NEWSನಮ್ಮರಾಜ್ಯರಾಜಕೀಯ

ರಾಮಲಿಂಗಾರೆಡ್ಡಿ: ರಾಜೀನಾಮೆ ವಾಪಸ್‌ -ಡಿಕೆಶಿ ಸರ್ಕಾರದಲ್ಲಿದ್ದ ಭಿನ್ನಮತ ಶಮನ

ನಾನಾಗಿ ಯಾವ ಖಾತೆಯನ್ನೂ ಕೇಳಿಲ್ಲ. ಖಾತೆ ವಿಷಯವನ್ನು ಮುಖ್ಯಮಂತ್ರಿಗಳು ಹಾಗೂ ಹೈಕಮಾಂಡ್ ನಾಯಕರು ನೋಡಿಕೊಳ್ಳುತ್ತಾರೆ. ಸದ್ಯಕ್ಕೆ ಎಲ್ಲ ಗೊಂದಲಗಳೂ ಬಗೆಹರಿದಿವೆ -ರಾಮಲಿಂಗಾರೆಡ್ಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾಂಗ್ರೆಸ್‌ ಹೈಕಮಾಂಡ್‌ ಮನವೊಲಿಕೆ ಬಳಿಕ ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ರಾಮಲಿಂಗಾರೆಡ್ಡಿ ಅವರು ವಾಪಸ್‌ ಪಡೆಯುವ ಮೂಲಕ ಕೊಟ್ಟಿರುವ ಖಾತೆಯನ್ನೇ ನಿಭಾಯಿಸುವ ಸೂಚನೆ ನೀಡಿದ್ದಾರೆ.

ಸದ್ಯ ಇದು ಖಾತೆ ಹಂಚಿಕೆ ವಿಷಯವಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಉಂಟಾಗಿದ್ದ ಗೊಂದಲ, ಭಿನ್ನಮತ ಶಮನಗೊಂಡಂತಿದೆ.

ಜಲಸಂಪನ್ಮೂಲ ಖಾತೆ ನೀಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡಿದ್ದ ಸಚಿವ ರಾಮಲಿಂಗಾರೆಡ್ಡಿ ಕಾಂಗ್ರೆಸ್ ಹೈಕಮಾಂಡ್ ನಾಯಕರ ಮನವೊಲಿಕೆ, ಸಂಧಾನದ ಬಳಿಕ ರಾಜಿನಾಮೆ ವಾಪಸ್ ಪಡೆದಿದ್ದಾರೆ.

ಹೈಕಮಾಂಡ್ ನಾಯಕ ರಣ್‌ದೀಪ್ ಸುರ್ಜೆವಾಲ ಅವರೊಂದಿಗೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾರೆಡ್ಡಿ, ನಿನ್ನೆ ಸಿಎಂ ಜತೆ ಎಲ್ಲ ಮಾತನಾಡಿದ್ದೇನೆ. ಅವರು ನಾನು ರಾಜೀನಾಮೆ ಸ್ವೀಕರಿಸುವುದಿಲ್ಲ ಎಂದು ಹೇಳಿದ್ದಾರೆ, ಅಂದಮೇಲೆ ಅದು ವಾಪಸ್ ಅಂತಾನೆ ಅರ್ಥ. ಸದ್ಯಕ್ಕೆ ಯಾವ ಗೊಂದಲವೂ ಇಲ್ಲ ಎಂದು ತಿಳಿಸಿದರು.

ನಾನಾಗಿ ಯಾವ ಖಾತೆಯನ್ನೂ ಕೇಳಿಲ್ಲ. ಖಾತೆ ವಿಷಯವನ್ನು ಮುಖ್ಯಮಂತ್ರಿಗಳು ಹಾಗೂ ಹೈಕಮಾಂಡ್ ನಾಯಕರು ನೋಡಿಕೊಳ್ಳುತ್ತಾರೆ. ಸದ್ಯಕ್ಕೆ ಎಲ್ಲ ಗೊಂದಲಗಳೂ ಬಗೆಹರಿದಿವೆ ಎಂದು ಸಚಿವರು ಇದೇ ವೇಳೆ ತಿಳಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
ರಾಮಲಿಂಗಾರೆಡ್ಡಿ: ರಾಜೀನಾಮೆ ವಾಪಸ್‌ -ಡಿಕೆಶಿ ಸರ್ಕಾರದಲ್ಲಿದ್ದ ಭಿನ್ನಮತ ಶಮನ ಸರ್ಕಾರದ ಮಹತ್ವಾಕಾಂಕ್ಷಿ ಭೂ ಗ್ಯಾರಂಟಿ ಯೋಜನೆಯ "ನನ್ನ ಇ-ಖಾತಾ ನನ್ನ ಹಕ್ಕು" ಅಭಿಯಾನಕ್ಕೆ ಉತ್ತಮ ಸ್ಪಂದನೆ ಪಾರ್ಕ್‌ಗಳ ನಡಿಗೆದಾರರ ಸ್ನೇಹಿಯನ್ನಾಗಿ ರೂಪಿಸಿ: ನೂತನ ಆಯುಕ್ತ ಜಗದೀಶ್ ಕರೆ 100 ವರ್ಷವಾದರೂ ಸಾಧನೆಗಳ ಮೂಲಕ ಅರಸು ಜೀವಂತ: ಸಿಎಂ ಡಿ.ಕೆ.ಶಿವಕುಮಾರ್‌ ಪರಿಸರ ಸಂರಕ್ಷಣೆ ನಮ್ಮ ಜೀವನದ ಅವಿಭಾಜ್ಯ ಅಂಗ: ನೈರ್ಮಲ್ಯ ಇಲಾಖೆ ಆಯುಕ್ತೆ ಫೌಜಿಯಾ ನಾಳೆ ಇಪಿಎಸ್-95, BMTC-KSRTC ನಿವೃತ್ತ ನೌಕರರ ಸಂಘದ 101ನೇ ಮಾಸಿಕ ಸಭೆ ಸಾರಿಗೆ ನೌಕರರ ವೇತನ ಹೆಚ್ಚಳ ವಿಷಯ: ಜೂ.23ರ ಕೋರ್ಟ್ ವಿಚಾರಣೆಯತ್ತ ಎಲ್ಲರ ಚಿತ್ತ ರೈತರಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಒದಗಿಸುವ ದೃಷ್ಟಿಯಿಂದ ಮಾವು-ಹಲಸು ಮೇಳ: ಸಚಿವ ಮುನಿಯಪ್ಪ ಕುಣಿಹಳ್ಳಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ಗಿಡ ನೆಟ್ಟು ಪರಿಸರ ಜಾಗೃತಿ ವಿದೇಶದಲ್ಲಿ ಕನ್ನಡ ಕಲಿಕೆ: ‘ಕರ್ನಾಟಕ ಸಂಘ ಕತಾರ್’ನ ಅಧ್ಯಕ್ಷ ಸುಬ್ರಮಣ್ಯ ಅಭಯ