ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರ ಪರವಾಗಿದೆ ಯಾವುದೇ ಕಾಋಣಕ್ಕೂ ಅವರಿಗೆ ಮೋಸವಾಗುಂತ ಕಾನೂನನ್ನು ಜಾರಿಗೆ ತಂದಿಲ್ಲ. ಇದನ್ನು ಅರ್ಥ ಮಾಡಿಕೊಳ್ಳಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ನಡೆಯುತ್ತಿರುವ ಭಾರತ ಬಂದ್‌ಗೆ ಕಾಂಗ್ರೆಸ್ ಬೆಂಬಲ ನೀಡುತ್ತಿರುವ ವಿಚಾರ ಕುರಿತು, ಅದು ಮುಳುಗುತ್ತಿರುವ ಹಡಗು ಅದು ಕಪ್ಪುಪಟ್ಟಿಯನ್ನಾದರೂ ಧರಿಸಿ ಅಥವಾ ಬಿಳಿಪಟ್ಟಿಯನ್ನಾದರೂ ಧರಿಸಿ ಪ್ರತಿಭಟನೆ ಮಾಡಲಿ ಅದಕ್ಕೆ ನಾವು ಪ್ರತಿಕ್ರಿಯಿಸಲ್ಲ ಎಂದು ವ್ಯಂಗ್ಯಭರಿತವಾಗಿ ತಿಳಿಸಿದ್ದಾರೆ.
ಇನ್ನು ಭಾರತ ಬಂದ್‌ಗೆ ರಾಜ್ಯದಲ್ಲಿ ಮಾತ್ರವಲ್ಲ ದೇಶದಲ್ಲಿ ಯಾವುದೇ ಎಫೆಕ್ಟ್ ಆಗುತ್ತಿಲ್ಲ ಇದು ಸಂಪೂರ್ಣವಾಗಿ ವಿಫಲವಾಗಿದೆ ಎಂದರು.
ಕೃಷಿ ಕ್ಷೇತ್ರದಲ್ಲಿ ಸುಧಾರಣೆ ತರಲು ಮೋದಿ ಸರ್ಕಾರ ಕೃಷಿ ಮಸೂದೆಗಳನ್ನು ಜಾರಿಗೆ ತಂದಿದೆ. ಕೃಷಿ ಉತ್ಪನ್ನಗಳನ್ನು ಸರ್ಕಾರ ಖರೀದಿಸುವ ಪ್ರಕ್ರಿಯೆ, ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಖಚಿತವಾಗಿ ಮುಂದುವರಿಯಲಿದೆ. ಜತೆಗೆ ರೈತರಿಗೆ ಹೆಚ್ಚಿನ ಅವಕಾಶ, ಆಯ್ಕೆ ಮತ್ತು ಆದಾಯ ಹೆಚ್ಚಿಸಲು ನೂತನ ಕಾಯ್ದೆ ನೆರವಾಗಲಿದೆ ಎಂದು ಹೇಳಿದರು.
ಇನ್ನು ರಾಜಕೀಯ ಅಸ್ತಿತ್ವಕ್ಕಾಗಿ ಕೇಂದ್ರ ಸರ್ಕಾರದ ಕೃಷಿ ಸುಧಾರಣೆಗಳನ್ನು ವಿರೋಧಿಸುತ್ತಿರುವ ಪ್ರತಿಪಕ್ಷಗಳು ಹಿಂದೆ ಅದರ ಪರವಾಗಿದ್ದವು. ಈಗ ಮಸೂದೆ ವಿರುದ್ಧ ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ. ರೈತರಿಗೆ ಆಗುವ ಅನುಕೂಲತೆಗಳನ್ನು ತಪ್ಪಿಸಲು ನಡೆಸುತ್ತಿರುವ ವಿರೋಧವನ್ನು ಒಪ್ಪಲಾಗದು. ಇದರ ವಿರುದ್ಧ ಬಿಜೆಪಿ ಜನಜಾಗೃತಿ ಮೂಡಿಸಲಿದೆ ಎಂದು ಹೇಳಿದರು.
Ayya ayyo bidappa aden kittaktira nodona