NEWSಕೃಷಿನಮ್ಮರಾಜ್ಯ

ಒಕ್ಕಲಿಗ ಸಮುದಾಯ ಪ್ರತ್ಯೇಕ ರಾಜ್ಯ ಕೇಳಬೇಕಾದೀತು: ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ನಿರಾಕರಿಸಿ ತುಳಿಯುವುದನ್ನು ಮುಂದುವರಿಸಿದರೆ ಒಕ್ಕಲಿಗರು ಹೆಚ್ಚಿನ ಸಂಖ್ಯೆಯಲ್ಲಿರುವ ಜಿಲ್ಲೆಗಳನ್ನು ಸೇರಿಸಿ ಪ್ರತ್ಯೇಕ ರಾಜ್ಯವನ್ನು ಕೇಳಬೇಕಾದೀತು ಎಂದು ಆದಿಚುಂಚನಗಿರಿ ಮೈಸೂರು ಶಾಖಾಮಠದ ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ನಗರದ ಬೋಗಾದಿಯಲ್ಲಿರುವ ಆದಿಚುಂಚನಗಿರಿ ಶಾಖಾಮಠದಲ್ಲಿ ಭಾನುವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಮೈಸೂರು, ಮಂಡ್ಯ, ಹಾಸನ, ಬೆಂಗಳೂರು ಒಳಗೊಂಡಂತೆ ಈ ಭಾಗದಲ್ಲಿ ಒಕ್ಕಲಿಗ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಮೀಸಲಾತಿ ನಿರಾಕರಿಸಿದರೆ ಪ್ರತ್ಯೇಕ ರಾಜ್ಯ ಕೇಳಬೇಕಾದೀತು. ಅದಕ್ಕೆ ಸರ್ಕಾರ ಅವಕಾಶ ನೀಡದಂತೆ ಸಮುದಾಯದವರನ್ನು ಮೇಲೆತ್ತುವ ಕೆಲಸಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಮೈಸೂರು ಮತ್ತು ಚಾಮರಾಜನಗರ ಒಕ್ಕಲಿಗರ ಸಂಘದ ಸಭೆಯಲ್ಲಿ ಜನಸಂಖ್ಯೆ ಆಧರಿಸಿ ಒಕ್ಕಲಿಗರಿಗೆ ಶೇ. 15 ರಷ್ಟು ಮೀಸಲಾತಿ ದೊರಕಿಸಿಕೊಡುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಒಗ್ಗಟ್ಟಾಗಿ ಹೋರಾಟ ನಡೆಸುವ ನಿರ್ಣಯವನ್ನು ತೆಗೆದುಕೊಳ್ಳಲಾಯಿತು.

ಒಕ್ಕಲಿಗ ಸಮಾಜದವರಿಂದಲೇ ಸರ್ಕಾರಕ್ಕೆ ಶೇ. 60 ರಷ್ಟು ಪಾಲು ಸಿಗುತ್ತಿದೆ. ಬೆಂಗಳೂರು ಮತ್ತು ಮೈಸೂರು ಬೆಳೆಯಲು ಒಕ್ಕಲಿಗ ಸಮಾಜದವರು ತಮ್ಮ ಜಮೀನು ನೀಡಿದ್ದಾರೆ. ಇಷ್ಟೆಲ್ಲಾ ಕೊಡುಗೆ ನೀಡಿದರೂ ಸಮುದಾಯಕ್ಕೆ ಶೇ. 4 ರಷ್ಟು ಮಾತ್ರ ಮೀಸಲಾತಿ ಸಿಗುತ್ತಿದೆ. ಈ ಅನ್ಯಾಯದ ಬಗ್ಗೆ ಸರ್ಕಾರ ಗಮನಹರಿಸಬೇಕು ಎಂದರು.

ಶಾಸಕರಾದ ಜಿ.ಟಿ.ದೇವೇಗೌಡ, ಶಾಸಕ ಎಲ್‌.ನಾಗೇಂದ್ರ, ಕಾಂಗ್ರೆಸ್ ಮುಖಂಡ ವಾಸು, ಹರೀಶ್‌ ಗೌಡ, ಪ್ರಶಾಂತ್‌ ಗೌಡ, ಒಕ್ಕಲಿಗರ ಸಂಘದ ಅಧ್ಯಕ್ಷ ಜಿ.ಮಂಜು, ಗೌರವಾಧ್ಯಕ್ಷ ಜಿ.ಕುಮಾರಗೌಡ, ಪ್ರಧಾನ ಕಾರ್ಯದರ್ಶಿ ಬಿ.ಪಿ.ಬೋರೇಗೌಡ, ಬಿಜೆಪಿ ಮುಖಂಡ ಸಂದೇಶ್‌ ಸ್ವಾಮಿ, ಮುಖಂಡರಾದ ಜಯರಾಂ, ನಂಜಯ್ಯ, ಚಂದ್ರೇಗೌಡ, ಮುಕುಂದ, ಸುರೇಶ್‌ ಸೇರಿ ಹಲವರು ಭಾಗವಹಿಸಿದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು