NEWSಕೃಷಿನಮ್ಮಜಿಲ್ಲೆ

ಪರಿಸರ ಸಂರಕ್ಷಣೆ ನಮ್ಮ ಜೀವನದ ಅವಿಭಾಜ್ಯ ಅಂಗ: ನೈರ್ಮಲ್ಯ ಇಲಾಖೆ ಆಯುಕ್ತೆ ಫೌಜಿಯಾ

ಪ್ರತಿಯೊಬ್ಬರು ಪರಿಸರ ಸ್ನೇಹಿ ಅಭ್ಯಾಸಗಳನ್ನು ಅಳವಡಿಸಿಕೊಂಡು ಸ್ವಚ್ಛ ಮತ್ತು ಸಮೃದ್ಧ ಪರಿಸರ ನಿರ್ಮಾಣಕ್ಕೆ ಕೈಜೋಡಿಸುವ ಮೂಲಕ ಅರ್ಥಪೂರ್ಣವಾಗಿ ಪರಿಸರ ದಿನಾಚರಣೆಯನ್ನು ಆಚರಿಸೋಣ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಮ್ಮ ಪರಿಸರವನ್ನು ಸಂರಕ್ಷಿಸುವುದು ಮತ್ತು ಸ್ವಚ್ಛವಾಗಿಡುವುದು ಕೇವಲ ಒಂದು ದಿನದ ಕೆಲಸವಲ್ಲ. ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತೆ ಬಿ. ಫೌಜಿಯಾ ತರನ್ನುಮ್ ಹೇಳಿದರು.

ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರತಿಯೊಬ್ಬರು ಪರಿಸರ ಸ್ನೇಹಿ ಅಭ್ಯಾಸಗಳನ್ನು ಅಳವಡಿಸಿಕೊಂಡು ಸ್ವಚ್ಛ ಮತ್ತು ಸಮೃದ್ಧ ಪರಿಸರ ನಿರ್ಮಾಣಕ್ಕೆ ಕೈಜೋಡಿಸುವ ಮೂಲಕ ಅರ್ಥಪೂರ್ಣವಾಗಿ ಪರಿಸರ ದಿನಾಚರಣೆಯನ್ನು ಆಚರಿಸೋಣ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಡಾ. ವಾಸಂತಿ ಅಮರ್ ಮಾತನಾಡಿ, ಈ ಬಾರಿ “ಪ್ರಕೃತಿಯಿಂದ ಪ್ರೇರಣೆ, ಹವಾಮಾನಕ್ಕಾಗಿ, ನಮ್ಮ ಭವಿಷ್ಯಕ್ಕಾಗಿ.” ಎಂಬ ಘೋಷ ವಾಕ್ಯದೊಂದಿಗೆ ಹವಾಮಾನ ಬದಲಾವಣೆಯ ವಿರುದ್ಧದ ಹೋರಾಟಕ್ಕೆ ಅತ್ಯುತ್ತಮ ಪರಿಹಾರಗಳನ್ನು ನೀಡುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಿವಕುಮಾರ್, ಯೋಜನಾಧಿಕಾರಿ ವಿಠ್ಠಲ್ ಕಾವ್ಳೆ, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ತಾಲೂಕು ಪಂಚಾಯಿತಿ ಇಒ ಎನ್. ಮುನಿರಾಜು, ಮಾಜಿ ಸದಸ್ಯರಾದ ಕೆ.ವಿ.ಸ್ವಾಮಿ, ಕ್ಯಾತೇಗೌಡ, ವಿ.ನಾರಾಯಣಸ್ವಾಮಿ, ಅರಣ್ಯ ಉಪ ನಿರ್ದೇಶಕರು, ಕಾರ್ಯಪಾಲಕ ಅಧಿಕಾರಿ ಅಭಿಯಂತರರು, ಪಿಡಿಒ ಕುಮಾರ್, ಕಾರ್ಯದರ್ಶಿ ನರೇಶ್, ಸಮಾಜ ಸೇವಕ ಎನ್.ಸಿ.ಪ್ರಕಾಶ್, ಗ್ರಾಪಂ ಮಾಜಿ ಸದಸ್ಯರು, ಮುಖಂಡರು, ವಸತಿ ಶಾಲೆ ಮಕ್ಕಳು ಹಾಗೂ ಗ್ರಾಮಸ್ಥರು ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

Deva
the authorDeva

Leave a Reply

error: Content is protected !!
Latest news
ರಾಮಲಿಂಗಾರೆಡ್ಡಿ: ರಾಜೀನಾಮೆ ವಾಪಸ್‌ -ಡಿಕೆಶಿ ಸರ್ಕಾರದಲ್ಲಿದ್ದ ಭಿನ್ನಮತ ಶಮನ ಸರ್ಕಾರದ ಮಹತ್ವಾಕಾಂಕ್ಷಿ ಭೂ ಗ್ಯಾರಂಟಿ ಯೋಜನೆಯ "ನನ್ನ ಇ-ಖಾತಾ ನನ್ನ ಹಕ್ಕು" ಅಭಿಯಾನಕ್ಕೆ ಉತ್ತಮ ಸ್ಪಂದನೆ ಪಾರ್ಕ್‌ಗಳ ನಡಿಗೆದಾರರ ಸ್ನೇಹಿಯನ್ನಾಗಿ ರೂಪಿಸಿ: ನೂತನ ಆಯುಕ್ತ ಜಗದೀಶ್ ಕರೆ 100 ವರ್ಷವಾದರೂ ಸಾಧನೆಗಳ ಮೂಲಕ ಅರಸು ಜೀವಂತ: ಸಿಎಂ ಡಿ.ಕೆ.ಶಿವಕುಮಾರ್‌ ಪರಿಸರ ಸಂರಕ್ಷಣೆ ನಮ್ಮ ಜೀವನದ ಅವಿಭಾಜ್ಯ ಅಂಗ: ನೈರ್ಮಲ್ಯ ಇಲಾಖೆ ಆಯುಕ್ತೆ ಫೌಜಿಯಾ ನಾಳೆ ಇಪಿಎಸ್-95, BMTC-KSRTC ನಿವೃತ್ತ ನೌಕರರ ಸಂಘದ 101ನೇ ಮಾಸಿಕ ಸಭೆ ಸಾರಿಗೆ ನೌಕರರ ವೇತನ ಹೆಚ್ಚಳ ವಿಷಯ: ಜೂ.23ರ ಕೋರ್ಟ್ ವಿಚಾರಣೆಯತ್ತ ಎಲ್ಲರ ಚಿತ್ತ ರೈತರಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಒದಗಿಸುವ ದೃಷ್ಟಿಯಿಂದ ಮಾವು-ಹಲಸು ಮೇಳ: ಸಚಿವ ಮುನಿಯಪ್ಪ ಕುಣಿಹಳ್ಳಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ಗಿಡ ನೆಟ್ಟು ಪರಿಸರ ಜಾಗೃತಿ ವಿದೇಶದಲ್ಲಿ ಕನ್ನಡ ಕಲಿಕೆ: ‘ಕರ್ನಾಟಕ ಸಂಘ ಕತಾರ್’ನ ಅಧ್ಯಕ್ಷ ಸುಬ್ರಮಣ್ಯ ಅಭಯ