NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಮೂರು ವರ್ಷಕ್ಕೂ ಹೆಚ್ಚುಕಾಲ ಒಂದೇ ಕಡೆ ಬೇರುಬಿಟ್ಟಿರುವ ನೌಕರರ ವರ್ಗಾವಣೆಗೆ ಆದೇಶ

ಕೆಎಸ್‌ಆರ್‌ಟಿಸಿ ನಿಗಮದ ವಿಭಾಗ/ ಘಟಕಗಳಲ್ಲಿ ಹಲವು ಸಿಬ್ಬಂದಿ ಮೂರು ವರ್ಷಗಳಿಗಿಂತ ಹೆಚ್ಚಿನ ಅವಧಿ ಒಂದೇ ಕಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕುರಿತು ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಸರ್ಕಾರ ಆದೇಶ ನೀಡಿದೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ಆಡಳಿತಕ್ಕೆ ವೇಗ ನೀಡುವ ಉದ್ದೇಶದೊಂದಿಗೆ ಒಂದೇ ಕಡೆ ಮೂರು ಅಥವಾ ಮೂರು ವರ್ಷಕ್ಕೂ ಹೆಚ್ಚಿನ ಅವಧಿವರೆಗೆ ಕರ್ತವ್ಯ ನಿರ್ವಹಿ ಸುತ್ತಿರುವ ಅಧಿಕಾರಿಗಳು/ ನೌಕರರ ಎತ್ತಗಂಡಿ ಮಾಡಬೇಕು ಎಂದು ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.

ಒಂದೇ ಕಡೆ 3 ವರ್ಷಗಳಿಗಿಂತ ಹೆಚ್ಚಿನ ಅವಧಿಯವರೆಗೆ ಕರ್ತವ್ಯ ನಿರ್ವಹಿ ಸುತ್ತಿರುವ ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ಕ್ರಮ ಕೈಗೊಳ್ಳುವಂತೆ ಎಂಡಿ ಅಕ್ರಮ್‌ ಪಾಷಾ ಅವರಿಗೆ ಸಾರಿಗೆ ಇಲಾಖೆ ಕಾರ್ಯದರ್ಶಿ ತಿಳಿಸಿದ್ದಾರೆ.

ಕೆಎಸ್‌ಆರ್‌ಟಿಸಿ ನಿಗಮದ ವಿಭಾಗ/ ಘಟಕಗಳಲ್ಲಿ ಹಲವು ಸಿಬ್ಬಂದಿ ಮೂರು ವರ್ಷಗಳಿಗಿಂತ ಹೆಚ್ಚಿನ ಅವಧಿ ಒಂದೇ ಕಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕುರಿತು ದೂರುಗಳು ಬಂದಿವೆ.

ಹೀಗಾಗಿ ಆಡಳಿತ ದೃಷ್ಟಿಯಿಂದಾಗಿ ಮೂರು ವರ್ಷಗಳಿಗಿಂತ ಹೆಚ್ಚಿನ ಕಾಲ ಒಂದೇ ಶಾಖೆ ಅಥವಾ ವಿಷಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಕೂಡಲೇ ಬೇರೆ ಕಡೆಗೆ ವರ್ಗಾವಣೆ ಮಾಡಬೇಕು.

ಜತೆಗೆ ನಿಗಮದಲ್ಲಿ ಚಾಲ್ತಿಯಲ್ಲಿರುವ ಸುತ್ತೋಲೆ/ ನಿಯಮಗಳ ಪ್ರಕಾರ ಕ್ರಮ ಕೈಗೊಂಡು ಆಡಳಿತ ವರ್ಗವನ್ನು ಚುರುಕುಗೊಳಿಸಲು ಕ್ರಮ ಕೈಗೊಳ್ಳಬೇಕು ಮತ್ತು ಈ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಸಾರಿಗೆ ಇಲಾಖೆ ಕಾರ್ಯದರ್ಶಿ ನಿರ್ದೇಶನೀಡಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಈ ಆದೇಶ ಹೊರಡಿಸಿದ್ದಾರೆ.

ಅಲ್ಲದೆ ನಿಗಮದ ಎಲ್ಲ ಮುಖ್ಯಸ್ಥರು, ಹಿರಿಯ, ವಿಭಾಗೀಯ ನಿಯಂತ್ರಣಾಧಿಕಾರಿಗಳು, ಕಾರ್ಯ ವ್ಯಸ್ಥಾಪಕರು, ಪ್ರಾಂಶುಪಾಲರು ಕ್ರಮ ಕೈಗೊಂಡು ಎಂಡಿ ಅವರಿಗೆ ವರದಿ ಸಲ್ಲಿಸಬೇಕು. ಬಳಿಕ ಎಂಡಿ ಅಕ್ರಮ್‌ ಪಾಷ ಅವರು ಸರ್ಕಾರಕ್ಕೆ ವರದಿಸಲ್ಲಿಸಲಿದ್ದಾರೆ.

ಸಾರಿಗೆ ನಿಗಮಗಳಲ್ಲಿ ಹಲವು ವರ್ಷಗಳಿಂದ ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಕೆಲ ನೌಕರರಿಗೆ ಮಾನಸಿಕವಾಗಿ ಕಿರುಕುಳ ನೀಡುವುದು ರಜೆ ಕೊಡದೆ ಗೈರುಹಾಜರಿ ತೋರಿಸಿ ವೇತನ ಕಡಿತ ಮಾಡುವುದು ಸೇರಿದಂತೆ ಹಲವು ರೀತಿಯಲ್ಲಿ ಕಿರುಕುಳ ನೀಡುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಹಲವು ನೌಕರರು ದೂರು ಸಲ್ಲಿಸಿದ್ದು, ಆ ದೂರಿನ ಮೇರೆ ಸರ್ಕಾರ ಸಾರಿಗೆ ಇಲಾಖೆಯ ಕಾರ್ಯದರ್ಶಿ ಅವರು ಈ ಆದೇಶ ಮಾಡಿದ್ದು, ಅದನ್ನು ಪಾಲಿಸಲು ಸಂಸ್ಥೆಯ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಮುಂದಾಗಿದ್ದಾರೆ. ಒಟ್ಟಾರೆ ನೌಕರರಿಗೆ ಆಗುತ್ತಿರುವ ಮಾನಸಿಕ ಕಿರುಕುಳ ಇದರಿಂದ ಸ್ವಲ್ಪಮಟ್ಟಿಗಾದರೂ ಕಡಿಮೆ ಆಗಬಹುದು ಅಂಬೋಣ..!

Deva
the authorDeva

Leave a Reply

error: Content is protected !!
Latest news
ನಮ್ಮ ಮೆಟ್ರೋದಲ್ಲಿ ಸಾರ್ವಜನಿಕರೊಂದಿಗೆ ಪ್ರಯಾಣಿಸುವ ಅವಕಾಶ ಸಿಕ್ಕಿತು: ಸಿಎಂ ಡಿಕೆಶಿ ನೂತನ ಸಿಎಂ ಡಿಕೆಶಿಗೆ ಶುಭಾಶಯ ಕೋರಿದ ಮಲೇಷಿಯಾ ಪ್ರಧಾನಿ ಅನ್ವರ್‌ ಇಬ್ರಾಹಿಂ KKRTC: ನೌಕರರ ಮೇ ತಿಂಗಳ ವೇತನ ನಾಳೆ ಆಗುತ್ತದೆ, ಗೊಂದಲ ಬೇಡ: ಸಿಎಒ ಸ್ಪಷ್ಟನೆ KSRTC: ಮೂರು ವರ್ಷಕ್ಕೂ ಹೆಚ್ಚುಕಾಲ ಒಂದೇ ಕಡೆ ಬೇರುಬಿಟ್ಟಿರುವ ನೌಕರರ ವರ್ಗಾವಣೆಗೆ ಆದೇಶ ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕ್‌ ಕೊಟ್ಟ ಕೇಂದ್ರ ಸರ್ಕಾರ: ಗೃಹಬಳಕೆ ಗ್ಯಾಸ್‌ ಸಿಂಡರ್‌ಗೆ 29 ರೂ. ಏರಿಕೆ, ಇಂದಿನಿಂದ... ರಾಮಲಿಂಗಾರೆಡ್ಡಿ: ರಾಜೀನಾಮೆ ವಾಪಸ್‌ -ಡಿಕೆಶಿ ಸರ್ಕಾರದಲ್ಲಿದ್ದ ಭಿನ್ನಮತ ಶಮನ ಸರ್ಕಾರದ ಮಹತ್ವಾಕಾಂಕ್ಷಿ ಭೂ ಗ್ಯಾರಂಟಿ ಯೋಜನೆಯ "ನನ್ನ ಇ-ಖಾತಾ ನನ್ನ ಹಕ್ಕು" ಅಭಿಯಾನಕ್ಕೆ ಉತ್ತಮ ಸ್ಪಂದನೆ ಪಾರ್ಕ್‌ಗಳ ನಡಿಗೆದಾರರ ಸ್ನೇಹಿಯನ್ನಾಗಿ ರೂಪಿಸಿ: ನೂತನ ಆಯುಕ್ತ ಜಗದೀಶ್ ಕರೆ 100 ವರ್ಷವಾದರೂ ಸಾಧನೆಗಳ ಮೂಲಕ ಅರಸು ಜೀವಂತ: ಸಿಎಂ ಡಿ.ಕೆ.ಶಿವಕುಮಾರ್‌ ಪರಿಸರ ಸಂರಕ್ಷಣೆ ನಮ್ಮ ಜೀವನದ ಅವಿಭಾಜ್ಯ ಅಂಗ: ನೈರ್ಮಲ್ಯ ಇಲಾಖೆ ಆಯುಕ್ತೆ ಫೌಜಿಯಾ