮೆ ನೀಡುತ್ತಿಲ್ಲ, ಬದಲಿಗೆ ತಮಗೆ ಕೊಟ್ಟ ಮಾತು ತಪ್ಪಿದ್ದಕ್ಕಾಗಿ ಈ ನಿರ್ಧಾರಕ್ಕೆ ಬಂದಿದ್ದಾರೆ. ನಾನು ನನ್ನ ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಾಗದ ಕಾರಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

2023ರಲ್ಲಿ ಸಿದ್ದರಾಮಯ್ಯ ಸಂಪುಟ ರಚನೆ ವೇಳೆ ನನಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುವುದಾಗಿ ಡಿಕೆಶಿ ಹಾಗೂ ಭೈರತಿ ಸುರೇಶ್ ಭರವಸೆ ನೀಡಿದ್ದರು. ಆದರೆ ಸಾರಿಗೆ ಖಾತೆ ನೀಡಲಾಯಿತು. ಆಗ ನಾನು ಬೇಸರಗೊಂಡಾಗ, ಮುಂದೆ ತಾವೇ ಸಿಎಂ ಆದಾಗ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯನ್ನೇ ಕೊಡುವುದಾಗಿ ಡಿಕೆಶಿ ನನ್ನ ಕೋರಮಂಗಲದ ನಿವಾಸಕ್ಕೆ ಬಂತು ಮಾತು ಕೊಟ್ಟಿದ್ದರು. ಆದರೆ ಈಗ ಸಿಎಂ ಆದ ಬೆನ್ನಲ್ಲೇ ಜಲಸಂಪನ್ಮೂಲ ಖಾತೆ ನೀಡಿದ್ದಾರೆ. ಇದಕ್ಕೆ ನನ್ನ ಮನಸ್ಸು ಒಪ್ಪುತ್ತಿಲ್ಲಎಂದು ರೆಡ್ಡಿ ತೀವ್ರ ಬೇಸರ ಹೊರಹಾಕಿದ್ದಾರೆ.

ಕೋರಮಂಗಲದ ಕಚೇರಿಯಲ್ಲಿ ಮಾಧ್ಯಮಗಳ ಮುಂದೆಯೇ ರಾಜೀನಾಮೆ ಪತ್ರ ಹಿಡಿದು ಬಂದ ಸಚಿವರನ್ನು ಯೂತ್ ಕಾಂಗ್ರೆಸ್ ನಾಯಕ ಮನೋಹರ್ ಅವರು, “ಅಧ್ಯಕ್ಷರು (ಡಿ.ಕೆ. ಶಿವಕುಮಾರ್) ಮಾತನಾಡುತ್ತಾರೆ, ದಯವಿಟ್ಟು ದುಡುಕಬೇಡಿ” ಎಂದು ಮನವೊಲಿಸಲು ಯತ್ನಿಸಿದಾಗ ರಾಮಲಿಂಗಾರೆಡ್ಡಿ ತೀವ್ರ ಆಕ್ರೋಶಗೊಂಡರು. ‌

“ಮನೋಹರ್ ನನಗೆ ಕೋಪ ಬರಿಸಬೇಡಿ, ನನ್ನ ನಿರ್ಧಾರ ಮುಗಿದ ಕಥೆ. ನೀವು ಮೊದಲು ಹೊರಗೆ ಹೋಗಿ, ನಾನು ಮಾತನಾಡಬೇಕು” ಎಂದು ಗದರಿದ್ದಾರೆ. ಅಲ್ಲದೆ, “ನನ್ನ ಮಗಳು ಅಥವಾ ಕುಟುಂಬದವರ ಬಳಿಯೂ ನಾನು ಈ ಬಗ್ಗೆ ಚರ್ಚಿಸಿಲ್ಲ. 1973 ರಲ್ಲಿ ವಿದ್ಯಾರ್ಥಿ ನಾಯಕನಾಗಿ ರಾಜಕೀಯಕ್ಕೆ ಬಂದು 53 ವರ್ಷಗಳಿಂದ ಪಕ್ಷದಲ್ಲಿದ್ದೇನೆ. 9 ಬಾರಿ ಶಾಸಕನಾಗಿದ್ದೇನೆ. ನಾನಾಗಿಯೇ ಯಾರ ಬಳಿಗೂ ಹೋಗಿ ರಾಜೀನಾಮೆ ಪತ್ರ ಕೊಡುವುದಿಲ್ಲ, ಇಲ್ಲಿಂದಲೇ ಘೋಷಿಸುತ್ತಿದ್ದೇನೆ” ಎಂದು ಖಡಕ್‌ ಆಗಿ ಹೇಳಿದರು.

ಹಿರಿಯ ನಾಯಕನೇ ಹೀಗೆ ಬಹಿರಂಗವಾಗಿ ಬಂಡಾಯದ ಬಾವುಟ ಹಾರಿಸಿರುವುದು ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ದೊಡ್ಡ ಹಿನ್ನಡೆಯಾಗಿದೆ. ಆರಂಭದಲ್ಲೇ ಆಪ್ತ ವಲಯದ ಈ ಅಸಮಾಧಾನ ಇತರ ಸಚಿವರಿಗೂ ಹರಡಿದರೆ ಸರ್ಕಾರದ ಮೇಲೆ ಹಿಡಿತ ಸಾಧಿಸುವುದು ಕಷ್ಟವಾಗಬಹುದು ಎಂಬ ಆತಂಕ ಹೈಕಮಾಂಡ್ ಅನ್ನು ಕಾಡಲಾರಂಭಿಸಿದೆ. ವರಿಷ್ಠರು ಸಚಿವ ರಾಮಲಿಂಗಾರೆಡ್ಡಿ ಅವರನ್ನು ಹೇಗೆ ತಣ್ಣಗಾಗಿಸುತ್ತಾರೆ ಎಂಬುದನ್ನು ಇನ್ನಷ್ಟೇ ಕಾದುನೋಡಬೇಕಿದೆ.

Megha
the authorMegha

Leave a Reply

error: Content is protected !!
Latest news
ರೈತರಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಒದಗಿಸುವ ದೃಷ್ಟಿಯಿಂದ ಮಾವು-ಹಲಸು ಮೇಳ: ಸಚಿವ ಮುನಿಯಪ್ಪ ಕುಣಿಹಳ್ಳಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ಗಿಡ ನೆಟ್ಟು ಪರಿಸರ ಜಾಗೃತಿ ವಿದೇಶದಲ್ಲಿ ಕನ್ನಡ ಕಲಿಕೆ: ‘ಕರ್ನಾಟಕ ಸಂಘ ಕತಾರ್’ನ ಅಧ್ಯಕ್ಷ ಸುಬ್ರಮಣ್ಯ ಅಭಯ KARNATAKA- ಸರ್ಕಾರಿ ನೌಕರರಿಗೆ ಇನ್ನು ಮುಂದೆ ಬಯೋಮೆಟ್ರಿಕ್‌ ಬದಲಿಗೆ AI ಜಿಪಿಎಸ್‌ ಆಧರಿತ ಹಾಜರಾತಿ ಕಡ್ಡಾಯ: ಸಿಎಸ್‌... ಸಚಿವ ಸ್ಥಾನಕ್ಕೆ ಅಧಿಕೃತ ರಾಜೀನಾಮೆ ಕೊಟ್ಟ ರಾಮಲಿಂಗಾರೆಡ್ಡಿ: ಸಿಎಂ ಡಿಕೆಶಿ ಕೊಟ್ಟ ಮಾತು ತಪ್ಪಿದ್ದಕ್ಕೆ ಈ ನಿರ್ಧಾರ ಎ... KSRTC ನಾಲ್ಕೂ ಸಾರಿಗೆ ನಿಗಮಗಳಿಗೆ ಶಕ್ತಿ ಯೋಜನೆಯಡಿ ಮೇ, ಜೂನ್‌ ತಿಂಗಳುಗಳ 860 ಕೋಟಿ ರೂ. ಅನುದಾನ ಬಿಡುಗಡೆ KKRTC: ಪ್ರತಿ ತಿಂಗಳು 1ರಂದೇ ವೇತನ ಆಗುತ್ತಿತ್ತು- ಈ ಬಾರಿ ಮೇ ತಿಂಗಳ ವೇತನ ಇನ್ನೂ ಆಗಿಲ್ಲ, ಗೊಂದಲದಲ್ಲಿ ನೌಕರರು! ರಾಜ್ಯದ ಎಲ್ಲ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳಿಗೂ ಉಚಿತ ಬಸ್‌ಪಾಸ್‌: ಹೊರಬಿದ್ದ ಸರ್ಕಾರದ ಅಧಿಕೃತ ಆದೇಶ ಕೊಟ್ಟ ಮಾತು ತಪ್ಪಿದ ಸಿಎಂ ಡಿಕೆಶಿ: ಅಸಮಾಧಾನಗೊಂಡ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ! ಸರ್ಕಾರದ 2 ಸಾವಿರ ರೂ. ಪಡೆಯಲು ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್‌ ಕಡ್ಡಾಯ