NEWSನಮ್ಮರಾಜ್ಯರಾಜಕೀಯ

ಕುಮಾರಸ್ವಾಮಿಗೆ ಒಳ್ಳೆ ಇಮೇಜ್ ಇಲ್ಲ: ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾಂಗ್ರೆಸ್​-ಜೆಡಿಎಸ್​ ಸಮ್ಮಿಶ್ರ ಸರ್ಕಾರ ಹೋಗಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾಗಿದೆ. ಆದರೂ ಕಾಂಗ್ರೆಸ್ ಮತ್ತು ಜೆಡಿಎಸ್​ ನಾಯಕರ ನಡುವಿನ ವಾಕ್ಸಮರ ಮಾತ್ರ ಇನ್ನೂ ಮುಗಿಯುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ.

ಮಾಜಿ ಸಿಎಂ ಕುಮಾರಸ್ವಾಮಿ ಆಗಿಂದಾಗ್ಗೆ ತಮ್ಮ ಸಮ್ಮಿಶ್ರ ಸರ್ಕಾರ ಕುಸಿಯಲು ಸಿದ್ದರಾಮಯ್ಯನವರೇ ಕಾರಣ ಎಂದು ಈವರೆಗೆ ಹಲವು ಬಾರಿ ಕಟುವಾದ ಮಾತುಗಳಿಂದ ಕುಟುಕಿದ್ದಾರೆ. ಆದರೆ, ಅವರಿಗೆ ಸಿದ್ದರಾಮಯ್ಯ ಅವರು ಕೌಂಟರ್‌ ಕೊಡುತ್ತಲೇ ಬಂದಿದ್ದಾರೆ.

ಇಲ್ಲಿ ಕಾಂಗ್ರೆಸ್‌ ಪಕ್ಷ ಎನ್ನುವುದಕ್ಕಿಂತ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಅವರ ನಡುವೆ ಮುಸುಕಿನ ಮತ್ತು ಬಹಿರಂಗವಾದ ರಾಜಕೀಯ ಕುಸ್ತಿಯೇ ಎಂದು ಹೇಳಬಹುದು. ಇನ್ನು ಜೆಡಿಎಸ್ ನವರ ರಾಜಕೀಯ ವಿರೋಧಿ ಕಾಂಗ್ರೆಸ್ ಪಕ್ಷವೇ ಹೊರತು ಬಿಜೆಪಿ ಅಲ್ಲ. ಅವರು ಬಿಜೆಪಿ ಬಗ್ಗೆ ಸದಾ ಮೃದು ಧೋರಣೆ ಹೊಂದಿದ್ದಾರೆ. ಹೀಗಾಗಿ ಜೆಡಿಎಸ್​ ಪಕ್ಷ ಬಿಜೆಪಿಯ ‘ಬಿ ಟೀಮ್’ ಎಂದು ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಾಗ ಸರ್ಕಾರ ರಚನೆ ಮಾಡುವಂತೆ ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡಿದ್ದು, ಅವರೊಂದಿಗೆ ಮೊದಲ ಸುತ್ತಿನ ಮಾತುಕತೆ ಮಾಡಿದ್ದು ಕಾಂಗ್ರೆಸ್ ಹೈಕಮಾಂಡ್, ನಾನಲ್ಲ. 37 ಸ್ಥಾನ ಗೆದ್ದವರಿಗೆ ಮುಖ್ಯಮಂತ್ರಿ ಹುದ್ದೆ ನೀಡಿದ್ದರು, ಇದರಲ್ಲಿ ಟ್ರ್ಯಾಪಿಂಗ್ ಎಲ್ಲಿಂದ ಬಂತು ಎಂದು ಪ್ರಶ್ನಿಸಿದ್ದಾರೆ.

ಜೆಡಿಎಸ್ ನವರು ಬಿಜೆಪಿ ಬಗ್ಗೆ ಸದಾ ಮೃದು ಧೋರಣೆ ಹೊಂದಿದ್ದಾರೆ. ಮೊನ್ನೆ ಕುಮಾರಸ್ವಾಮಿ ಅವರು ತಾವು ಬಿಜೆಪಿಗೆ ಹೋಗಿದ್ದರೆ 5 ವರ್ಷ ಮುಖ್ಯಮಂತ್ರಿ ಆಗಿರುತ್ತಿದ್ದೆ ಎಂದು ಹೇಳಿರುವುದೇ ಇದಕ್ಕೆ ಸಾಕ್ಷಿ. ಇದೇ ಕಾರಣಕ್ಕೆ ಜೆಡಿಎಸ್ ಅನ್ನು ಬಿಜೆಪಿಯ ಬಿ ಟೀಮ್ ಎನ್ನುವುದು ಎಂದು ಹೇಳಿದ್ದಾರೆ.

ಇನ್ನು 2004ರಲ್ಲಿ ನಾನು ಜೆಡಿಎಸ್ ನಲ್ಲಿದ್ದಾಗ ಜಿಡಿಎಸ್ 59 ಸ್ಥಾನಗಳನ್ನು ಗೆದ್ದಿತ್ತು, ನನ್ನನ್ನು ಪಕ್ಷದಿಂದ ವಜಾಗೊಳಿಸಿದ ನಂತರದ ಚುನಾವಣೆಯಲ್ಲಿ 28 ಸ್ಥಾನ, 2013 ರ ಚುನಾವಣೆಯಲ್ಲಿ 40 ಸ್ಥಾನ, ಕಳೆದ ಚುನಾವಣೆಯಲ್ಲಿ 37 ಸ್ಥಾನ ಗೆದ್ದಿತ್ತು. ಕುಮಾರಸ್ವಾಮಿ ಜನರ ಬಳಿ ಗೌರವ ಉಳಿಸಿಕೊಂಡಿದ್ದರೆ 59 ರಿಂದ 28 ಸ್ಥಾನಕ್ಕೆ ಬರುತ್ತಿತ್ತೇ ಎಂದು ಪ್ರಶ್ನಿಸಿದ್ದಾರೆ.

ಸಮ್ಮಿಶ್ರ ಸರ್ಕಾರ ಬಂದಮೇಲೆ ತನ್ನ ಗೌರವ ಹಾಳಾಯ್ತು ಎಂಬ ಕುಮಾರಸ್ವಾಮಿಯವರ ಹೇಳಿಕೆ ಹಾಸ್ಯಾಸ್ಪದವಾಗಿದೆ. ಕುಮಾರಸ್ವಾಮಿಗೆ ಒಳ್ಳೆ ಇಮೇಜ್ ಇದ್ದದ್ದೇ ಆದರೆ ಹಿಂದಿನ ಚುನಾವಣೆಗಳಲ್ಲಿ ಜೆಡಿಎಸ್ ಪಕ್ಷ ಗೆಲ್ಲುವ ಸ್ಥಾನಗಳ ಸಂಖ್ಯೆ ಏರಿಕೆಯಾಗುತ್ತಿತ್ತೇ ಹೊರತು ಕಡಿಮೆಯಾಗುತ್ತಿರಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ವಿಧಾನ ಪರಿಷತ್ ಸಭಾಪತಿಗಳ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಕ್ಕೆ ಸರ್ಕಾರ ನಿರ್ಧರಿಸಿದೆ. ನಮ್ಮದು ಜಾತ್ಯತೀತ ಪಕ್ಷ ಎನ್ನುವ ಜೆಡಿಎಸ್ ಕೋಮುವಾದಿಗಳ ಪರವಾಗಿ ಮತ ಚಲಾಯಿಸುತ್ತದೋ, ವಿರುದ್ಧವಾಗಿ ಮತ ಚಲಾಯಿಸುತ್ತದೋ ಎಂಬುದನ್ನು ನೋಡಲು ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿಯವರಿಗೆ ಈಗಲೇ ರಾಜೀನಾಮೆ ನೀಡದಂತೆ ಹೇಳಿದ್ದೇನೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು