NEWSನಮ್ಮರಾಜ್ಯರಾಜಕೀಯ

ರಾಜ್ಯದ 27 ಗ್ರಾಮ ಪಂಚಾಯಿತಿಗಳಲ್ಲಿ ಚುನಾವಣೆ ನಡೆಯಲ್ಲ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇದೇ ಡಿ. 22 ಮತ್ತು 27 ರಂದು, ಎರಡು ಹಂತಗಳಲ್ಲಿ ನಡೆಸಲು ಉದ್ದೇಶಿಸಿರುವ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಕೆಲ ಗ್ರಾಪಂಗಳು ನಗರ ಸ್ಥಳೀಯ ಸಂಸ್ಥೆಗಳಾಗಿ ಪರಿವರ್ತಿತವಾಗಿರುವ ಹಿನ್ನೆಲೆ ಅಂಥ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸದಿರಲು ರಾಜ್ಯ ಚುನಾವಣಾ ಆಯೋಗ ತೀರ್ಮಾನಿಸಿದೆ.

ರಾಜ್ಯದ ಒಟ್ಟು 26 ಗ್ರಾಮ ಪಂಚಾಯಿತಿಗಳಿಗೆ ಈ ಚುನಾವಣೆ ನಡೆಸದಿರಲು ಆಯೋಗ ತೀರ್ಮಾನಿಸಿದ್ದು, ಇದಲ್ಲದೆ ಉಡುಪಿ ಜಿಲ್ಲೆ ಕುಂದಾಪುರದ ಗ್ರಾಮವೊಂದರ ವಿಚಾರ ವಿವಾದದ ವಿಚಾರಣೆ ನಡೆಯುತ್ತಿರುವ ಕಾರಣ ಆ ಗ್ರಾಮ ಪಂಚಾಯತಿಗೂ ಸಹ ಚುನಾವಣೆ ನಡೆಯುವುದಿಲ್ಲ. ಹಾಗಾಗಿ ರಾಜ್ಯದ 5,762 ಗ್ರಾಪಂಗಳ ಪೈಕಿ 5,735 ಗ್ರಾಮ ಪಂಚಾಯಿತಿಗಳಿಗೆ ಮಾತ್ರ ಚುನಾವಣೆ ನಡೆಯಲಿದೆ.

ಕುಂದಾಪುರ ತಾಲೂಕಿನ ಹೊಸಾಡು ಗ್ರಾಮ ಪಂಚಾಯಿತಿಗೆ ಸೇನಾಪುರ ಗ್ರಾಮವನ್ನು ಸೇರಿಸಿರುವುದನ್ನು ಪ್ರಶ್ನಿಸಿ ಪ್ರಾದೇಶಿಕ ಆಯುಕ್ತರಿಗೆ ಮೇಲ್ಮನವಿ ಸಲ್ಲಿಕೆಯಾಗಿರುವ ಕಾರಣ ಈ ಸಂಬಂಧ ವಿಚಾರಣೆ ನಡೆಯುತ್ತಿದೆ. ಅದರಿಂದಾಗಿ ಹೊಸಾಡು ಗ್ರಾಮ ಪಂಚಾಯಿತಿ ಚುನಾವಣೆ ಇರುವುದಿಲ್ಲ.

ಚುನಾವಣೆ ಇಲ್ಲದ ಗ್ರಾಪಂಗಳು
ಬೆಂಗಳೂರು ಉತ್ತರ ತಾಲೂಕಿನ ಸೋಮಶೆಟ್ಟಿಹಳ್ಳಿ, ಚಿಕ್ಕಬಾಣವಾರ, ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲೀಪುರ, ಯಲಹಂಕ ತಾಲೂಕಿನ ಹುಣಸಮಾರನಹಳ್ಳಿ, ಸೊಣ್ಣಪ್ಪನಹಳ್ಳಿ, ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ, ಬೆಳಗಾವಿ ಜಿಲ್ಲೆ ಯರಗಟ್ಟಿ ತಾಲೂಕಿನ ಯರಗಟ್ಟಿ, ಅಥಣಿ ತಾಲೂಕಿನ ಕಾಗವಾಡ, ಬೆಳಗಾವಿ ತಾಲೂಕಿನ ಮಚ್ಚೆ ಮತ್ತು ಪೀರನವಾಡಿ, ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ, ಚಿಂಚೋಡಿ, ಕರಡಿಗುಡ್ಡ, ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಎಚ್.ಕಡದಕಟ್ಟೆ, ಹರಿಹರ ತಾಲೂಕಿನ ಗುತ್ತೂರು, ಕೋಲಾರ ತಾಲೂಕಿನ ವೇಮಗಲ್, ಕುರುಗಲ್, ಶೆಟ್ಟಿಹಳ್ಳಿ, ಚೌಡದೇವನಹಳ್ಳಿ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕಿನ್ನಿಗೋಳಿ, ಮನ್ನಬೆಟ್ಟು, ಕಟೀಲು (ಕೊಂಡೆ ಮೂಲ), ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹೊಸಾಡು ಹಾಗೂ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿ (ಗುಳದಕೇರಿ), ಮಂಕಿ-ಎ (ಹಳೆಮರ), ಮಂಕಿ-ಬಿ(ಅನಂತವಾಡಿ), ಮಂಕಿ-ಸಿ(ಚಿತ್ತಾರ) ಗ್ರಾಪಂಗಳಲ್ಲಿ ಚುನಾವಣೆ ನಡೆಯುವುದಿಲ್ಲ ಎಂದು ಆಯೋಗ ತಿಳಿಸಿದೆ.

ಚಿಕ್ಕಮಗಳೂರಿನಲ್ಲಿ ಒಂದೇ ಹಂತದಲ್ಲಿ ಚುನಾವಣೆ
ಚಿಕ್ಕಮಗಳೂರಿನಲ್ಲಿ ಡಿಸೆಂಬರ್ 27ರಿಂದ 29ರವರೆಗೆ ದತ್ತ ಜಯಂತಿ ಆಚರಣೆ ಇರುವ ಕಾರಣ ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ 209 ಗ್ರಾ ಪಂಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ. ಡಿಸೆಂಬರ್ 22ರಂದು ಇಲ್ಲಿ ಚುನಾವಣೆ ನಡೆಯಲಿದೆ. ಇದಕ್ಕೆ ಮುನ್ನ ಜಿಲ್ಲೆಯ 97 ಗ್ರಾಮ ಪಂಚಾಯಿತಿಗಳಿಗೆ ಮೊದಲ ಹಂತ ಹಾಗೂ ಉಳಿದ 112 ಗ್ರಾಮ ಪಂಚಾಯಿತಿಗಳಿಗೆ ಎರಡನೇ ಹಂತದಲ್ಲಿ ಚುನಾವಣೆ ನಡೆಸುವುದಾಗಿ ಆಯೋಗ ಪ್ರಕಟಿಸಿತ್ತು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು