NEWSಉದ್ಯೋಗನಮ್ಮರಾಜ್ಯ

KARNATAKA- ಸರ್ಕಾರಿ ನೌಕರರಿಗೆ ಇನ್ನು ಮುಂದೆ ಬಯೋಮೆಟ್ರಿಕ್‌ ಬದಲಿಗೆ AI ಜಿಪಿಎಸ್‌ ಆಧರಿತ ಹಾಜರಾತಿ ಕಡ್ಡಾಯ: ಸಿಎಸ್‌ ಆದೇಶ

ಮುಖ್ಯಮಂತ್ರಿಗಳು ಜೂನ್‌ 4 ರಂದು ನಡೆದ ಸಭೆಯಲ್ಲಿ, ರಾಜ್ಯ ಸರ್ಕಾರದ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಯು ಪ್ರತಿದಿನ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕ ಆಡಳಿತ ತರುವ ಉದ್ದೇಶದೊಂದಿಗೆ ಬಯೋಮೆಟ್ರಿಕ್‌ ವ್ಯವಸ್ಥೆ ಬದಲಾಗಿ ಕೃತಕ ಬುದ್ಧಿಮತ್ತೆ (AI) ಮತ್ತು ಜಿಪಿಎಸ್‌ ಆಧರಿತ ಹಾಜರಾತಿಯನ್ನು ಕಡ್ಡಾಯಗೊಳಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ಇಂದು ಆದೇಶ ಹೊರಡಿಸಿರುವ ಅವರು, ಪ್ರತಿಯೊಬ್ಬ ಸರ್ಕಾರಿ ಅಧಿಕಾರಿ, ಸಿಬ್ಬಂದಿ ಇನ್ಮುಂದೆ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕು ಎಂದು ಶಾಲಿನಿ ರಜನೀಶ್‌ ತಿಳಿಸಿದ್ದಾರೆ.

ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರ ಸೂಚನೆ ಮೇರೆಗೆ ಈ ಆದೇಶ ಹೊರಡಿಸಿದ್ದು, ಎಲ್ಲರೂ ತಪ್ಪದೆ ಇದನ್ನು ಪಾಲಿಸಬೇಕಿದೆ.

ಆದೇಶದಲ್ಲಿ ಏನಿದೆ?: ಮುಖ್ಯಮಂತ್ರಿಗಳು ಜೂನ್‌ 4 ರಂದು ನಡೆದ ಸಭೆಯಲ್ಲಿ, ರಾಜ್ಯ ಸರ್ಕಾರದ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಯು ಪ್ರತಿದಿನ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಪ್ರಸ್ತುತ ಇ-ಆಡಳಿತ ಇಲಾಖೆಯು ಸಿದ್ಧಪಡಿಸಿರುವ `ಕರ್ತವ್ಯ App’ ನಲ್ಲಿ ಈಗಾಗಲೇ HRMS ನಲ್ಲಿ ಲಭ್ಯವಿರುವ ಎಲ್ಲಾ ಅಧಿಕಾರಿಗಳು ಹಾಗೂ ವರ್ಗದ ಮಾಹಿತಿಯನ್ನ ನೋಂದಾಯಿಸಲಾಗಿದೆ. ಆದ್ರೆ ಬಳಷ್ಟು ಅಧಿಕಾರಿ/ಸಿಬ್ಬಂದಿಗಳು ಈ ತಂತ್ರಾಂಶವನ್ನ (App) ನಿರಂತರವಾಗಿ ಬಳಸುತ್ತಿಲ್ಲದಿರುವುದು ಕಂಡುಬಂದಿದೆ. ಆದ್ದರಿಂದ ಈ ನಿರ್ದೇಶನ ತಪ್ಪದೇ ಪಾಲಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ಡಿಕೆಶಿ ನೇತೃತ್ವದ ಸರ್ಕಾರ ಫಸ್ಟ್ ಬಾಲಿಗೆ ಸಿಕ್ಸ್ ಹೊಡೆದು ಹಿಟ್ ವಿಕೆಟ್ ಆಗಿದೆ: ಸಿ.ಟಿ ರವಿ ವ್ಯಂಗ್ಯ

ಸರ್ಕಾರದ ನಿರ್ದೇಶನವೇನು?:  ಎಲ್ಲ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳು ಸೇರಿದಂತೆ ಎಲ್ಲ ಅಧಿಕಾರಿಗಳು (Government Officials) ಹಾಗೂ ಸಿಬ್ಬಂದಿ ಬೆಳಗ್ಗೆ 10 ಗಂಟೆಗೆ ʻಕರ್ತವ್ಯ ಆ್ಯಪ್ʼ ನಲ್ಲಿ ಹಾಜರಾತಿಯನ್ನು Check In ನಲ್ಲಿ ಹಾಗೂ ಕಚೇರಿಯಿಂದ ನಿರ್ಗಮಿಸುವಾಗ Check Out ನಲ್ಲಿ ಕರ್ತವ್ಯ (KAAMS) ಆ್ಯಪ್ ಬಳಸುವ ವಿಧಾನಗಳನ್ನ ವೀಕ್ಷಣೆ ಮಾಡಬೇಕು.

* ಇ-ಆಡಳಿತ ಇಲಾಖೆಯು ಪ್ರತಿದಿನ ಬೆಳಗ್ಗೆ 10 ಗಂಟೆಗೆ ಹಾಜರಾತಿ ದಾಖಲಿಸಿದ ಅಧಿಕಾರಿ ಮತ್ತು ಸಿಬ್ಬಂದಿ ಜಿಲ್ಲಾವಾರು ಹಾಗೂ ಕಚೇರಿವಾರು ಮಾಹಿತಿಯನ್ನು AI (ಕೃತಕ ಬುದ್ಧಿಮತ್ತೆ) ಆ್ಯಪ್ ಮೂಲಕ ಆಯಾ ಇಲಾಖಾ ಮುಖ್ಯಸ್ಥರಿಗೆ ಸ್ವಯಂಚಾಲಿತವಾಗಿ ವರದಿ ಕಳುಹಿಸುವಂತೆ ನಿರ್ದೇಶನ ನೀಡಿದ್ದಾರೆ.

ಈಗಾಗಲೇ ಶಿಕ್ಷಣ ಇಲಾಖೆಯು ನೂತನ ತಂತ್ರಜ್ಞಾನವುಳ್ಳ ಆ್ಯಪ್‌ ಆಧರಿತ ಹಾಜರಾತಿ ನಿರ್ವಹಣೆ ಅಳವಡಿಸಿಕೊಂಡಿದೆ. ಇದೀಗ ರಾಜ್ಯ ಸರ್ಕಾರ ಎಲ್ಲ ಇಲಾಖೆಗಳಿಗೂ ಈ ವ್ಯವಸ್ಥೆಯನ್ನು ವಿಸ್ತರಣೆ ಮಾಡಿ ಇದನ್ನು ಕಂಡಾಯವಾಗಿ ಪಾಲಿಸಬೇಕು ಎಂದು ಆದೇಶ ಹೊರಡಿಸಲಾಗಿದೆ.

Deva
the authorDeva

Leave a Reply

error: Content is protected !!
Latest news
ರೈತರಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಒದಗಿಸುವ ದೃಷ್ಟಿಯಿಂದ ಮಾವು-ಹಲಸು ಮೇಳ: ಸಚಿವ ಮುನಿಯಪ್ಪ ಕುಣಿಹಳ್ಳಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ಗಿಡ ನೆಟ್ಟು ಪರಿಸರ ಜಾಗೃತಿ ವಿದೇಶದಲ್ಲಿ ಕನ್ನಡ ಕಲಿಕೆ: ‘ಕರ್ನಾಟಕ ಸಂಘ ಕತಾರ್’ನ ಅಧ್ಯಕ್ಷ ಸುಬ್ರಮಣ್ಯ ಅಭಯ KARNATAKA- ಸರ್ಕಾರಿ ನೌಕರರಿಗೆ ಇನ್ನು ಮುಂದೆ ಬಯೋಮೆಟ್ರಿಕ್‌ ಬದಲಿಗೆ AI ಜಿಪಿಎಸ್‌ ಆಧರಿತ ಹಾಜರಾತಿ ಕಡ್ಡಾಯ: ಸಿಎಸ್‌... ಸಚಿವ ಸ್ಥಾನಕ್ಕೆ ಅಧಿಕೃತ ರಾಜೀನಾಮೆ ಕೊಟ್ಟ ರಾಮಲಿಂಗಾರೆಡ್ಡಿ: ಸಿಎಂ ಡಿಕೆಶಿ ಕೊಟ್ಟ ಮಾತು ತಪ್ಪಿದ್ದಕ್ಕೆ ಈ ನಿರ್ಧಾರ ಎ... KSRTC ನಾಲ್ಕೂ ಸಾರಿಗೆ ನಿಗಮಗಳಿಗೆ ಶಕ್ತಿ ಯೋಜನೆಯಡಿ ಮೇ, ಜೂನ್‌ ತಿಂಗಳುಗಳ 860 ಕೋಟಿ ರೂ. ಅನುದಾನ ಬಿಡುಗಡೆ KKRTC: ಪ್ರತಿ ತಿಂಗಳು 1ರಂದೇ ವೇತನ ಆಗುತ್ತಿತ್ತು- ಈ ಬಾರಿ ಮೇ ತಿಂಗಳ ವೇತನ ಇನ್ನೂ ಆಗಿಲ್ಲ, ಗೊಂದಲದಲ್ಲಿ ನೌಕರರು! ರಾಜ್ಯದ ಎಲ್ಲ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳಿಗೂ ಉಚಿತ ಬಸ್‌ಪಾಸ್‌: ಹೊರಬಿದ್ದ ಸರ್ಕಾರದ ಅಧಿಕೃತ ಆದೇಶ ಕೊಟ್ಟ ಮಾತು ತಪ್ಪಿದ ಸಿಎಂ ಡಿಕೆಶಿ: ಅಸಮಾಧಾನಗೊಂಡ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ! ಸರ್ಕಾರದ 2 ಸಾವಿರ ರೂ. ಪಡೆಯಲು ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್‌ ಕಡ್ಡಾಯ